Categories: ಮಡಿಕೇರಿ

ಬಿಜೆಪಿ ಪ್ರಣಾಳಿಕೆಗೆ ಸಿಎಂ ಸಿದ್ದರಾಮಯ್ಯ ವ್ಯಂಗ್ಯ

ಮಡಿಕೇರಿ: ಬಿಜೆಪಿ 2019ರ ಲೋಕಸಭಾ ಚುನಾವಣೆ ವೇಳೆ ನೀಡಿದ್ದ ಆರುನೂರು ಭರವಸೆಗಳಲ್ಲಿ ಅರುವತ್ತನ್ನೂ  ಈಡೇರಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಮಡಿಕೇರಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶಕ್ಕೆ ಆಗಮಿಸಿದ ಸಂದರ್ಭ  ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿ ಬಿಡುಗಡೆ ಮಾಡಿದ ಪ್ರಣಾಳಿಕೆಯನ್ನು ಟೀಕಿಸಿದರಲ್ಲದೆ, ಬಿಜೆಪಿಯವರು ಯಾವ ಭರವಸೆಯನ್ನೂ ಈ ಹಿಂದೆಯೂ ಈಡೇರಿಸಿಲ್ಲ – ಮುಂದೆಯೂ ಈಡೇರಿಸುವುದಿಲ್ಲ. ಹತ್ತು ವರ್ಷಗಳಿಂದ ಮೋದಿ ಪ್ರಧಾನಿಯಾಗಿ ಭಾರತಕ್ಕೆ ಏನು ಮಾಡಿದ್ದಾರೆ ಎಂಬ ಅವಲೋಕನ ಆಗಲಿ – ಮತ್ತೆ ಮುಂದೇನು ಎಂಬ ಯೋಚನೆ ಮಾಡೋಣ. ದೇಶದಲ್ಲಿ ನಿರುದ್ಯೋಗ ಸಮಸ್ಯೆ ಅತ್ಯಧಿಕವಾಗಿದ್ದು, ಎಲ್ಲರಿಗೂ ಉದ್ಯೋಗ ನೀಡುತ್ತೇವೆ ಎಂದಿದ್ದ ಮೋದಿ ಭರವಸೆ ಎಲ್ಲಿ ಹೋಯಿತು  ಎಂದು ಪ್ರಶ್ನಿಸಿದರು.

ಶ್ರೀನಿವಾಸ್ ಪ್ರಸಾದ್ ಭೇಟಿ ಕುರಿತಂತೆ ಮಾತನಾಡಿದ ಅವರು ನಾನು ಅವರು ಸಮಕಾಲೀನರು, ನಾವಿಬ್ಬರೂ ಒಟ್ಟಿಗೆ ರಾಜಕೀಯ ಮಾಡಿದವರು  ಅವರ ಆರೋಗ್ಯ ವಿಚಾರಿಸಲು ಮನೆಗೆ ತೆರಳಿದ್ದೆ ಅದರಲ್ಲಿ ವಿಶೇಷತೆ ಏನೂ ಇಲ್ಲ  ಎಂದರಲ್ಲದೆ,  ಮಾಜಿ ಸಿಎಂ ಕುಮಾರಸ್ವಾಮಿ ಅವರ ವಿರುದ್ಧ ಹರಿಹಾಯ್ದು  ಹೆಣ್ಣು ಮಕ್ಕಳ ಬಗ್ಗೆ ಕಳಕಳಿಯಿಲ್ಲ. ಹೀಗಾಗಿ ಬಾಯಿಗೆ ಬಂದಂತೆ ಹೇಳಿಕೆ ನೀಡುತ್ತಿದ್ದಾರೆ ಎಂದರಲ್ಲದೆ, ಎಚ್.ಡಿ. ದೇವೇಗೌಡರ ಟೀಕೆಗಳ ಬಗ್ಗೆ ನಾನು ಪ್ರತಿಕ್ರಿಯಿಸಲಾರೆ  ಎಂದು ತಿಳಿಸಿದರು.

ಇದೇ ವೇಳೆ ಶಾಸಕರಾದ ಎ.ಎಸ್ ಪೊನ್ನಣ್ಣ, ಡಾ.ಮಂಥರ್ ಗೌಡ, ಕೆ ವೆಂಕಟೇಶ್, ಲೋಕಸಭಾ ಅಭ್ಯರ್ಥಿ ಎಂ. ಲಕ್ಷ್ಮಣ್, ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧಮ೯ಜ ಉತ್ತಪ್ಪ, ಅರುಣ್ ಮಾಚಯ್ಯ ಸೇರಿದಂತೆ ಪ್ರಮುಖ ನಾಯಕರು ಮುಖ್ಯ ಮಂತ್ರಿ ಸಿದ್ದರಾಮಯ್ಯ,  ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಆತ್ಮೀಯವಾಗಿ ಸ್ವಾಗತ ನೀಡಿದರು.

Ashika S

Recent Posts

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

14 mins ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

25 mins ago

ಬೀದರ್: ಸಾಯಿಜ್ಞಾನ ಪಬ್ಲಿಕ್ ಶಾಲೆಗೆ ಶೇ. 100 ಫಲಿತಾಂಶ

ಸಾಯಿಜ್ಞಾನ ಪಬ್ಲಿಕ್ ಶಾಲೆಯು ಪ್ರಸಕ್ತ ಸಾಲಿನ ಸಿಬಿಎಸ್‍ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ 100ಕ್ಕೆ 100 ರಷ್ಟು ಫಲಿತಾಂಶ ಪಡೆದಿದೆ.…

1 hour ago

ಎಸಿಯಲ್ಲಿ ಬೆಂಕಿ: ತುರ್ತು ಭೂಸ್ಪರ್ಶ ಮಾಡಿದ ಏರ್ ಇಂಡಿಯಾ ವಿಮಾನ

ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

1 hour ago

ಹೊಳೆಯಲ್ಲಿ ಸ್ನಾನ ಮಾಡಲು ಹೋಗಿ ಇಬ್ಬರು ಮೃತ್ಯು

ಹೊಳೆಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ಇಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕಡವಿನಕಟ್ಟೆಯಲ್ಲಿ ನಡೆದಿದೆ.

2 hours ago

ರಸ್ತೆ ತಿರುವಿನ ಅಪಾಯಕಾರಿ ವಿದ್ಯುತ್ ತಂತಿಗಳು: ಸುರಕ್ಷಿತ ಎತ್ತರಕ್ಕೆ ಏರಿಕೆ

ಸಾಣೂರಿನ ಲೈನ್ ಮ್ಯಾನ್  ಸುಭಾಷ್ ರವರು ತಮ್ಮ ತಂಡದೊಂದಿಗೆ ಮೇ 17 ರಂದು ಮುರತಂಗಡಿ ಇರುವತ್ತೂರು ರಸ್ತೆ ತಿರುವಿನಲ್ಲಿರುವ ವಿದ್ಯುತ್…

2 hours ago