Categories: ಮಡಿಕೇರಿ

ಕೊಡಗು: ಕಾರ್ಯಕರ್ತರ ಬೆಂಬಲದಿಂದ ಬಿಜೆಪಿ ಗೆಲುವು – ಅಪ್ಪಚ್ಚು ರಂಜನ್

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಾರ್ಯಕರ್ತರ ಬೆಂಬಲದಿಂದ ಬಿಜೆಪಿ ಗೆಲವು ಖಂಡಿತಾ ಎಂದು ಎಂ.ಪಿ. ಅಪ್ಪಚ್ಚು ರಂಜನ್ ಹೇಳಿದರು.

ಮಡಿಕೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೊಡಗಿನ ಎರಡೂ ಕ್ಷೇತ್ರಗಳಲ್ಲಿಯೂ ಬಿಜೆಪಿ ಗೆಲವು ಶತಸಿದ್ದ. ಏಕೆಂದರೆ, ಕಾರ್ಯಕರ್ತರು ತಳಮಟ್ಟದಿಂದಲೇ ಬಿಜೆಪಿ ಗೆಲುವಿಗೆ ಮುಂದಾಗಿದ್ದಾರೆ. ಎರಡೂ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ನಿಂದ ಟೂರಿಂಗ್ ಅಭ್ಯರ್ಥಿಗಳಿದ್ದಾರೆ. ಹೊರಜಿಲ್ಲೆಯ ಅಭ್ಯರ್ಥಿಗಳಿಗೆ ಚುನಾವಣೆ ಬಂದಾಗ ಮಾತ್ರ ಕೊಡಗು ಯೋಚನೆಯಾಗುತ್ತಿದೆ ಎಂದರು.

ಮಾಜಿ ಸಚಿವರಾಗಿದ್ದ ಎ.ಮಂಜು ಜೆಡಿಎಸ್ ಅಭ್ಯರ್ಥಿಯಾಗಿ ಅರಕಲಗೂಡು ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಮಗ ಮಡಿಕೇರಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. ಮನೆಯಲ್ಲಿಯೇ ಮೈತ್ರಿ ಪಕ್ಷಗಳಿರುವ ಅಭ್ಯರ್ಥಿ ಬಗ್ಗೆ ಕಾಂಗ್ರೆಸ್ ನಲ್ಲಿಯೇ ಅಸಮಾಧಾನವಿದೆ.

ಬಿಜೆಪಿ ಸರ್ಕಾರ ಕೊಡಗಿನಲ್ಲಿ 5 ಸಾವಿರ ಕೋಟಿ ರೂ. ಗೂ ಅಧಿಕ ಯೋಜನೆಗೆ ಕಾರಣವಾಗಿದೆ. ಮಡಿಕೇರಿ ನಗರ ಸೇರಿದಂತೆ ಕ್ಷೇತ್ರದಲ್ಲಿ ಶೈಕ್ಷಣಿಕ ಕ್ರಾಂತಿಯಾಗುವಂತೆ ಕಾಯ೯ಯೋಜನೆ ಜಾರಿಯಾಗಿದೆ.

ಶನಿವಾರ ಅಮಿತ್ ಶಾ ಮಡಿಕೇರಿಯಲ್ಲಿ ರೋಡ್ ಶೋ ನಡೆಸಲಿದ್ದಾರೆ. ಬೆಳಗ್ಗೆ 9.30 ಗಂಟೆಗೆ ಮಡಿಕೇರಿಯ ಚೌಡೇಶ್ವರಿ ದೇವಾಲಯದಿಂದ ರೋಡ್ ಶೋ ಪ್ರಾರಂಭ ಆಗಲಿದ್ದು ಸಹಸ್ರಾರು ಕಾರ್ಯಕರ್ತರ ನಡುವೇ ಅಮಿತ್ ಶಾ ಸಾಗಿಹೋಗಲಿದ್ದಾರೆ. ಅಮಿತ್ ಶಾ ಕಳೆದ ಬಾರಿಯಂತೆ ಈ ಬಾರಿಯೂ ಮಡಿಕೇರಿಗೆ ಬರುತ್ತಿರುವುದು ಹೊಸ ಉತ್ಸಾಹ ತಂದಿದೆ. ಬಿಜೆಪಿ ಅಭ್ಯರ್ಥಿ ರಂಜನ್ ಎಂದು ಹೇಳಿದರು.

ಸುದ್ದಿಗೋಷ್ಟಿಯಲ್ಲಿ ಬಿಜೆಪಿ ಪ್ರಮುಖರಾದ ಅನಿತಾ ಪೂವಯ್ಯ, ಮನುಮಂಜುನಾಥ್, ಮಹೇಶ್ ಜೈನಿ, ಬಿ.ಕೆ. ಅರುಣ್ ಕುಮಾರ್, ಕಾಂಗೀರ ಸತೀಶ್ ಹಾಜರಿದ್ದರು.

