News Karnataka Kannada
Monday, May 13 2024
ಮಡಿಕೇರಿ

ಅಂಚೆ ಮತಪತ್ರದ ಮೂಲಕ 2,474 ಮಂದಿ ಮತದಾನಕ್ಕೆ ಹೆಸರು ನೋಂದಣಿ

As many as 2,474 voters have registered their names through postal ballots.
Photo Credit : News Kannada

ಮಡಿಕೇರಿ: ವಿಧಾನಸಭಾ ಚುನಾವಣೆ ಸಂಬಂಧ ಈಗಾಗಲೇ 80 ವರ್ಷ ಮೇಲ್ಪಟ್ಟವರು ಅಂಚೆ ಮತಪತ್ರ ಮೂಲಕ ಮತದಾನ ಮಾಡುವಂತಾಗಲು ಗುರುತಿಸಲಾಗಿದ್ದು, ಈ ಸಂಬಂಧ ಏಪ್ರಿಲ್, 29 ರಿಂದ ಮೇ, 06 ರವರೆಗೆ ಮನೆ ಮನೆಗೆ ತೆರಳಿ ಅಂಚೆ ಮತಪತ್ರ ಮೂಲಕ ಮತದಾನ ಮಾಡಿಸುವಂತಾಗಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಸೂಚಿಸಿದ್ದಾರೆ.

ನಗರದ ಗಾಂಧಿ ಭವನದಲ್ಲಿ ಸೆಕ್ಟರ್ ಅಧಿಕಾರಿಗಳಿಗೆ ಮತ್ತು ಪೊಲಿಂಗ್ ಅಧಿಕಾರಿಗಳಿಗೆ ಬುಧವಾರ ನಡೆದ ತರಬೇತಿ ಕಾರ್ಯಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೊಡಗು ಜಿಲ್ಲೆಯಲ್ಲಿ 80 ವರ್ಷ ಮೇಲ್ಪಟ್ಟವರು 1992 ಮಂದಿ ಅಂಚೆ ಮತಪತ್ರ ಮೂಲಕ ಮತ ಚಲಾಯಿಸಲು ಮುಂದಾಗಿದ್ದು, ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ 1,010 ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ 982 ಮಂದಿ, ಹಾಗೆಯೇ ವಿಕಲಚೇತನರು(ಪಿಡಬ್ಲ್ಯುಡಿ) 482 ಮಂದಿ ಅಂಚೆ ಮತಪತ್ರದ ಮೂಲಕ ಮತದಾನ ಮಾಡಲಿದ್ದು, ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ 268 ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ 214 ಮಂದಿ ವಿಕಲಚೇತನರು ಅಂಚೆ ಮತಪತ್ರದ ಮೂಲಕ ಮತ ಚಲಾಯಿಸಲಿದ್ದು, ಒಟ್ಟಾರೆ 2,474 ಮಂದಿ ಅಂಚೆ ಮತಪತ್ರ ಮೂಲಕ (ನಮೂನೆ-12 ಡಿ) ಮತ ಹಕ್ಕು ಚಲಾಯಿಸಲಿದ್ದಾರೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು