News Karnataka Kannada
Sunday, May 05 2024
ಮಡಿಕೇರಿ

ಮಡಿಕೇರಿ: ಯುವ ಮತದಾರರಲ್ಲಿ ಹೆಚ್ಚಿನ ಅರಿವು- ಡಾ.ಬಿ.ಸಿ.ಸತೀಶ

Greater awareness among young voters- Dr. B.C. Satheesh
Photo Credit : News Kannada

ಮಡಿಕೇರಿ: ಜಿಲ್ಲೆಯ 542 ಮತಗಟ್ಟೆ ವ್ಯಾಪ್ತಿಯಲ್ಲಿ ಈಗಾಗಲೇ ವಿದ್ಯುನ್ಮಾನ ಮತಯಂತ್ರ (ಇವಿಎಂ) ಮತ್ತು ವಿವಿ ಪ್ಯಾಟ್ ಅರಿವು ಕುರಿತು ಪ್ರಾತ್ಯಕ್ಷಿಕೆಯು ಆರಂಭವಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.

ನಗರದ ಉಪ ವಿಭಾಗಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಅವರು ಯುವ ಮತದಾರರಿಗೆ ಹೆಚ್ಚಿನ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಹೊಸದಾಗಿ ಮತದಾರರ ಗುರುತಿನ ಚೀಟಿ ಪಡೆದವರು ಪ್ರಾತ್ಯಕ್ಷಿಕೆಯ ಅವಕಾಶವನ್ನು ಬಳಸಿಕೊಳ್ಳಬೇಕು. ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆಯಾಗುವವರೆಗೂ ಈ ಅಣಕು ಮತದಾನ ನಡೆಯಲಿದ್ದು, ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಕೋರಿದರು.

ಈಗಾಗಲೇ ವಿದ್ಯುನ್ಮಾನ ಮತಯಂತ್ರ ಮತ್ತು ವಿವಿಪ್ಯಾಟ್ ಅಣಕು ಪ್ರದರ್ಶನವು ಜಿಲ್ಲಾಧಿಕಾರಿ ಕಚೇರಿ ಹಾಗೂ ಎರಡು ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಅವರ ಕಚೇರಿಯಲ್ಲಿ ಪ್ರಾತ್ಯಕ್ಷಿಕೆ ಏರ್ಪಡಿಸಲಾಗಿದೆ ಎಂದರು. ಹಾಗೆಯೇ ಮತಗಟ್ಟೆ ವ್ಯಾಪ್ತಿಯಲ್ಲಿ ನಿಗದಿತ ಅವಧಿಯಲ್ಲಿ ಅಣಕು ಪ್ರದರ್ಶನ ನಡೆಯಲಿದೆ ಎಂದರು.

18 ವರ್ಷ ಪೂರ್ಣಗೊಂಡವರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಮುಂದಾಗಬೇಕು ಎಂದು ಅವರು ಮನವಿ ಮಾಡಿದರು.

ರಾಜಕೀಯ ಪಕ್ಷಗಳ ಪ್ರಮುಖರೊಂದಿಗೆ ಚರ್ಚಿಸಿದ ಜಿಲ್ಲಾಧಿಕಾರಿ ಅವರು ಕಳೆದ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಶೇ.60 ಕ್ಕಿಂತ ಕಡಿಮೆ ಮತದಾನವಾಗಿರುವ ಮತಗಟ್ಟೆಗಳಲ್ಲಿ ಹೆಚ್ಚಿನ ಮತದಾನವಾಗಲು ಅರಿವು ಮೂಡಿಸುವಂತೆ ಕೋರಿದರು.

ಜಿ.ಪಂ.ಸಿಇಒ ಡಾ.ಎಸ್.ಆಕಾಶ್, ಚುನಾವಣಾಧಿಕಾರಿಗಳಾದ ಯತೀಶ್ ಉಳ್ಳಾಲ್, ಶಬಾನಾ ಎಂ.ಶೇಖ್, ರಾಜಕೀಯ ಪಕ್ಷಗಳ ಪ್ರಮುಖರಾದ ಅಪ್ಪಣ್ಣ(ಬಿಜೆಪಿ), ತೆನ್ನಿರಾ ಮೈನಾ(ಕಾಂಗ್ರೆಸ್), ಗುಲಾಬಿ(ಜೆಡಿಎಸ್), ತಹಶೀಲ್ದಾರರಾದ ಕಿರಣ್, ಪ್ರಶಾಂತ್, ಇತರರು ಇದ್ದರು.

