Categories: ಮಡಿಕೇರಿ

ಕೊಡಗಿನಲ್ಲಿ ಮತದಾನಕ್ಕೆ ಮತದಾರರ ಉತ್ತಮ ಪ್ರತಿಕ್ರಿಯೆ

ಮಡಿಕೇರಿ: ಮೈಸೂರು ಕೊಡಗು ಲೋಕಸಭಾ ಕ್ಷೇತ್ರಕ್ಕೊಳಪಡುವ ಕರ್ನಾಟಕದ ಕಾಶ್ಮೀರ ಎಂದೇ ಕರೆಯಲ್ಪಡುವ  ಕೊಡಗಿನಲ್ಲಿ ಮತದಾನ ಮುಂಜಾನೆಯಿಂದಲೇ ಆರಂಭವಾಗಿದೆ.

ಬಹುತೇಕ ಗ್ರಾಮೀಣ ಪ್ರದೇಶವನ್ನು ಹೊಂದಿರುವ ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಾಫಿಬೆಳೆಗಾರರು ಮತ್ತು ಕೂಲಿಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಗ್ರಾಮೀಣ ಪ್ರದೇಶದ ಶಾಲೆಗಳಲ್ಲಿ ಮತ ಕೇಂದ್ರವನ್ನು ಸ್ಥಾಪಿಸಲಾಗಿದ್ದು, ಬೆಳಗ್ಗಿನಿಂದಲೇ ಮತದಾರರು ಮತಕೇಂದ್ರಕ್ಕೆ ಆಗಮಿಸಿ ಸರತಿ ಸಾಲಿನಲ್ಲಿ ನಿಂತು ಮತಚಲಾಯಿಸಿದ್ದಾರೆ.

ಜಿಲ್ಲೆಯಲ್ಲಿ ಎರಡು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದ್ದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂಥರಗೌಡ ಮತ್ತು ಅವರ ಪತ್ನಿ ದಿವ್ಯ ಅವರೊಂದಿಗೆ ಸೋಮವಾರಪೇಟೆ  ತಾಲೂಕಿನ  ಬೇಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಳಗುಂದ ಹಿರಿಯ ಪ್ರಾಥಮಿಕ ಶಾಲೆಯ (ಬಜೆಗುಂಡಿ) ಬೂತ್ ನಂ 74 ರಲ್ಲಿ ಪತ್ನಿ ಮತದಾನ ಮಾಡಿದರೆ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ,  ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ  ಎ.ಎಸ್‌.ಪೊನ್ನಣ್ಣ ಅವರು ಪತ್ನಿ  ಕಾಂಚನಪೊನ್ನಣ್ಣ ಹಾಗೂ ಸಹೋದರ ನರೇನ್ ಕಾರ್ಯಪ್ಪ ಅವರೊಂದಿಗೆ ತೆರಳಿ ಪೊನ್ನಂಪೇಟೆ ತಾಲೂಕಿನ ಹುದಿಕೇರಿ  ಬೆಳ್ಳೂರು ಬೂತ್‌ ನಂ 246ರಲ್ಲಿ ಮತಚಲಾಯಿಸಿದ್ದಾರೆ.

ಇನ್ನು ಕೊಡಗಿನಲ್ಲಿರುವ ಮಠಾಧಿಪತಿಗಳಾದ  ಅರಮೇರಿ ಮಠಾಧೀಶ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಹಾಗೂ  ಕೊಡ್ಲಿಪೇಟೆ ಕಲ್ಲು ಮಠದ ಶ್ರೀ ಮಹಾಂತ ಸ್ವಾಮೀಜಿ ಕೊಡ್ಲಿಪೇಟೆ ಮತಗಟ್ಟೆಯಲ್ಲಿ ತಮ್ಮ ಹಕ್ಕು ಚಲಾಯಿಸುವ ಮೂಲಕ ಪ್ರತಿಯೊಬ್ಬರೂ ಮತ ಚಲಾಯಿಸುವಂತೆ ಸಂದೇಶ ರವಾನಿಸಿದ್ದಾರೆ.

ಇದೆಲ್ಲದರ ನಡುವೆ ಮತದಾನ ಮಾಡಿದ ನಂತರ ಮಡಿಕೇರಿಯ ರಾಜಸೀಟ್ ನಲ್ಲಿ ಜಿಲ್ಲೆಯ ಡಿಸಿ, ಎಸ್ಪಿ ಸೇರಿದಂತೆ  ನಾಲ್ವರು ಉನ್ನತ ಅಧಿಕಾರಿಗಳು ಒಟ್ಟಿಗೆ ಸೇರಿ ಜಿಲ್ಲೆಯ ಜನತೆ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಕರೆ ನೀಡಿದ್ದು, ವಿಶೇಷವಾಗಿತ್ತು.  ವಿರಾಜಪೇಟೆಯ ಪುರಸಭೆ ವತಿಯಿಂದ  ಅಂಗವಿಕಲರಿಗೆ ಹಾಗೂ ವಯಸ್ಕರಿಗೆ ಮತದಾನ ಕೇಂದ್ರಕ್ಕೆ ಆಗಮಿಸಲು  ಉಚಿತವಾಗಿ 5 ಆಟೋಗಳನ್ನು  ವ್ಯವಸ್ಥೆ ಮಾಡಿದ್ದರಿಂದ ಪುರಸಭಾ ವ್ಯಾಪ್ತಿಯ ಅಂಗವಿಕಲರು ಮತದಾನ ಕೇಂದ್ರಕ್ಕೆ ಆಗಮಿಸಿ ಲವಲವಿಕೆಯಿಂದ ತಮ್ಮ ಹಕ್ಕನ್ನು ಚಲಾಯಿಸಿದ್ದು ಕಂಡು ಬಂದಿತು.

ವಿರಾಜಪೇಟೆ ತಾಲೂಕು ಬಿಟ್ಟಂಗಾಲ ಗ್ರಾಮದ ಮತಗಟ್ಟೆ ಸಂಖ್ಯೆ 158ರಲ್ಲಿ  ಬ್ಯಾಟರಿ ಸಮಸ್ಯೆಯಿಂದ ಕೆಲಕಾಲ ಮತದಾನ ಸ್ಥಗಿತವಾಗಿತ್ತು ಆದರೆ ಕೂಡಲೇ ಅಧಿಕಾರಿಗಳು ಸಮಸ್ಯೆ ಬಗೆಹರಿಸಿ ಮತದಾನಕ್ಕೆ ಅವಕಾಶ ಮಾಡಿಕೊಟ್ಟರು.

ಮಾಜಿ ಶಾಸಕ ಕೆ.ಜಿ.ಬೋಪಯ್ಯ ಅವರು ಪತ್ನಿ ಕುಂತಿಬೋಪಯ್ಯ, ಪುತ್ರಿ ಯಶಿಕ ಅವರೊಂದಿಗೆ ಮಡಿಕೇರಿಯ  ಜೂನಿಯರ್ ಕಾಲೇಜಿನಲ್ಲಿ ಮತಚಲಾಯಿಸಿದ್ದಾರೆ. ಜಿಲ್ಲೆಯಲ್ಲಿ ಬೆಳಗ್ಗಿನಿಂದಲೇ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಯತ್ತ ತೆರಳುತ್ತಿದ್ದ ದೃಶ್ಯ ಕಂಡು ಬಂದಿತ್ತಲ್ಲದೆ, ಉತ್ತಮ ಪ್ರತಿಕ್ರಿಯೆಯೂ ವ್ಯಕ್ತವಾಗುತ್ತಿರುವುದು ಕಂಡು ಬಂದಿದೆ.

Ashika S

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

4 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

4 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

4 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

4 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

6 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

6 hours ago