Categories: ಮಡಿಕೇರಿ

ಮೋದಿ ಅವರ ‘ಪರೀಕ್ಷಾ ಪೇ ಚರ್ಚಾ’ ಸಂವಾದ ಕಾರ್ಯಕ್ರಮದಲ್ಲಿ ಕೊಡಗಿನ ಪದ್ಮಪ್ರಿಯಾಗೆ ಅವಕಾಶ

ಮಡಿಕೇರಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಏಪ್ರಿಲ್ 1 ರಂದು ಬೆಳಗ್ಗೆ 11 ಗಂಟೆಗೆ ಆನ್’ಲೈನ್/ವರ್ಚುವಲ್ ಮೂಲಕ 5 ನೇ ಆವೃತ್ತಿಯ ‘ಪರೀಕ್ಷಾ ಪೇ ಚರ್ಚಾ’ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ‘ಪರೀಕ್ಷಾ ಪೇ ಚರ್ಚಾ’ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರೊಂದಿಗೆ ಸಂವಾದ ನಡೆಸಲಿದ್ದು, ಕೊಡಗು ಜಿಲ್ಲೆಯ ಕೇಂದ್ರೀಯ ವಿದ್ಯಾಲಯದ ಪದ್ಮಪ್ರಿಯಾ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವಕಾಶ ಪಡೆದಿದ್ದಾರೆ ಎಂದು ಹೇಳಿದರು.

ಪರೀಕ್ಷಾ ಪೇ ಚರ್ಚಾ ಸಂವಾದವು ಬಹು ನಿರೀಕ್ಷಿತ ವಾರ್ಷಿಕ ಕಾರ್ಯಕ್ರಮವಾಗಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪರೀಕ್ಷೆಯ ಒತ್ತಡ ಮತ್ತು ಇತರ ಪ್ರಶ್ನೆಗಳಿಗೆ ನೇರ ಪ್ರಸಾರ ಕಾರ್ಯಕ್ರಮದಲ್ಲಿ ಉತ್ತರಿಸಲಿದ್ದಾರೆ ಎಂದು ಡಾ.ಬಿ.ಸತೀಶ ಅವರು ವಿವರಿಸಿದರು.

ದೇಶದಾದ್ಯಂತ ಪರೀಕ್ಷಾ ಪೇ ಚರ್ಚಾ ಸಂವಾದ ಕಾರ್ಯಕ್ರಮ ಪ್ರಸಾರವಾಗಲಿದ್ದು, ದೂರದರ್ಶನ, ರೇಡಿಯೋ, ಟಿ.ವಿ ಚಾನಲ್‍ಗಳು, ಯೂಟ್ಯೂಬ್ ಚಾನಲ್‍ಗಳು ಸೇರಿದಂತೆ ಡಿಜಿಟಲ್ ಚಾನಲ್‍ಗಳಲ್ಲಿ ಈ ಕಾರ್ಯಕ್ರಮ ವೀಕ್ಷಣೆ ಮಾಡಬಹುದಾಗಿದೆ ಎಂದರು.

ಮಕ್ಕಳಲ್ಲಿ ಪರೀಕ್ಷೆ ಹಾಗೂ ಶೈಕ್ಷಣಿಕ ಚಟುವಟಿಕೆ ಸಂಬಂಧಿಸಿದಂತೆ ಹುರಿದುಂಬಿಸುವಲ್ಲಿ ಮತ್ತು ಪ್ರೋತ್ಸಾಹಿಸುವಲ್ಲಿ ಈ ಕಾರ್ಯಕ್ರಮ ಸಹಕಾರಿಯಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಆನ್‍ಲೈನ್ ಮೂಲಕ ನಡೆಯುವ ಸಂವಾದ ಕಾರ್ಯಕ್ರಮ ವೀಕ್ಷಿಸಲು ನಗರದ ಕೇಂದ್ರೀಯ ವಿದ್ಯಾಲಯ ಮತ್ತು ನವೋದಯ ವಿದ್ಯಾಲಯದಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ವೇದಮೂರ್ತಿ, ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲ ಅರ್ಜುನ್ ಸಿಂಗ್, ಜವಾಹರ್ ನವೋದಯ ಶಾಲೆಯ ಪ್ರಾಂಶುಪಾಲ ಪಂಕಜಾಕ್ಷನ್ ಇದ್ದರು.

