News Karnataka Kannada
Monday, April 29 2024
ಮಡಿಕೇರಿ

ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

Malt
Photo Credit : News Kannada

ಡಿಕೇರಿ: ಸರ್ಕಾರಿ ಮತ್ತು ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ ಮುಂದಿನ ತಿಂಗಳಿನಿಂದ ರಾಗಿ ಮಾಲ್ಟ್ ನೀಡಲು ಚಿಂತಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ. ಪೊನ್ನಂಪೇಟೆ ಪ್ರವಾಸಿ ಮಂದಿರದಲ್ಲಿ ಇಂದು ಹಾಕಿ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಸಚಿವರು ಈಗಾಗಲೇ ವಾರದಲ್ಲಿ ಒಂದು ದಿನ ಮೊಟ್ಟೆ ವಿತರಿಸಲಾಗುತ್ತಿದ್ದು, ವಾರದಲ್ಲಿ ಎರಡು ದಿನ ಮೊಟ್ಟೆ ವಿತರಿಸಲು ಮುಂದಾಗಲಾಗಿದೆ. ಜೊತೆಗೆ ಮುಂದಿನ ತಿಂಗಳಿಂದ ‘ರಾಗಿ ಮಾಲ್ಟ್’ ವಿತರಣೆ ಮಾಡಲಾಗುವುದು ಎಂದು ಸಚಿವರು ಹೇಳಿದರು.

ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಹಲವು ಸಮಸ್ಯೆಗಳಿದ್ದು, ಅವುಗಳನ್ನು ಹಂತ ಹಂತವಾಗಿ ಬಗೆ ಹರಿಸಲಾಗುತ್ತಿದೆ. 13 ಸಾವಿರ ಶಿಕ್ಷಕರ ನೇಮಕಾತಿಗೆ ಅಗತ್ಯ ಕ್ರಮ ವಹಿಸಲಾಗಿದೆ. 37 ಸಾವಿರ ಶಿಕ್ಷಕರನ್ನು ಕೌನ್ಸಿಲಿಂಗ್ ಮೂಲಕ ವರ್ಗಾವಣೆ ಮಾಡಲು ಅಗತ್ಯ ಕ್ರಮವಹಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಸರ್ಕಾರಿ ಶಾಲೆಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಕೈಗೊಂಡಿದೆ. ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕ ಸೇರಿದಂತೆ ಮಧ್ಯಾಹ್ನದ ಬಿಸಿ ಊಟ, ಮೊಟ್ಟೆ ಹಾಗೂ ಹಾಲು ವಿತರಣೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ತಲುಪಿಸಲಾಗುತ್ತಿದೆ ಎಂದರು.ಶಾಲಾ ಮಕ್ಕಳಿಗೆ ಪಠ್ಯ ಪುಸ್ತಕ ಹೊರಯಾಗದಂತೆ ತಪ್ಪಿಸುವಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು. ಕೊಡಗು ಜಿಲ್ಲೆಯಲ್ಲಿ ಶತಮಾನ ಪೂರೈಸಿರುವ ಶಾಲೆಗಳು ಇದ್ದು, ಈ ಶಾಲೆಗಳನ್ನು ಅಭಿವೃದ್ಧಿ ಪಡಿಸಲು ಮುಂದಾಗಲಾಗಿದೆ. ಕರ್ನಾಟಕ ಪಬ್ಲಿಕ್ ಶಾಲೆ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು