ಮಡಿಕೇರಿ

ಹೊರಗಿನವರಿಗಿಂತ ಒಳಗಿನ ಶತ್ರುಗಳೇ ಹೆಚ್ಚು ಅಪಾಯಕಾರಿ : ಸಂಸದ ಪ್ರತಾಪ್‌ಸಿಂಹ

ಮಡಿಕೇರಿ: ಹೆಲಿಕಾಪ್ಟರ್ ದುರಂತದಲ್ಲಿ ಸೇನಾಪಡೆಗಳ ಮುಖ್ಯಸ್ಥರು ಮೃತಪಟ್ಟವರಿಗೆ ಸಂತಾಪ ಅಥವಾ ಮೌನದ ಮೂಲಕ ಬೇಸರ ವ್ಯಕ್ತಪಡಿಸುವ ಬದಲು ಇದಕ್ಕೆ ವಿರುದ್ಧವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಸಂತೋಷಪಟ್ಟಿರುವುದು ದೇಶದ್ರೋಹಿ ಕೃತ್ಯವಾಗಿದೆ ಎಂದು ಮೈಸೂರು-ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಿಧಾನ ಪರಿಷತ್ ಚುನಾವಣೆಯಲ್ಲಿ ಮತದಾನ ಮಾಡಲು ಮಡಿಕೇರಿಗೆ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಸೇನಾಧಿಕಾರಿಗಳ ಸಾವನ್ನು ಸಂಭ್ರಮಿಸಿದ ಕೃತ್ಯ ಖಂಡನೀಯವೆಂದರು.

ಚೀನಾ ಅಥವಾ ಪಾಕಿಸ್ತಾನವನ್ನು ಬೇಕಾದರೂ ಎದುರಿಸಬಹದು.ಆದರೆ ದೇಶದೊಳಗಿನ ಶತ್ರುಗಳು ಹೆಚ್ಚು ಅಪಾಯಕಾರಿಯಾಗಿದ್ದಾರೆ. ಇವರುಗಳ ವಿರುದ್ಧ ಕೇಂದ್ರ ಮತ್ತು ರಾಜ್ಯ ಸರಕಾರ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡುವುದಾಗಿ ಹೇಳಿದರು.

ಹೆಲಿಕಾಪ್ಟರ್ ದುರಂತ ಮತ್ತು ಸೇನಾಧಿಕಾರಿಗಳ ಸಾವಿನ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹರ್ಷ ವ್ಯಕ್ತಪಡಿಸಿದ ದೇಶದ್ರೋಹಿಗಳನ್ನು ಹಾಗೂ ದೇಶವನ್ನು ಛಿದ್ರ ಮಾಡಲು ಹವಣಿಸುತ್ತಿರುವವರನ್ನು ಪತ್ತೆ ಹಚ್ಚಿ ಕಠಿಣ ಶಿಕ್ಷೆಗೆ ಗುರಿ ಪಡಿಸಬೇಕೆಂದು ಪ್ರತಾಪ್ ಸಿಂಹ ಒತ್ತಾಯಿಸಿದರು.

15 ಸ್ಥಾನಗಳಲ್ಲಿ ಜಯ: ರಾಜ್ಯದಲ್ಲಿ 12 ರಿಂದ 15 ಸ್ಥಾನಗಳಲ್ಲಿ ಬಿಜೆಪಿ ಜಯಗಳಿಸಲಿದೆ ಎಂದು ಭವಿಷ್ಯ ನುಡಿದ ಅವರು, ಮೈಸೂರು ಹಾಗೂ ಕೊಡಗು ಜಿಲ್ಲೆಗಳಲ್ಲೂ ಬಿಜೆಪಿ ಅಭ್ಯರ್ಥಿಗಳ ಗೆಲುವು ಶತಸಿದ್ಧ ಎಂದು ಹೇಳಿದರು.

ಸಾವಿರ ಮತಗಳ ಅಂತರ: ಕೊಡಗಿನ ಅಭ್ಯರ್ಥಿ ಸುಜಾಕುಶಾಲಪ್ಪ ಅವರು ಸುಮಾರು 40ವರ್ಷಗಳಿಂದ ಪಕ್ಷ ಹಾಗೂ ಸಮಾಜದ ಸೇವೆ ಮಾಡಿದ್ದು, ಅವರು ಒಂದು ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಹೇಳಿದರು.

ತನಗೆ ಮಡಿಕೇರಿ ಹಾಗೂ ಮೈಸೂರಿನಲ್ಲಿ ಮತದಾನ ಮಾಡಲು ಅವಕಾಶವಿದ್ದರೂ ಮಡಿಕೇರಿಯಲ್ಲೇ ಮತದಾನ ಮಾಡಿದ್ದೇನೆ. ಕೊಡಗಿನ ಎಲ್ಲೆಡೆ ನಾನು ಪ್ರಚಾರಕ್ಕೆ ಕೈಜೋಡಿಸಿದ್ದು, ಸೋಮವಾರಪೇಟೆ ಭಾಗದಲ್ಲಿ ಕೊಂಚ ಚಿಂತೆಯಿತ್ತಾದರೂ, ಆ ಭಾಗದಲ್ಲಿ ಪ್ರಚಾರಕ್ಕೆ ಹೆಚ್ಚು ಒತ್ತು ನೀಡಲಾಗಿದೆ ಎಂದು ಪ್ರತಾಪ್ ಸಿಂಹ ನುಡಿದರು.

Sneha Gowda

Recent Posts

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

15 mins ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

40 mins ago

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

2 hours ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

2 hours ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

3 hours ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

3 hours ago