ಮಡಿಕೇರಿ

ಕೊಡವ ಪಾಲೆ ಜನಾಂಗದ ಅಭಿವೃದ್ಧಿಗೆ ಬದ್ದ: ಶಾಸಕ ಪೊನ್ನಣ್ಣ

ಮಡಿಕೇರಿ: ಅನಾದಿ ಕಾಲದಿಂದಲೂ ಕೊಡವ ಸಂಸ್ಕೃತಿಯನ್ನು ಆಚರಿಸುತ್ತ, ಕೊಡಗಿನ ಮೂಲನಿವಾಸಿಗಳಾಗಿ ಬಾಳುತ್ತಿರುವ ಕೊಡವ ಪಾಲೆ ಜನಾಂಗದ ಸರ್ವತೋಮುಖ ಅಭಿವೃದ್ದಿಗೆ ಕಟಿಬದ್ದನಾಗಿರುವುದಾಗಿ ಶಾಸಕ ಎಸ್. ಪೊನ್ನಣ್ಣ ಹೇಳಿದ್ದಾರೆ.

ಮೂರ್ನಾಡಿನಲ್ಲಿ ನಡೆದ ಕೊಡವ ಪಾಲೆ ಜನಾಂಗದ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೊಡವ ಪಾಲೆ ಅಥವಾ ಅರಮನೆಪಾಲೆ ಜನಾಂಗವು ಕೊಡವ ಸಂಸ್ಕೃತಿಯನ್ನು ಪಾಲಿಸುತಿದ್ದು, ಅವರದ್ದೇ ಶೈಲಿಯ ಶ್ರಮದಿಂದ ಶಾಂತಿಯುತವಾಗಿ ಬಾಳುತ್ತಿರುವ ಜನಾಂಗ, ಇತ್ತೀಚೆಗೆ ತೀವ್ರ ಜನಸಂಖ್ಯೆ ಕುಸಿತ ಆಗುತ್ತಿದ್ದು, ಈ ಜನಾಂಗದ ರಕ್ಷಣೆ ನಮ್ಮ ಸರ್ಕಾರದ ಹೊಣೆಯಾಗಿದೆ ಅದನ್ನು ತಾವು ಪಾಲಿಸುತ್ತೇನೆ ಎಂದರು.

ಈ ಹಿಂದೆ ಪರಿಶಿಷ್ಟ ಪಂಗಡಕ್ಕೆ ಸೇರಿದ್ದು, ಇದೀಗ ಪರಿಶಿಷ್ಟ ಜಾತಿ ಎಂದು ತಪ್ಪಾಗಿ ಪರಿಗಣನೆ ಆಗಿರುವುದು ತನ್ನ ಗಮನಕ್ಕೆ ಬಂದಿದ್ದು, ಕೆಲವೇ ದಿನಗಳಲ್ಲಿ ಆಗಿರುವ ತಾಂತ್ರಿಕ ಅಡಚಣೆಯನ್ನು ಸರಿಪಡಿಸಿ, ಅಧಿಕೃತವಾಗಿ ಪರಿಶಿಷ್ಟ ಪಂಗಡ ಎಂದು ಮರು ಆದೇಶ ಮಾಡಿಸಲಾಗುವುದು ಎಂದು ಹೇಳಿದರು.

ಅಖಿಲಕೊಡವ ಸಮಾಜ ಅಧ್ಯಕ್ಷ ಪರದಂಡ ಸುಬ್ರಮಣಿ ಅವರು ಮಾತನಾಡಿ, ಕೊಡವ ಪಾಲೆ ಜನಾಂಗವು ಅನಾದಿಕಾಲದೊಂದಿಗೆ ಕೊಡವ ಸಂಸ್ಕೃತಿಯನ್ನು ಪಾಲಿಸುತ್ತಾ, ನಿಷ್ಟೆ ಮತ್ತು ಪ್ರಾಮಾಣಿಕ ಜನಾಂಗವಾಗಿ ಬಾಳುತ್ತಿದ್ದು, ಅವರ ಮೂಲ ಕಸುಬನ್ನು ತಪ್ಪದೇ ಪಾಲಿಸುತ್ತಿದ್ದಾರೆ. ಕೊಡಗಿನ ಎಲ್ಲಾ ಮೂಲ ನಿವಾಸಿ ಜನಾಂಗಗಳು ಅವರವರ ಕುಲ ಮತ್ತು ಸಂಪ್ರದಾಯಕ್ಕೆ ಬದ್ಧರಾಗಿ ಒಗ್ಗಟ್ಟಿನಿಂದ ಬಾಳುವಂತೆ ಆಗಬೇಕು ಎಂದರು.

ಕೊಡವ ಭಾಷಿಕ ಮೂಲನಿವಾಸಿ ಸಮುದಾಯಗಳ ಒಕ್ಕೂಟದ ಅಧ್ಯಕ್ಷ ಡಾ. ಮೇಚಿರ ಸುಭಾಶ್ ನಾಣಯ್ಯ ಅವರು ಮಾತನಾಡಿ, ಸರ್ವ ಕೊಡವ ಭಾಷಿಕ ಜನಾಂಗಗಳು ತಮ್ಮ ಅಸ್ತಿತ್ವವನ್ನು ಉಳಿಸಿಕೊಂಡು ಸಂಸ್ಕೃತಿಯನ್ನು ಬೆಳೆಸುವತ್ತ ಒಟ್ಟಾಗಿ ಸಾಗಬೇಕಾಗಿದೆ, ಈ ನಿಟ್ಟಿನಲ್ಲಿ ನಿರಂತರ ಪ್ರಯತ್ನಗಳು ನಡೆಯಬೇಕು ಎಂದರು.

ಕೊಡವಾಮೆರ ಕೊಂಡಾಟ ಸಂಘಟನೆಯ ಅಧ್ಯಕ್ಷ ಚಾಮೆರ ದಿನೇಶ್ ಬೆಳ್ಯಪ್ಪ ಅವರು ಮಾತನಾಡಿ, ಕೊಡವ ಪಾಲೆ ಜನಾಂಗ ತಮ್ಮ ಮೂಲತನದ ಅಸ್ತಿತ್ವದ ಅನ್ವೇಷಣೆಗೆ ಮುಂದಾಗಿ ಜನಾಂಗೀಯ ದಾಖಲೆ ರಚಿಸಬೇಕು, ತಮ್ಮ ಮೂಲತನವನ್ನ ಉಳಿಸುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯಲಿ, ಇಂತ ಕಾರ್ಯಕ್ರಮಗಳಲ್ಲಿ ಎಲ್ಲರೂ ಪಾಲ್ಗೊಳ್ಳುವಿಕೆಯಿಂದ ಸಹಬಾಳ್ವೆಗೆ ನಾಂದಿಯಾಗಲಿ ಎಂದರು.

ಜನಾಂಗದ ಹಿರಿಯ, ಕೊಡಗು ಮೂಲನಿವಾಸಿ ಅರಮನೆಪಾಲೆ ಸಮಾಜದ ಅಧ್ಯಕ್ಷರಾದ ಜಿ.ಚೆನಿಯ ನಾಪೋಕ್ಲು ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ಪೊನ್ನಂಪೇಟೆ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಸಣ್ಣುವಂಡ ಕಿಶೋರ್ ನಾಚಪ್ಪ, ಮಾಜಿ ತಾಲೂಕು ಪಂಚಾಯಿತಿ ಸದಸ್ಯ ಮಂಞಿರ ಸಾಬುತಿಮ್ಮಯ್ಯ, ಕೊಡಗು ಹೆಗ್ಗಡೆ ಸಮಾಜದ ಕಾರ್ಯದರ್ಶಿ ಪಡಿಞಾರಂಡ ಪ್ರಭುಕುಮಾರ್, ಕೊಡಗು ಬುಡಕಟ್ಟು ಕೃಷಿಕರ ಸಂಘದ ಅಧ್ಯಕ್ಷ ಕುಡಿಯರ ಮುತ್ತಪ್ಪ, ಅಹಿಂದ ಅಧ್ಯಕ್ಷ ತೋರೆರ ಮುದ್ದಯ್ಯ, ಕೊಡವ ಭಾಷಿಕ ಸಮುದಾಯ ಕೂಟದ ಕಾರ್ಯದರ್ಶಿ ಮೊಳ್ಳೆಕುಟ್ಟಡ ದಿನುಬೋಜಪ್ಪ, ಪೊಲೀಸ್ ವೃತ್ತ ನಿರೀಕ್ಷಕ ಉಮೇಶ್ ಉಪ್ಪಳಿಕೆ ಸೇರಿದಂತೆ ಕೊಡವ ಪಾಲೆ ಜನಾಂಗದ ಪ್ರಮುಖರು ಪಾಲ್ಗೊಂಡಿದ್ದರು.

Gayathri SG

Recent Posts

ಸಾರಿಗೆ ಬಸ್‌, ಬೊಲೆರೋ ಗೂಡ್ಸ್‌ ವಾಹನ ಮಧ್ಯೆ ಅಪಘಾತ: ಇಬ್ಬರಿಗೆ ಗಾಯ

ಪಟ್ಟಣದ ಬೈಪಾಸ್‌ ಬಳಿ ಅಣ್ಣಿಗೇರಿಯಿಂದ ಹುಬ್ಬಳ್ಳಿ ರಸ್ತೆಗೆ ಸೇರುವ ರಸ್ತೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಸಾರಿಗೆ ಬಸ್‌ ಮತ್ತು ತರಕಾರಿ…

16 mins ago

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಸಿಲುಕಿ ಬಾಲಕ ಸಾವು

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.

34 mins ago

ಹುಬ್ಬಳ್ಳಿ-ಧಾರವಾಡ ಕಮಿಷನರೇಟ್‌ಗೆ ಎನ್‌ ಶಶಿಕುಮಾ‌ರ್ ನೇಮಕ ಸಾಧ್ಯತೆ

ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಕಮಿಷನ‌ರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…

52 mins ago

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

1 hour ago

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

2 hours ago

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

2 hours ago