Categories: ಮಡಿಕೇರಿ

ಹಲಾಲ್ ವಿಚಾರದಲ್ಲಿ ಸರಕಾರದ ಪ್ರವೇಶವಿಲ್ಲ: ಸಚಿವ ನಾಗೇಶ್

ಮಡಿಕೇರಿ: ಹಲಾಲ್‌ ಎಂಬುದು ಒಂದು ಸಮುದಾಯದ ಆಚರಣೆ. ಅದು ಸರಕಾರದ ವ್ಯಾಪ್ತಿಗೆ ಬರುವುದಿಲ್ಲ ಮತ್ತು ಅದರಲ್ಲಿ ಸರಕಾರ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು.

ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲಾಲ್ ಬಗ್ಗೆ ನನಗೂ ತಿಳಿದಿರಲಿಲ್ಲ. ಬೇರೆ ಧರ್ಮದ ಆಚರಣೆ ನಮಗೆ ಏಕೆ ಎಂದು ಸಂಘಟನೆಗಳು ಪ್ರಶ್ನೆಯೆತ್ತಿವೆ. ವ್ಯಕ್ತಿ ಸ್ವಾತಂತ್ರ್ಯವನ್ನು ಈ ದೇಶ ನೀಡಿದೆ. ಹಲಾಲ್‌ ಮಾಡಬಾರದೆಂದು ಗಲಾಟೆ ನಡೆಸಿದ್ದರೆ, ಸರ್ಕಾರ ಮಧ್ಯ ಪ್ರವೇಶಿಸಿ ಕ್ರಮ ಕೈಗೊಳ್ಳುತ್ತಿತ್ತು. ಹಲಾಲ್‌ ಮಾಡಿರುವ ಮಾಂಸವನ್ನು ತಿನ್ನುವುದು ಬೇಡವೆಂದು ಸರ್ಕಾರ ಹೇಳಿಲ್ಲ. ಆದ್ದರಿಂದ ಸರ್ಕಾರ ಮಧ್ಯ ಪ್ರವೇಶಿಸುವ ಪ್ರಶ್ನೆಯೇ ಇಲ್ಲ. ಹಲಾಲ್‌ ಮಾಂಸ ಖರೀದಿಸುವುದು ಬಿಡುವುದು ಜನರಿಗೆ ಬಿಟ್ಟಿರುವ ವಿಚಾರ ಎಂದು ಸ್ಪಷ್ಟಪಡಿಸಿದರು.

ಹೆಚ್.ಡಿ.ಕೆಗೆ ತಿರುಗೇಟು: ಗಂಡಸುತನ ಬೇಕಿರುವುದು ಸರ್ಕಾರ ನಡೆಸುವುದಕ್ಕೆ ಅಲ್ಲ. ಗಂಡಸುತನ ಬೇಕಿರುವುದು ಯಾವುದಕ್ಕೆ ಎಂಬುದು ಎಲ್ಲರಿಗೂ ತಿಳಿದಿದೆ ಎಂದು ಎಚ್‌.ಡಿ.ಕುಮಾರಸ್ವಾಮಿ ಅವರ ಹೇಳಿಕೆಗೆ ಅವರು ತಿರುಗೇಟು ನೀಡಿದರಲ್ಲದೆ, ರಾಜ್ಯ ಸರ್ಕಾರ ನಡೆಸುವ ಶಕ್ತಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಇದೆ ಎಂದು ಪ್ರತಿಕ್ರಿಯಿಸಿದರು.

ಟಿಪ್ಪು ವಿಚಾರ-ಪರಿಶೀಲಿಸಿ ಕ್ರಮ:ಟಿಪ್ಪು ಸುಲ್ತಾನ್‌ ವಿಚಾರವನ್ನು ಪಠ್ಯದಿಂದ ಕೈಬಿಡುವ ಕುರಿತಾದ ಪ್ರಶ್ನೆಗೆ ಉತ್ತರಿಸಿದ ಸಚಿವ ಬಿ.ಸಿ.ನಾಗೇಶ್ ಅವರು, ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅವರು ಟಿಪ್ಪು ಸುಲ್ತಾನ್ ವಿಷಯವನ್ನು ಪಠ್ಯದಿಂದ ಕೈಬಿಡುವಂತೆ ಈ ಹಿಂದೆ ಸರಕಶರಕ್ಕೆ ಪತ್ರ ಬರೆದಿದ್ದರು. ಅಲ್ಲದೆ ಟಿಪ್ಪು ಕುರಿತಾಗಿ ವಿದೇಶದಲ್ಲಿದ್ದ ಕೆಲವು ಪುಸ್ತಕಗಳನ್ನೂ ನೀಡಿದ್ದರು.

ಇದನ್ನು ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಗೆ ನೀಡಲಾಗಿದೆ. ಇದರೊಂದಿಗೆ ಮತ್ತಷ್ಟು ಪುಸ್ತಕಗಳ ಅಧ್ಯಯನ ನಡೆಯುತ್ತಿದೆ. ಎಲ್ಲಾ ಆಯಾಮದಲ್ಲೂ ಪರಿಶೀಲಿಸಿ ಸತ್ಯವಲ್ಲದ ಮಾಹಿತಿಯನ್ನು ಪಠ್ಯದಿಂದ ಕೈಬಿಡಲಾಗುವುದು’ ಎಂದು ಶಿಕ್ಷಣ ಸಚಿವರು ಹೇಳಿದರು.

Sneha Gowda

Recent Posts

ಪೆನ್‌ಡ್ರೈವ್‌ ಕೇಸ್‌ : ವಕೀಲ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌, ಮಹಿಳೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಮುಖಂಡ, ವಕೀಲರೂ ಆಗಿರುವ ದೇವರಾಜೇಗೌಡರನ್ನು 14…

8 mins ago

ರೈತನ ಆರು ತಿಂಗಳ ಶ್ರಮ ಅರ್ಧಗಂಟೆಯಲ್ಲೇ ಹೋಮ

ಇಂದು ಸಂಜೆ ಸುರಿದ ಬಾರಿ ಮಳೆಗೆ ರೈತ ಬೆಳೆದಿದ್ದ ಬಾಳೆ ಫಸಲು ಸಂಪೂರ್ಣವಾಗಿ ನಾಶವಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಉತ್ತುವಳ್ಳಿಯಲ್ಲಿ…

41 mins ago

ಬಾರ್ ಗೆ ನುಗ್ಗಿದ ಕಳ್ಳರು: 60 ಲೀಟರ್ ಮದ್ಯ ಕಳ್ಳತನ

ಜಿಲ್ಲೆಯ ಹನೂರು ಪಟ್ಟಣದ ಬಂಡಳ್ಳಿ ಮುಖ್ಯ ರಸ್ತೆಯಲ್ಲಿರುವ ಅಮೃತ್ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ತಡ ರಾತ್ರಿ ಕಳ್ಳರ ತಂಡ…

55 mins ago

ಬಾಳೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಕೋರಿ ರಾಷ್ಟ್ರೀಯ ಹೆದ್ದಾರಿ ಬಂದ್ ಚಳುವಳಿ

ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಚಾಮರಾಜನಗರದ ಸತ್ಯಮಂಗಲಂ ಮುಖ್ಯ ರಸ್ತೆಯಲ್ಲಿ ಜಮಾಯಿಸಿದ ಸಂಘದ ಪದಾಧಿಕಾರಿಗಳು…

1 hour ago

ಗಾಳಿ ಸಮೇತ ಭಾರಿ ಮಳೆ : ನೆಲಕಚ್ಚಿದ ಮರಗಳು

ಧಾರವಾಡದಲ್ಲಿ ಶನಿವಾರ ಗಾಳಿ ಸಮೇತ ಮಳೆಯಾಗಿದ್ದು, ಅಲ್ಲಲ್ಲಿ ಮರಗಳು ನೆಲಕಚ್ಚಿದ ಬಗ್ಗೆ ವರದಿಯಾಗಿದೆ. ಬೆಳಿಗ್ಗೆಯಿಂದ ವಿಪರೀತ ಬಿಸಿಲಿನ ವಾತಾವರಣವಿತ್ತು

2 hours ago

ಮನುಷ್ಯನ ಆರೋಗ್ಯಕ್ಕೆ ಕ್ರೀಡೆಗಳು ಅತ್ಯಂತ ಸಹಕಾರಿ : ತಮ್ಮಯ್ಯ

ಕ್ರೀಡೆಗಳು ಮನುಷ್ಯನ ಆರೋಗ್ಯವನ್ನು ಸುಸ್ಥಿರವಾಗಿ ಕಾಪಾಡುವ ಜೊ ತೆಗೆ ಮನಸ್ಸನ್ನು ಹತೋಟಿಗಿಡುವ ಬಹುದೊಡ್ಡ ಸಾಧನ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ…

2 hours ago