ವಿದ್ಯುನ್ಮಾನ ಮತಯಂತ್ರ ಪ್ರಾತ್ಯಕ್ಷಿಕೆ ಮತ್ತು ಅಣಕು ಮತದಾನ ಕಾರ್ಯದ ವೇಳಾಪಟ್ಟಿ ವಿವರ ಇಂತಿದೆ. ಮಾರ್ಚ್, 03 ರಿಂದ 06 ರವರೆಗೆ ಮಲ್ಲಿಕಾರ್ಜುನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೊತ್ನಳ್ಳಿ, ಬೆಟ್ಟದಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕುಂದಳ್ಳಿ ಅಂಗನವಾಡಿ ಕೇಂದ್ರ, ಹರಗ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಶಾಂತಳ್ಳಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ, ತಾಳ್ತಾರೆಶೆಟ್ಟಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಅಬ್ಬಿಮಠ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ತೋಳೂರುಶೆಟ್ಟಳ್ಳಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ, ಕೂತಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ದೊಡ್ಡತೋಳೂರು ಮತ್ತು ಚಿಕ್ಕತೋಳೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ ವಿದ್ಯುನ್ಮಾನ ಮತಯಂತ್ರ ಪ್ರಾತ್ಯಕ್ಷಿಕೆ ನಡೆಯಲಿದೆ.

ಮಾರ್ಚ್, 07 ರಿಂದ 09 ರವರೆಗೆ ಯಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಲ್ಕಂದೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಹಾನಗಲ್ಲು ಶೆಟ್ಟಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಸೋಮವಾರಪೇಟೆ(ಎಲ್‍ಡಬ್ಲ್ಯು) ಒಎಲ್‍ವಿ ಕಾನ್ವೆಂಟ್, ಸೋಮವಾರಪೇಟೆ ಆರ್‍ಡಬ್ಲ್ಯು ಒಎಲ್‍ವಿ ಕಾನ್ವೆಂಟ್, ಸೋಮವಾರಪೇಟೆ ಚೌಡ್ಲು ಜ್ಞಾನವಿಕಾಸ ಶಾಲೆ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಬಳಗುಂದ(ಎಸ್‍ಡಬ್ಲ್ಯು) ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಬಳಗುಂದ(ಎಂಡಬ್ಲ್ಯು) ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಬಳಗುಂದ(ಎನ್‍ಡಬ್ಲ್ಯು) ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕುಸುಬೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಬೆಳೂರು(ಕಾರೆಕೊಪ್ಪ) ಅಂಗನವಾಡಿ ಕೇಂದ್ರ, ಯಡವನಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ.
ಮಾರ್ಚ್, 10 ಮತ್ತು 13 ರಂದು ತಾಕೇರಿ(ಎಲ್‍ಡಬ್ಲ್ಯು), (ಆರ್‍ಡಬ್ಲ್ಯು) ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಬಿಳಿಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಿರಗಂದೂರು ಅಂಗನವಾಡಿ ಕೇಂದ್ರ, ಹಾರಂಗಿ(ಯಡವಾರೆ) ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಐಗೂರು(ಎಸ್‍ಡಬ್ಲ್ಯು) ಸರ್ಕಾರಿ ಪದವಿ ಪೂರ್ವ ಕಾಲೇಜು, ಐಗೂರು(ಎನ್‍ಡಬ್ಲ್ಯು) ಸರ್ಕಾರಿ ಜೂನಿಯರ್ ಕಾಲೇಜು, ಹೊಸತೋಟ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ.

ಮಾರ್ಚ್, 14 ರಿಂದ 16 ರವರೆಗೆ ದೊಡ್ಡಮಳ್ತೆ, ಗೆಜ್ಜೆಹನಕೋಡು, ಕೂಗೆಕೋಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ವಳಗುಂದ ಅಂಗನವಾಡಿ ಕೇಂದ್ರ, ಗೌಡಳ್ಳಿ(ಎಲ್‍ಡಬ್ಲ್ಯು), (ಆರ್‍ಡಬ್ಲ್ಯು) ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ, ಸುಂಟಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ನಂದಿಗುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಿಬ್ಬೆಟ್ಟ, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಗೋಪಾಲಪುರ(ಎಲ್‍ಡಬ್ಲ್ಯು),(ಆರ್‍ಡಬ್ಲ್ಯು) ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ವಿದ್ಯುನ್ಮಾನ ಮತಯಂತ್ರ ಪ್ರಾತ್ಯಕ್ಷಿಕೆ ನಡೆಯಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು