Categories: ಮಡಿಕೇರಿ

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ನಿವೃತ್ತಿ ಪಡೆಯುವ ಕಾಲ ಬಂದಿದೆ: ಸಚಿವ ಉಮೇಶ್ ಕತ್ತಿ

ಮಡಿಕೇರಿ:  ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ನಿವೃತ್ತಿ ಪಡೆಯುವ ಕಾಲ ಬಂದಿದೆ ಎಂದು ಅರಣ್ಯ ಸಚಿವ ಉಮೇಶ್ ಕತ್ತಿ ಅಭಿಪ್ರಾಯಪಟ್ಟಿದ್ದಾರೆ.

ಮಂಡ್ಯದ ವಿದ್ಯಾರ್ಥಿನಿ ಮುಸ್ಕಾನ್’ಳನ್ನು ಹೊಗಳಿ ಅಲ್ ಖೈದಾ ಮುಖಂಡ ಹರಿಬಿಟ್ಟಿರುವ ವಿಡಿಯೋ ಸಂಬಂಧ ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ಕತ್ತಿ ತಿರುಗೇಟು ನೀಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಿಂದೆ ಒಳ್ಳೆಯ ಕೆಲಸ ಮಾಡಿದ್ದಾರೆ. ಆದರೆ ಇತ್ತೀಚೆಗೆ ಅವರು ನೀಡುತ್ತಿರುವ ಹೇಳಿಕೆಗಳು ಅವರ ವರ್ಚಸ್ಸಿಗೇ ಧಕ್ಕೆಯಾಗುವಂತಿದೆ. ಆದ್ದರಿಂದ ಅವರು ನಿವೃತ್ತಿಯಾಗುವ ಕಾಲ ಸಮೀಪಿಸಿದೆ ಎಂದು ಹೇಳಿದರು.

ಅಲ್ ಖೈದಾ ಮುಖ್ಯಸ್ಥ ಮಂಡ್ಯ ವಿದ್ಯಾರ್ಥಿನಿ ಮುಸ್ಕಾನ್ ಹೊಗಳಿದ ವಿಡಿಯೋ ವಿಚಾರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಸಚಿವ ಉಮೇಶ್ ಕತ್ತಿ ತಿರುಗೇಟು ನೀಡಿದ್ದಾರೆ.

ರಾಜ್ಯದಲ್ಲಿ ಹಿಂದೂಯೇತರರಿಗೆ ವ್ಯಾಪಾರ ನಿರ್ಬಂಧ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಯಾರು ಯಾರೊಂದಿಗೆ ವ್ಯಾಪಾರ, ವ್ಯವಹಾರ ನಡಸಬೇಕೆಂಬುದು ಅವರವರಿಗೆ ಸಂಬಂಧಿಸಿದ ವೈಯಕ್ತಿಕ ವಿಚಾರವಾಗಿದ್ದು, ಇಂತಹ ಸಮಸ್ಯೆ ಪರಿಹಾರಕ್ಕೆ ರಾಜ್ಯ ಸರ್ಕಾರ ಮಧ್ಯಪ್ರವೇಶಿಸುವ ಅಗತ್ಯವಿಲ್ಲ. ಅಲ್ಲದೆ ಸರ್ಕಾರ ಮಧ್ಯಪ್ರವೇಶಿಸುವ ಅಗತ್ಯ ಇನ್ನೂ ಬಂದಿಲ್ಲ ಎಂದೂ ಅವರು ನುಡಿದರು.

Sneha Gowda

Recent Posts

ದೊಡ್ಡಬಳ್ಳಾಪುರ: ಹಳೇ ದ್ವೇಷಕ್ಕೆ ಯುವಕನ ಕತ್ತು ಕುಯ್ದು ಕೊಲೆ

ಹಳೇ ದ್ವೇಷಕ್ಕೆ ನಡುರಸ್ತೆಯಲ್ಲಿ ಯುವಕನ ಕತ್ತು ಕುಯ್ದು ಕೊಲೆ ಮಾಡಿದ ಘಟನೆ ದೊಡ್ಡಬಳ್ಳಾಪುರ ಹೊರವಲಯ ನವೋದಯ ಶಾಲೆಯ ಮುಂಭಾಗದಲ್ಲಿ ನಡೆದಿದೆ.

8 mins ago

ಕೇಂದ್ರ ಸೂಚನೆ ನೀಡಿದ ಕೂಡಲೇ ರಾಜ್ಯದಲ್ಲಿ ಸಿಎಎ ಅನುಷ್ಠಾನ: ಮೋಹನ್‌ ಯಾದವ್‌

ದೇಶಾದ್ಯಂತ ಚುನಾವಣೆಗ ಅಂತ್ಯಗೊಳುವುದಕ್ಕೂ ಮುನ್ನ ವಿವಿಧ ರಾಜ್ಯಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಪ್ರಕ್ರಿಯೆ ಆರಂಭಿಸಬೇಕೆಂದು ಕೇಂದ್ರ ನಿರ್ಧರಿಸಿದೆ.

25 mins ago

ತಾಯಿ, ಹೆಂಡತಿ ಮತ್ತು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ ಮಾನಸಿಕ ಅಸ್ವಸ್ಥ

ವ್ಯಕ್ತಿಯೊಬ್ಬ ತನ್ನ ತಾಯಿ, ಹೆಂಡತಿ ಮತ್ತು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದ  ಸೀತಾಪುರದಲ್ಲಿ ನಡೆದಿದೆ.

45 mins ago

ಕಲಬುರಗಿ: ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆ

ಮದುವೆಗೆ ನಿರಾಕರಿಸಿದ್ದಕ್ಕೆ  ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ನಗರ ಹೊರವಲಯದ ಯಲ್ಲಾಲಿಂಗ್ ಕಾಲೋನಿಯಲ್ಲಿ ನಡೆದಿದೆ.

1 hour ago

ಮುಂದಿನ 6 ದಿನಗಳ ಕಾಲ ರಾಜ್ಯದ ಹಲವೆಡೆ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಮುಂದಿನ 6 ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ  ನೀಡಿದೆ.

2 hours ago

ಜೈಲಿನಿಂದ ಹೊರಬಂದ ಕೇಜ್ರಿವಾಲ್​ಗೆ ಆರತಿ ಬೆಳಗಿ ಸ್ವಾಗತಿಸಿದ ಕುಟುಂಬಸ್ಥರು

ಅಕ್ರಮ ಮದ್ಯ ನೀತಿ ಪ್ರಕರಣದ ಆರೋಪದಲ್ಲಿ ಜೈಲು ಸೇರಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್​​ ಅವರಿಗೆ ನಿನ್ನೆ ಸುಪ್ರೀಂ ಕೋರ್ಟ್…

2 hours ago