ಮಡಿಕೇರಿ : ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್ ಗೆ ಪಾಪಿಗಳು ವಿಷಕಾರಿ ರಸಾಯನಿಕ ಬೆರೆಸಿರುವ ಘಟನೆ ನಡೆದಿದೆ. ಈ ಟ್ಯಾಂಕ್ ನಲ್ಲಿ ದುಷ್ಕರ್ಮಿಗಳು ವಿಷಕಾರಿ ರಾಸಾಯನಿಕ ಬೆರೆಸಿದ್ದಾರೆ. ಆದರೆ, ಅದೃಷ್ಟವಶಾತ್ ಮಕ್ಕಳಿಗೆ ಮಾತ್ರ ಯಾವ ತೊಂದರೆಯೂ ಆಗಿಲ್ಲ. ಜಿಲ್ಲೆಯ ಸುಂಟಿಕೊಪ್ಪ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದೆ.
ಶೌಚಾಲಯದಲ್ಲಿ ಕೆಟ್ಟ ವಾಸನೆ ಬರುತ್ತಿದೆ ಎಂದು ವಿದ್ಯಾರ್ಥಿಗಳು ಹೇಳುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಮುಖ್ಯ ಶಿಕ್ಷಕಿ ಗೀತಾ ಪರಿಶೀಲನೆ ನಡೆಸಿದ ನಂತರ ಈ ಘಟನೆ ಬೆಳಕಿಗೆ ಬಂದಿದೆ.
ಕೂಡಲೇ ಎಚ್ಚೆತ್ತುಕೊಂಡ ಶಾಲಾ ಸಿಬ್ಬಂದಿ ಹಾಗೂ ಆಡಳಿತ ಮಂಡಳಿ ನೀರನ್ನು ಪರಿಶೀಲಿಸಿ ವಿದ್ಯಾರ್ಥಿಗಳು ಅವುಗಳನ್ನು ಬಳಸದಂತೆ ನೋಡಿಕೊಂಡಿದ್ದಾರೆ. ಶಾಲೆಯಲ್ಲಿ 115 ವಿದ್ಯಾರ್ಥಿಗಳಿದ್ದು, ಯಾರೊಬ್ಬರು ಈ ನೀರನ್ನು ಬಳಕೆ ಮಾಡಿಲ್ಲ. ಅವರ ಸಮಯೋಚಿತದಿಂದಾಗಿ ದೊಡ್ಡ ಅನಾಹುತ ತಪ್ಪಿದೆ. ಇದರಿಂದಾಗಿ ಎಲ್ಲ ಮಕ್ಕಳು ಸುರಕ್ಷಿತರಾಗಿದ್ದಾರೆ.
ಸದ್ಯ ಆಡಳಿತ ಮಂಡಳಿ ತಾಲೂಕು ಶಿಕ್ಷಣಾಧಿಕಾರಿ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಆಗ ನೀರಿನ ಟ್ಯಾಂಕ್ ನಲ್ಲಿ ರಾಸಾಯನಿಕ ಬೆರೆಸಿರುವುದು ಪತ್ತೆಯಾಗಿದೆ. ಈ ಶಾಲೆಯಲ್ಲಿ ಇಂತಹ ಹಲವು ಘಟನೆಗಳು ನಡೆಯುತ್ತಿದ್ದು, ಪೊಲೀಸರು ದುಷ್ಕರ್ಮಿಗಳ ಪತ್ತೆಗಾಗಿ ತನಿಖೆ ಕೈಗೊಂಡಿದ್ದಾರೆ.
ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್ ಆಗಿದೆ. ಬೆಂಗಳೂರಿನ…
ಚಾರ್ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…
ಭಾರತದ ಎಂಡಿಎಚ್ ಹಾಗೂ ಎವರೆಸ್ಟ್ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…
ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…
ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ನನ್ನು ಪೊಲೀಸರು ಬಂಧಿಸಿದ್ದಾರೆ.…
ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್ಎಸ್ಎಲ್ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…