News Karnataka Kannada
Thursday, May 16 2024
ಮಡಿಕೇರಿ

ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಸರ್ಕಾರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಮನವಿ

Photo Credit : News Kannada

ಮಡಿಕೇರಿ : ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಭಾಗಮಂಡಲದಿಂದ ಕರಿಕೆಗೆ ಸಮಯಕ್ಕೆ ಸರಿಯಾಗಿ ಉಚಿತ ಸರ್ಕಾರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಕರಿಕೆ ಗ್ರಾ.ಪಂ ಉಪಾಧ್ಯಕ್ಷ ಎನ್.ಬಾಲಚಂದ್ರ ನಾಯರ್ ಹಾಗೂ ಸರಕಾರಿ ಸಂಯುಕ್ತ ಪ್ರೌಢಶಾಲೆ ಅಧ್ಯಕ್ಷ ಟಿ.ಆರ್.ಶ್ರೀನಿವಾಸ್ ಮನವಿ ಮಾಡಿದ್ದಾರೆ.

ಈ ಕುರಿತು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಅವರು, ಕರಿಕೆ ಗ್ರಾಮದ ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ವಿವರಿಸಿದರು. ಮಾ.28 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗಲಿದ್ದು, ಸಾರಿಗೆ ವ್ಯವಸ್ಥೆ ಇಲ್ಲದಿರುವುದರಿಂದ ಸಮಯಕ್ಕೆ ಸರಿಯಾಗಿ ಶಾಲೆಗಳಿಗೆ ತೆರಳಲು ಸಾಧ್ಯವಾಗುತ್ತಿಲ್ಲ ಎಂದರು.

ಕರಿಕೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯ 32 ವಿದ್ಯಾರ್ಥಿಗಳು ಭಾಗಮಂಡಲದ ಕಾವೇರಿ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಕರಿಕೆಯಿಂದ ಬೆಳಗ್ಗೆ 7.15 ಗಂಟೆಗೆ ಬಸ್ ವ್ಯವಸ್ಥೆ ಇದೆ. ಆದರೆ ಪರೀಕ್ಷೆ ಮುಗಿಯುವ ಮಧ್ಯಾಹ್ನದ ಸಮಯ 1.45ರ ನಂತರ ಭಾಗಮಂಡಲದಿಂದ ಕರಿಕೆಗೆ ಯಾವುದೇ ಬಸ್ ಸೌಲಭ್ಯವಿರುವುದಿಲ್ಲ. ಆದ್ದರಿಂದ ಪರೀಕ್ಷಾ ಅವಧಿಯ ನಂತರ ಭಾಗಮಂಡಲದಿಂದ ಕರಿಕೆಗೆ ಉಚಿತ ಸರ್ಕಾರಿ ಬಸ್ ವ್ಯವಸ್ಥೆಯನ್ನು ಕಲ್ಪಿಸುವಂತೆ ಮನವಿ ಮಾಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು