Categories: ಮಡಿಕೇರಿ

ರಸ್ತೆ ಬಿಟ್ಟು ತೋಟಕ್ಕೆ ನುಗ್ಗಿದ ಆಂಬ್ಯುಲೆನ್ಸ್: ತಪ್ಪಿದ ಅನಾಹುತ

ಮಡಿಕೇರಿ: ಆಂಬ್ಯುಲೆನ್ಸ್(108) ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬಿಟ್ಟು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ತೋಟಕ್ಕೆ ನುಗ್ಗಿದ ಘಟನೆ ಸುಂಟಿಕೊಪ್ಪದ ಕೊಡಗರ ಹಳ್ಳಿ ಬಳಿ ನಡೆದಿದ್ದು, ಅದೃಷ್ಟ ವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಘಟನೆ ನಡೆದ ಸ್ಥಳದಲ್ಲಿ ಮನೆಯಿತ್ತಾದರೂ ಮನೆಗೆ ನುಗ್ಗದೆ, ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ತೋಟದೊಳಕ್ಕೆ ನುಗ್ಗಿದೆ. ಈ ವೇಳೆ ವಿದ್ಯುತ್ ಪ್ರವಹಿಸದ ಕಾರಣದಿಂದ ಯಾವುದೇ ಅನಾಹುತ ಸಂಭವಿಸಿಲ್ಲ ಎನ್ನಲಾಗಿದೆ. 108 ಆಂಬ್ಯುಲೆನ್ಸ್ ಕುಶಾಲನಗರದತ್ತ ಬರುತ್ತಿದ್ದ ವೇಳೆ ಕೊಡಗರ ಹಳ್ಳಿ ಸಮೀಪದ ಬಸವನಹಳ್ಳಿಯ ಮಾರುತಿ ನಗರ ಬಡಾವಣೆ ಬಳಿ ಚಾಲಕನ ನಿಯಂತ್ರಣ ಕಳೆದುಕೊಂಡಿದೆ. ಪರಿಣಾಮ ನೇರವಾಗಿ ರಸ್ತೆ ಬಿಟ್ಟು ಸನಿಹದ ತೋಟಕ್ಕೆ ನುಗ್ಗಿದೆ. ಈ ವೇಳೆ ಅಲ್ಲಿಯೇ ಇದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಕ್ಕದಲ್ಲಿದ್ದ ಮನೆಯ ಕಾಂಪೌಂಡ್ ಬಳಿ ನಿಂತಿದೆ.

ಡಿಕ್ಕಿ ಹೊಡೆದ ಪರಿಣಾಮ ಆಂಬ್ಯುಲೆನ್ಸ್ ಮುಂಭಾಗ ಜಖಂಗೊಂಡಿದೆ. ಆದರೆ ಆಂಬ್ಯುಲೆನ್ಸ್ ನಲ್ಲಿ ಯಾವುದೇ ರೋಗಿ ಇರದೆ ಚಾಲಕ ಮಾತ್ರ ಇದ್ದನೆಂದು ತಿಳಿದು ಬಂದಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Gayathri SG

Recent Posts

ಚಾಮರಾಜನಗರದಲ್ಲಿ ಉಡ ಸಾಗಿಸುತ್ತಿದ್ದ ವ್ಯಕ್ತಿಯ ಬಂಧನ

ಜಿಲ್ಲೆಯಲ್ಲಿ ವನ್ಯ ಪ್ರಾಣಿಗಳನ್ನು ಜೀವಂತವಾಗಿ ಸೆರೆ ಹಿಡಿದು ಸಾಗಾಟ ಮಾಡುವ ಜಾಲ ಕಾರ್ಯಾಚರಿಸುತ್ತಿರುವ ಶಂಕೆ ವ್ಯಕ್ತವಾಗಿದೆ. ಪ್ರಾಣಿಗಳನ್ನು ಬೇಟೆಯಾಡಿ ಮಾಂಸ…

3 mins ago

ಮೈಸೂರಿನಲ್ಲಿ ಪರಶುರಾಮ ಜಯಂತಿ ಕಾರ್ಯಕ್ರಮ

ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ವತಿಯಿಂದ ಪರಶುರಾಮ‌ ಜಯಂತಿ ಅಂಗವಾಗಿ ಚಾಮರಾಜಪುರಂನಲ್ಲಿರುವ ಬ್ರಾಹ್ಮಣ ಯುವ ವೇದಿಕೆ ಕಛೇರಿಯಲ್ಲಿ ಪರಶುರಾಮ ಜಯಂತಿಯನ್ನು…

13 mins ago

ಪಕ್ಷಿಗಳಿಗೆ ಆಹಾರ ನೀಡುತ್ತಿರುವ ಕೆಎಲ್‌ಇ ಸಂಸ್ಥೆಯ ವಿದ್ಯಾರ್ಥಿಗಳು

ವಿದ್ಯಾಕಾಶಿ ಧಾರವಾಡದಲ್ಲಿ ಕೆಎಲ್‌ಇ ಸಂಸ್ಥೆಯ ಬಿಬಿಎ ಕಾಲೇಜಿನ ವಿದ್ಯಾರ್ಥಿಗಳು ಪಕ್ಷಿಗಳಿಗೆ ಆಹಾರ ನೀಡುವ ಕೆಲಸ ಮಾಡುತ್ತಿದ್ದಾರೆ.

24 mins ago

ನರೇಂದ್ರ ದಾಭೋಲ್ಕರ್​ ಹತ್ಯೆ ಕೇಸ್: ಇಬ್ಬರಿಗೆ ಜೀವಾವಧಿ ಶಿಕ್ಷೆ, ಮೂವರು ಖುಲಾಸೆ

ಸುಮಾರು 11 ವರ್ಷಗಳ ನಂತರ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ತೀರ್ಪು ನೀಡಿದೆ. ನ್ಯಾಯಾಲಯ ಇಬ್ಬರು ಆರೋಪಿಗಳನ್ನು…

43 mins ago

ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕಾಗಿ ವ್ಯಕ್ತಿಯ ಹತ್ಯೆ

ನಗರದಲ್ಲಿ ರಾಜಕೀಯ ವೈಷಮ್ಯದ ಹಲ್ಲೆ ಹಾಗೂ ಹತ್ಯೆ ಪ್ರಕರಣಗಳು ಮುಂದುವರಿದಿವೆ. ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ್ದಕ್ಕಾಗಿ ಅಫಜಲಪುರ ತಾಲೂಕಿನ…

53 mins ago

ಬೀದರ್: ಸಂಭ್ರಮದಿಂದ ವಿಶ್ವಗುರು ಬಸವಣ್ಣನವರ ಜಯಂತಿ‌ ಆಚರಣೆ

ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ‌ ನಗರದಲ್ಲಿ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

1 hour ago