News Karnataka Kannada
Saturday, May 11 2024
ಮಡಿಕೇರಿ

ವಿಧಾನ ಪರಿಷತ್ ಚುನಾವಣೆ: ಜಿಲ್ಲಾದ್ಯಂತ ನೀತಿ ಸಂಹಿತೆ ಜಾರಿ

Vidhan Legislative Council
Photo Credit :

ಮಡಿಕೇರಿ: ಕರ್ನಾಟಕ ವಿಧಾನ ಪರಿಷತ್ತಿಗೆ ಕೊಡಗು ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಚುನಾಯಿತರಾಗಿದ್ದ ಎಂ.ಪಿ.ಸುನಿಲ್ ಸುಬ್ರಮಣಿ ಅವರ ಅವಧಿ 2022 ಜ.5 ಕ್ಕೆ ಮುಕ್ತಾಯಗೊಳ್ಳಲಿದ್ದು, ಈ ಸ್ಥಾನಕ್ಕೆ ಚುನಾವಣೆ ನಡೆಸಲು ಭಾರತ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಅದರಂತೆ ಜಿಲ್ಲಾದ್ಯಂತ ತಕ್ಷಣದಿಂದಲೇ ನೀತಿ ಸಂಹಿತೆ ಜಾರಿಗೆ ಬಂದಿದೆ ಎಂದು ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.

ನ.16 ರಂದು ಅಧಿಸೂಚನೆ ಹೊರಡಿಸಲಾಗುತ್ತದೆ. ನ.23 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ನವೆಂಬರ್ 24 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ನ.26 ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದ್ದು, ಡಿಸೆಂಬರ್ 10 ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಡಿಸೆಂಬರ್, 14 ರಂದು ಮತ ಎಣಿಕೆ ನಡೆಯಲಿದ್ದು, ಡಿ.16 ಚುನಾವಣೆ ಮುಕ್ತಾಯವಾಗುವ ದಿನವಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.

ಕೊಡಗು ಜಿಲ್ಲೆ ಪೂರ್ಣ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವ್ಯಾಪ್ತಿಯಾಗಿದೆ. ಕೊಡಗು ಜಿಲ್ಲಾಧಿಕಾರಿ ಅವರು, ವಿಧಾನ ಪರಿಷತ್ ಚುನಾವಣೆಯಲ್ಲಿ ಮತದಾರರ ನೋಂದಣಾಧಿಕಾರಿ ಹಾಗೂ ಚುನಾವಣಾಧಿಕಾರಿ ಆಗಿ ಕಾರ್ಯ ನಿರ್ವಹಿಸಲಿದ್ದಾರೆ ಮತ್ತು ಅಪರ ಜಿಲ್ಲಾಧಿಕಾರಿ ಅವರು ಸಹಾಯಕ ಮತದಾರರ ನೋಂದಣಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಆಗಿ ಕರ್ತವ್ಯ ನಿರ್ವಹಿಸಲಿದ್ದಾರೆ ಎಂದು ಅವರು ವಿವರಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು