Categories: ಮಡಿಕೇರಿ

ರಾಜಾಸೀಟು ಉದ್ಯಾನವನವನ್ನು ಅಭಿವೃದ್ಧಿ ಪಡಿಸುವ ಬಗ್ಗೆ ನೀಲ ನಕಾಶೆ ತಯಾರಿಸುವಂತೆ ಜಿಲ್ಲಾಧಿಕಾರಿ ನಿರ್ದೇಶನ

ಮಡಿಕೇರಿ : ನಗರದ ಪ್ರಸಿದ್ಧ ರಾಜಾಸೀಟು ಉದ್ಯಾನವನವನ್ನು ಗ್ರೇಟರ್ ರಾಜಾಸೀಟು ಆಗಿ ಅಭಿವೃದ್ಧಿ ಪಡಿಸುವ ಬಗ್ಗೆ ನೀಲ ನಕಾಶೆ ತಯಾರಿಸುವಂತೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ನಗರದ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ರಾಜಾಸೀಟು ಅಭಿವೃದ್ಧಿ ಸಂಬಂಧಿಸಿದಂತೆ ನಡೆದ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತಮಾಡಿದರು.

ರಾಜಾಸೀಟು ಉದ್ಯಾನವನ ವ್ಯಾಪ್ತಿಗೆ ಪ್ರಸಕ್ತ ರೈಲ್ವೆ ಟ್ರ್ಯಾಕ್ ಸೇರ್ಪಡೆಯಾಗಿದ್ದು, ಈ ಹಿನ್ನೆಲೆಯಲ್ಲಿ ರಾಜಾಸೀಟು ಉದ್ಯಾನವನ್ನು ಗ್ರೇಟರ್ ರಾಜಸೀಟು ಆಗಿ ಅಭಿವೃದ್ಧಿ ಪಡಿಸಲು ನೀಲನಕ್ಷೆ ತಯಾರಿಸುವಂತೆ ಜಿಲ್ಲಾಧಿಕಾರಿ ಸಲಹೆ ಮಾಡಿದರು.

ಪುಟಾಣಿ ರೈಲು ಸಂಚಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವುದು, ಹಲವು ವರ್ಷಗಳಿಂದ ಸ ಸ್ಥಗಿತಗೊಂಡಿರುವ ಮ್ಯೂಸಿಕಲ್ ಫೌಂಟೈನ್ ಅನ್ನು ಕೂಡಲೇ ಸರಿಪಡಿಸುವಂತೆ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಿಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ಕೂರ್ಗ್ ವಿಲೇಜ್ ಈಗಾಗಲೇ ಉದ್ಘಾಟನೆಯಾಗಿದ್ದು, ತಕ್ಷಣವೇ ಕಾರ್ಯಾರಂಭವಾಗಬೇಕು. ಆ ನಿಟ್ಟಿನಲ್ಲಿ ಅಗತ್ಯ ಕ್ರಮ ವಹಿಸಬೇಕೆಂದೂ ಅಧಿಕಾರಿಗೆ ಡಾ.ಬಿ.ಸಿ.ಸತೀಶ ಅವರು ಸೂಚಿಸಿದರು.

ರಾಜರ ಗದ್ದುಗೆ, ನೆಹರು ಮಂಟಪ ನಿರ್ವಹಣೆ, ರಾಜರ ಗದ್ದುಗೆ ಗೇಟಿನ ಬಳಿ ಹೈಮಾಸ್ ಲೈಟ್ ಅಳವಡಿಸುವುದು ಮತ್ತಿತರ ಬಗ್ಗೆ ಚರ್ಚಿಸಲಾಯಿತು.

ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ. ಪ್ರಮೋದ್ ಅವರು ರಾಜಾಸೀಟು ಅಭಿವೃದ್ಧಿ ಸಂಬಂಧ ತೋಟಗಾರಿಕೆ ಇಲಾಖೆಯಿಂದ ಕೈಗೊಂಡಿರುವ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು.

ಡಿಸೆಂಬರ್ 25 ರ ಕ್ರಿಸ್‌ಮಸ್ ಸಂದರ್ಭದಲ್ಲಿ ಕೊಡಗು ಜಿಲ್ಲೆಗೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವುದರಿಂದ ಕಾಫಿ ಮಂಡಳಿ ಸಹಕಾರದಲ್ಲಿ ಕಾಫಿ ಮೇಳ ಆಯೋಜಿಸುವುದು, ಹಾಗೆಯೇ ರಜೆ ದಿನಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸುವ ಬಗ್ಗೆಯೂ ಚರ್ಚಿಸಲಾಯಿತು.

