ಕೊಡಗು: ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿ ಇಡೀ ಮನೆಯೇ ಸುಟ್ಟು ಕರಕಲಾಗಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ.
ಇಲ್ಲಿನ ಮೆಡಿಕಲ್ ಕಾಲೇಜು ಸಮೀಪದ ಮನೆಯಲ್ಲಿ ಶನಿವಾರ ಮಧ್ಯಾಹ್ಮ 2 ಗಂಟೆ ಸುಮಾರಿಗೆ ಶಾರ್ಟ್ ಸಕ್ಯೂಟ್ ಸಂಭವಿಸಿ, ಇಡೀ ಮನೆಯಲ್ಲಿ ಬೆಂಕಿ ಆವರಿಸಿ, ಮನೆಯಲ್ಲಿದ್ದ ವಸ್ತುಗಳು ಸುಟ್ಟು ಭಸ್ಮವಾಗಿವೆ,
ಸುನೀಲ್ ಡಿಸೋಜ ಎಂಬವರಿಗೆ ಸೇರಿದ ಮನೆಯಾಗಿದ್ದು, ಘಟನೆಗೆ ವಿದ್ಯುತ್ ಶಾರ್ಟ್ ಸಕ್ಯೂರ್ಟ್ ಆಗಿರುವುದೇ ಎಂದು ಮೇಲ್ನೋಟದಲ್ಲಿ ಕಂಡುಬರುತ್ತಿದೆ.
ಬೆಂಕಿ ಇಡೀ ಮನೆಯನ್ನೇ ಆವರಿಸುತ್ತಿದ್ದಂತೆ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸುವ ವೇಳೆಗೆ ಇಡೀ ಮನೆಯೇ ಸುಟ್ಟು ಕರಕಲಾಗಿದೆ.
ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿದ್ದು, ಅದೃಷ್ಟವಶಾತ್ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಹೊತ್ತಿ ಉರಿದಿದೆ. ದಿಢೀರ್ ಬೆಳವಣಿಗೆಯಿಂದ ಕೆಲ ಕಾಲ ಆತಂಕ ಸೃಷ್ಟಿಯಾಗಿತ್ತು.