Gayathri SG

Recent Posts

ಬಿರುಗಾಳಿ ಮಳೆಗೆ ಮುರಿದು ಬಿದ್ದ 4 ಎಕರೆ ಬಾಳೆ

ಬಿರುಗಾಳಿ ಸಹಿತ ಸುರಿದ ಮಳೆಗೆ ಸುಮಾರು ನಾಲ್ಕು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಬಾಳೆ ಬೆಳೆ ಸಂಪೂರ್ಣವಾಗಿ ನಾಶವಾಗಿರುವ ಘಟನೆ ನಂಜನಗೂಡು…

2 mins ago

ʻಬಿಸಿ ಗಾಳಿ.. ಬಿಸಿ ಗಾಳಿ.. ಸಹಿ ಹಾಕಿದೆ ಬಿಸಿಲಿನಲಿʼಎಂದು ಹಾಡಿದ ವಿಕಾಸ್ ವಿಕ್ಕಿಪಿಡಿಯ

ರಾಜ್ಯದ ಹಲವೆಡೆ ಗರಿಷ್ಠ ತಾಪಮಾನ ದಾಖಲಾಗುತ್ತಿದೆ. ರಾಜಧಾನಿಯಲ್ಲಿ ದಿನದಿಂದ ದಿನಕ್ಕೆ ಗರಿಷ್ಠ ತಾಪಮಾನ ದಾಖಲಾಗುತ್ತಿದೆ. ಹೀಗಿರುವಾಗ ಇದೇ ಟಾಪಿಕ್‌ ಇಟ್ಟುಕೊಂಡು…

9 mins ago

ಬ್ರೆಜಿಲ್‌ನಲ್ಲಿ ಭಾರಿ ಮಳೆಯಿಂದಾಗಿ ಪ್ರವಾಹ, ಭೂ ಕುಸಿತ: 57 ಮಂದಿ ಮೃತ್ಯು

ಬ್ರೆಜಿಲ್‌ನಲ್ಲಿ ಭಾರಿ ಮಳೆಯ ಕಾರಣದಿಂದಾಗಿ ಪ್ರವಾಹ ಮತ್ತು ಮಣ್ಣು ಕುಸಿತದಿಂದ ಅವಘಡ ಸಂಭವಿಸಿ. 57 ಮಂದಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಮೂಲಗಳಿಂದ…

18 mins ago

ಸಾಗರ ಖಂಡ್ರೆ ಎಂಪಿ ಆಗುವುದು ಗ್ಯಾರಂಟಿ: ಡಾ. ಭೀಮಸೇನರಾವ ಶಿಂಧೆ

ಜಿಲ್ಲೆಯಲ್ಲಿ ಈ ಬಾರಿ ಬದಲಾವಣೆ ಗಾಳಿ ಜೋರಾಗಿ ಬೀಸುತ್ತಿದೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಾಗರ ಖಂಡ್ರೆ ಸಂಸದ ಆಗುವದು…

31 mins ago

ದೇವಾಲಯಕ್ಕೆ ಹೋಗುತ್ತಿದ್ದ ಕಾರಿಗೆ ಅಪರಿಚಿತ ವಾಹನ ಡಿಕ್ಕಿ: 6 ಜನ ಮೃತ್ಯು

ದೇವಾಲಯಕ್ಕೆ ಹೋಗುತ್ತಿದ್ದ ಕಾರಿಗೆ ಅಪರಿಚಿತ ವಾಹನವೊಂದು ಭಯಾನಕವಾಗಿ ಡಿಕ್ಕಿಯಾದ ಪರಿಣಾಮ 6 ಜನ ಸ್ಥಳದಲ್ಲೇ ಮೃತಪಟ್ಟಿದ್ದು ಇಬ್ಬರು ಗಂಭೀರವಾಗಿ ಗಾಯಗೊಂಡ…

38 mins ago

ಮಲೆಯೂರು ಪಿಎಸಿಸಿ ಬ್ಯಾಂಕ್‌ನಲ್ಲಿ ಗಿರವಿ ಇಟ್ಟಿದ್ದ ಚಿನ್ನಾಭರಣ ವಾಪಸ್

ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘವು ರೈತರೊಂದಿಗೆ ನಡೆಸಿದ ನಿರಂತರ ಹೋರಾಟಕ್ಕೆ ಫಲ ದೊರೆತಿದ್ದು, ನ್ಯಾಯಾಲಯದ ಆದೇಶದ ಮೇರೆಗೆ ತಾಲೂಕಿನ…

45 mins ago