ಡಿವೈಎಸ್‌ಪಿ ಗಜೇಂದ್ರ ಪ್ರಸಾದ್, ಕಾಫಿ ಮಂಡಳಿ ಉಪ ನಿರ್ದೇಶಕ ಶಿವಕುಮಾರ ಸ್ವಾಮಿ, ಪಿಡಬ್ಲ್ಯೂಡಿ ಎಇಇ ಶಿವರಾಮ್, ಹರ್ಷ, ಪೌರಾಯುಕ್ತ ರಾಮದಾಸ್, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಸಚಿನ್, ಐಟಿಡಿಪಿ ಇಲಾಖಾ ಅಧಿಕಾರಿ ಶ್ರೀನಿವಾಸ್, ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಸುರೇಶ್ ಭಟ್ ಮತ್ತಿತರರು ಇದ್ದರು.

Sneha Gowda

Recent Posts

ಕಡಬ: ಸಿಡಿಲು ಬಡಿದು ಮರಳುಗಾರಿಕೆ ಮಾಡುತ್ತಿದ್ದ ಕಾರ್ಮಿಕ ಸಾವು

ದಕ್ಷಿಣಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಮಳೆ ಆರಂಭವಾಗಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ದಕ್ಷಿಣಕನ್ನಡ ಜಿಲ್ಲೆಗೆ ವರುಣ ತಂಪೇರಗಿದ್ದಾನೆ. ಈ ನಡುವೆ ಸಿಡಿಲು…

17 mins ago

ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥ

ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ಹುಣಸೂರು ತಾಲೂಕಿನ ಕಡೇಮನುಗನಹಳ್ಳಿ ಗ್ರಾಮದಲ್ಲಿ ನಡೆದಿದೆ

17 mins ago

ಮಂಜೂರಾದ ಜಮೀನು ಪಿಟಿಸಿಎಲ್ ಕಾಯಿದೆಯಡಿ ಮರು ಸ್ಥಾಪನೆ ಇಲ್ಲ

ಕರ್ನಾಟಕ ಭೂ ಸುಧಾರಣಾ ಕಾಯಿದೆಯಡಿಯಲ್ಲಿ ಭೂ ನ್ಯಾಯಮಂಡಳಿಗಳಿಂದ ಮಂಜೂರಾಗಿರುವ ಜಮೀನುಗಳನ್ನು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ಕೆಲ ಜಮೀನುಗಳ…

30 mins ago

ಗೆಳಯನಿಗೆ ಸಾತ್‌ ನೀಡಲು ಹೋಗಿದ್ದ ಅಲ್ಲು ವಿರುದ್ಧ ಕೇಸ್ ದಾಖಲು

ಪುಷ್ಪಾ-2 ರಿಲೀಸ್​ ಕ್ರೇಜ್​ನಲ್ಲಿರೋ ಐಕಾನ್​ ಸ್ಟಾರ್ ಅಲ್ಲು ಅರ್ಜುನ್​ಗೆ ಆಂಧ್ರ ಪ್ರದೇಶ ಪೊಲೀಸರು ಬಿಗ್ ಶಾಕ್ ನೀಡಿದ್ದು, ಅಲ್ಲು ಅರ್ಜುನ್…

33 mins ago

ಹರ್ದೀಪ್‌ ಸಿಂಗ್‌ ನಿಜ್ಜಾರ್‌ ಹತ್ಯೆ : ನಾಲ್ಕನೇ ಆರೋಪಿ ಅರೆಸ್ಟ್‌

ಕೆನಡಾದಲ್ಲಿ ಕಳೆದ ವರ್ಷ ಭಾರತದ ಮೋಸ್ಟ್‌ ವಾಂಟೆಡ್‌ ಉಗ್ರನಾಗಿದ್ದ, ಖಲಿಸ್ತಾನಿ ಪರ ಹೋರಾಟಗಾರ ಹರ್ದೀಪ್‌ ಸಿಂಗ್‌ ನಿಜ್ಜಾರ್‌ ನನ್ನು ಹತ್ಯೆ…

55 mins ago

ಆರು ತಿಂಗಳ ಬಳಿಕ ಭಕ್ತರಿಗೆ ದರ್ಶನ ನೀಡಿದ ಬದರಿನಾಥ

ಉತ್ತರಾಕಾಂಡ ಚಮೋಲಿಯಲ್ಲಿರುವ ಬದರಿನಾಥ ಬಾಗಿಲನ್ನು ಇಂದು(ಬಾನುವಾರ) ಬೆಳಿಗ್ಗೆ 6 ಗಂಟೆಗೆ ತೆರೆಯಲಾಯಿತು. ಈ ವೇಳೆ ವೇದ ಘೋಷಗಳು ಮತ್ತು ನೆರೆದಿದ್ದ…

1 hour ago