News Karnataka Kannada
Sunday, May 05 2024
ಮಡಿಕೇರಿ

74 ನೇ ಗಣರಾಜ್ಯೋತ್ಸವ: ಅರ್ಥಪೂರ್ಣ ಆಚರಣೆ

74th Republic Day: Meaningful celebrations
Photo Credit : News Kannada

ಮಡಿಕೇರಿ, ಜ.26: ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ 74 ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಗುರುವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್ ಅವರು ಧ್ವಜಾರೋಹಣ ನೆರವೇರಿಸಿದರು. ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷರಾದ ನಾಪಂಡ ರವಿಕಾಳಪ್ಪ, ನಗರಸಭೆ ಅಧ್ಯಕ್ಷರಾದ ಎನ್.ಪಿ.ಅನಿತಾ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ರಾಣಿ ಮಾಚಯ್ಯ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಎಂ.ಪಿ.ಕೇಶವ ಕಾಮತ್, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಯಾಪ್ಟನ್ ಎಂ.ಎ.ಅಯ್ಯಪ್ಪ, ಜಿ.ಪಂ.ಸಿಇಒ ಡಾ.ಎಸ್.ಆಕಾಶ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್, ಉಪ ವಿಭಾಗಾಧಿಕಾರಿ ಯತೀಶ್ ಉಲ್ಲಾಳ್, ತಹಶೀಲ್ದಾರ್ ಪಿ.ಎಸ್.ಮಹೇಶ್ ಇತರರು ಇದ್ದರು.

ಸನ್ಮಾನ: ಕೊಡವ ಸಾಂಪ್ರದಾಯಿಕ ‘ಉಮ್ಮತ್ತಾಟ್’ ಕಲಾ ಪ್ರದರ್ಶನವನ್ನು ದೇಶ, ವಿದೇಶಗಳಲ್ಲಿ ಪಸರಿಸುವಲ್ಲಿ ಶ್ರಮಿಸಿ, ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವ ರಾಣಿ ಮಾಚಯ್ಯ ಅವರನ್ನು ಗಣರಾಜ್ಯೋತ್ಸವ ಸಂದರ್ಭದಲ್ಲಿ ಜಿಲ್ಲಾಡಳಿತ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು.

ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್ ಅವರು ಶಾಲು, ಫಲ ತಾಂಬೂಲ ನೀಡಿ ಗೌರವಿಸಿದರು. ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಜೀವ ವೈವಿಧ್ಯ ಮಂಡಳಿ ರಾಜ್ಯ ಅಧ್ಯಕ್ಷರಾದ ನಾಪಂಡ ರವಿ ಕಾಳಪ್ಪ, ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷರಾದ ಕೇಶವ ಕಾಮತ್, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಯಾಪ್ಟನ್ ಎಂ.ಎ.ಅಯ್ಯಪ್ಪ, ಜಿ.ಪಂ.ಸಿಇಒ ಡಾ.ಎಸ್.ಆಕಾಶ್ ಇತರರು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು