Categories: ಮಡಿಕೇರಿ

ವೀರಶೈವಲಿಂಗಾಯತರನೆಲ್ಲಾ ಹಿಂದುಳಿದ 2 ಆ ವರ್ಗಕ್ಕೆ ಸೇರಿಸಲು ಮನವಿ

ಸೋಮವಾರಪೇಟೆ : ವೀರಶೈವಲಿಂಗಾಯತರನೆಲ್ಲಾ ಹಿಂದುಳಿದ 2 ಆ ವರ್ಗಕ್ಕೆ ಸೇರಿಸಲು ವೀರಶೈವಲಿಂಗಾಯತ ಸಂಘಟನಾ ವೇದಿಕೆ ಆಗ್ರಹ ಹಿಂದುಳಿದ ವರ್ಗಗಳ ಆಯೋಗಕ್ಕೆ ಮನವಿ ಸಲ್ಲಿಕೆ.
ರಾಜ್ಯದ ಲಿಂಗಾಯತ ಪಂಚಮಸಾಲಿ ಜನಾಂಗವನ್ನು ಹಿಂದುಳಿದ ವರ್ಗ 2a ಗೆ ಸೇರಿಸಬೇಕೆಂಬ ಬೇಡಿಕೆಯಲ್ಲಿ ಸರ್ಕಾರದ ಆದೇಶದಂತೆ  ಮಾಹಿತಿ ಸಂಗ್ರಹಿಸಿ ವರದಿ ಸಲ್ಲಿಸಲು ರಾಜ್ಯ ಪ್ರವಾಸ ಕೈಗೊಂಡಿರುವ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ರಾದ  ಜಯಪ್ರಕಾಶ್ ಹೆಗ್ಡೆ ನೇತೃತ್ವದ ತಂಡ ಕೊಡಗು ಜಿಲ್ಲೆಗೆ ಆಗಮಿಸಿದೆ.
ವೀರಶೈವಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರಿ ಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ನೇತೃತ್ವದ ತಂಡ ಆಯೋಗವನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಕೊಡಗು ಜಿಲ್ಲೆಯಲ್ಲಿ ವೀರಶೈವಲಿಂಗಾಯತ ಒಂದೇ ಎಂಬ ಭಾವನೆಯಿಂದ,ಸಹಬಾಳ್ವೆಯ ಜೀವನ ನಡೆಸುತ್ತಿದ್ದೇವೆ ಆದರೆ ಮೀಸಲಾತಿಯ ನೆಪದಲ್ಲಿ ಸಮುದಾಯವನ್ನು ಒಡೆಯುವುದು ಬೇಡ. ಮೀಸಲಾತಿ ಕಲ್ಪಿಸುವುದಾದರೆ ವೀರಶೈವ ಲಿಂಗಾಯತ ಸಮುದಾಯದವರಿಗೆಲ್ಲಾ ಅನುಕೂಲವಾಗುವಂತೆ  ಆ ಆಕಾಶ ಮಾಡಿ ಕೊಡಿ ಎಂದು ಆಯೋಗಕ್ಕೆ ಮನವರಿಕೆ ಮಾಡಿದರು.
ಮನವಿ ಸ್ವೀಕರಿಸಿದ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಮಾತನಾಡಿ ರಾಜ್ಯದ ವಿವಿಧ ಜಿಲ್ಲೆಗಳಿಗೆ ಭೇಟಿನೀಡಿ  ಅಭಿಪ್ರಾಯ ಸಂಗ್ರಹಿಸುತ್ತಿದ್ದೇವೆ. ಅಭಿಪ್ರಾಯಗಳನ್ನು ಕ್ರೋಡೀಕರಿಸಿ ಸರ್ಕಾರಕ್ಕೆ ವರದಿ ಸಲ್ಲಿಸುವುದಾಗಿ ತಿಳಿಸಿದರು.
ಈ ಸಂದರ್ಭ ವೀರಶೈವ ಲಿಂಗಾಯತ ಸಂಘಟನಾವೇದಿಕೆ ಯ ಜಿಲ್ಲಾದ್ಯಕ್ಷ ಎ.ಎಸ್.ಮಲ್ಲೇಶ್, ಕಾರ್ಯದರ್ಶಿ ಗಿರೀಶ್,ಮಹಿಳಾ ಘಟಕದ ಜಿಲ್ಲಾದ್ಯೆಕ್ಷೆ ಉಷಾರಾಣಿ, ಗೌರವಾಧ್ಯಕ್ಷ ಭುವನೇಶ್ವರಿ,ಉಪಾಧ್ಯಕ್ಷೆ ಭಾಗವತಿದೆಶ್ಮಖ್,ಕಾರ್ಯದರ್ಶಿ ಗೀತಾ ರಾಜು,ಸರಿತಾ,ತಾಲೂಕು ಘಟಕದ ಅಧ್ಯಕ್ಷ ಜಿ.ಬಿ.ಜಯರಾಜ್, ವೀರಶೈವ ಮಹಾಸಭಾದ ಯುವಘಟಕದ  ತಾಲೂಕು ಅಧ್ಯಕ್ಷ ಆದರ್ಶ್ ಪದಾಧಿಕಾರಿಗಳಾದ ಪ್ರೇಂನಾಥ್,ಲಿಕಿತ್, ಜೀವನ್. ಹಾಗೂ ಮುಂತಾದವರು ಹಾಜರಿದ್ದರು.
Sneha Gowda

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

5 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

5 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

5 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

6 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

6 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

6 hours ago