Sneha Gowda

Recent Posts

ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಶಾಸಕ, ಬಿಜೆಪಿ ರಾಜ್ಯ ಪ್ರಧಾನ…

20 mins ago

ತೆಲುಗಿನ ತ್ರಿನಯನಿ ಧಾರಾವಾಹಿಯಲ್ಲಿ ಮಿಂಚಿದ ಕನ್ನಡತಿಯ ದುರಂತ ಅಂತ್ಯ

ತೆಲುಗು ಸಿನಿಮಾ ಹಾಗೂ ಕಿರುತೆರೆಯಲ್ಲಿ ಅಭಿನಯಿಸಿದ ಬಹಳಷ್ಟು ಕನ್ನಡಿಗರು ಸಕ್ಸಸ್ ಕಂಡಿದ್ದಾರೆ. ತೆಲುಗು ಕಿರುತೆರೆಯಲ್ಲಿ ಕರ್ನಾಟಕದ ಕಲಾವಿದರಿಗೆ ಸಾಕಷ್ಟು ಬೇಡಿಕೆಯೂ…

32 mins ago

ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರೋದೇ ಡೌಟ್; ರಿಟರ್ನ್‌ ಟಿಕೆಟ್‌ ಕ್ಯಾನ್ಸಲ್

ಹಾಸನದ ಅಶ್ಲೀಲ ವಿಡಿಯೋ ವೈರಲ್ ಹಾಗೂ ಪೆನ್‌ಡ್ರೈವ್‌ ಪ್ರಕರಣಕ್ಕೆ ಮತ್ತೊಂದು ಹೊಸ ಟ್ವಿಸ್ಟ್ ಸಿಕ್ಕಿದೆ. ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ…

57 mins ago

ರಾಧಾ ರಮಣ ಧಾರವಾಹಿಯ ಜನಪ್ರಿಯ ನಟಿ ಪವಿತ್ರ ಜಯರಾಂ ನಿಧನ

ಕನ್ನಡದ ರೋಬೋ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾ ರಮಣ ಧಾರಾವಾಹಿಯಲ್ಲಿ ನಟಿಸಿ ಜನಪ್ರಿಯರಾಗಿದ್ದ ನಟಿ ಪವಿತ್ರ ಜಯರಾಂ ಅವರು ನಿಧನರಾಗಿದ್ದಾರೆ.

1 hour ago

ಹಣ್ಣಕ್ಕೆ ಬೇಡಿಕೆ ಇಟ್ಟು ಮರ್ಮಾಂಗಕ್ಕೆ ವಿದ್ಯುತ್​ ಶಾಕ್​ ನೀಡಿ ಚಿತ್ರಹಿಂಸೆ

ಹಣಕ್ಕಾಗಿ ಬೇಡಿಕೆ ಇಟ್ಟು ಸೆಕೆಂಡ್ ಹ್ಯಾಂಡ್ ಕಾರು ವ್ಯಾಪಾರಿಯ ಬಟ್ಟೆ ಬಿಚ್ಚಿಸಿ, ಬೆತ್ತಲೆ ಮಾಡಿ ಘನಘೋರವಾಗಿ ಚಿತ್ರಹಿಂಸೆ ನೀಡಿರುವ ಘಟನೆ…

2 hours ago

ಮಾಜಿ ಸಿಎಂ ಎಚ್​ಡಿಕೆ ಜೈಲಿಗೆ ಹೋಗುವ ಕಾಲ ಹತ್ತಿರದಲ್ಲಿದೆ: ಕಾಂಗ್ರೆಸ್​ ಶಾಸಕ

ಹೆಚ್​ಡಿ ರೇವಣ್ಣರಂತೆ ಮಾಜಿ ಸಿಎಂ ಹೆಚ್​ಡಿಕೆ ಜೈಲಿಗೆ ಹೋಗುವ ಕಾಲ ಹತ್ತಿರದಲ್ಲಿದೆ. ಅವರ ವಿರುದ್ಧವೂ ಮಹಿಳೆಯರು ದೂರು ಕೊಡುತ್ತಾರೆ. ಅವರು…

2 hours ago