ಮಡಿಕೇರಿ: ಮಡಿಕೇರಿಯಲ್ಲಿ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಅಭಿಯಾನಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣ್ ದೀಪ್ ಸಿಂಗ್ ಸುರ್ಜೇವಾಲ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ‘ಗೃಹಜ್ಯೋತಿ’ಯೋಜನೆ ಮೂಲಕ ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ಪೂರೈಕೆ, ‘ಗೃಹಲಕ್ಷ್ಮಿ’ ಯೋಜನೆಯಡಿ ಪ್ರತಿ ಮನೆಯೊಡತಿಗೆ 2 ಸಾವಿರ ರೂಪಾಯಿ ಪ್ರೋತ್ಸಾಹ ಧನ ಮತ್ತು ‘ಅನ್ನಭಾಗ್ಯ’ ಯೋಜನೆ ಮೂಲಕ ಬಿಪಿಎಲ್ ಕಾರ್ಡ್ ಹೊಂದಿರುವ ಪ್ರತಿ ಸದಸ್ಯನಿಗೆ 10 ಕೆ.ಜಿ. ಅಕ್ಕಿ ಉಚಿತವಾಗಿ ನೀಡುವ ಕಾಂಗ್ರೆಸ್ ಪಕ್ಷದ ಭರವಸೆಯ ಕಾರ್ಡ್ಗಳನ್ನು ಬಿಡುಗಡೆ ಮಾಡಿ ಜಿಲ್ಲೆಯಾದ್ಯಂತ ಪ್ರತಿ ಮನೆಗೂ ತಲುಪಲಿದೆ ಎಂದು ಹೇಳಿದರು.
ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್, ಎಐಸಿಸಿ ಕಾರ್ಯದರ್ಶಿ, ಕೊಡಗು ಉಸ್ತುವಾರಿ ಹಾಗೂ ಕೇರಳ ಶಾಸಕ ರೋಜಿ ಜಾನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಮುಖಂಡರಾದ ಬಿ.ಎ ಜೀವಿಜಯ, ಎ.ಎಸ್ ಪೊನ್ನಣ್ಣ, ಡಾ.ಮಂಥರ್ ಗೌಡ, ಹರಪಳ್ಳಿ ರವೀಂದ್ರ, ಹೆಚ್ .ಎಸ್ ಚಂದ್ರಮೌಳಿ, ವೀಣಾ ಅಚ್ಚಯ್ಯ, ಕೆ.ಪಿ ಚಂದ್ರಕಲಾ ,ಟಿ.ಪಿ ರಮೇಶ್ ಮತ್ತಿತರ ಪ್ರಮುಖರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.