News Karnataka Kannada
Monday, April 29 2024
ಮಡಿಕೇರಿ

ಮಡಿಕೇರಿ: ಅಕ್ರಮ ಮಾದಕ ವಸ್ತು ಮಾರಾಟ, ಓರ್ವ ಬಂಧನ

ಕಳ್ಳತನ
Photo Credit : Pexels

ಮಡಿಕೇರಿ: ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ ಸರಹದ್ದಿನಲ್ಲಿ ಅಕ್ರಮವಾಗಿ ಮಾದಕ ವಸ್ತುಗಳನ್ನು ಮಾರಾಟ ಮಾಡುತಿದ್ದ ವ್ಯಕ್ತಿಗಳನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸ್ ಯಶಸ್ವಿಯಾಗಿದೆ.

ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ ಮಾರಾಟದ ಬಗ್ಗೆ ನಮ್ಮ ಕಛೇರಿ ಠಾಣೆಗಳಿಗೆ ಸಾರ್ವಜನಿಕರಿಂದ ದೂರು ಬರುತ್ತಿದ್ದು, ಮಾದಕ ವಸ್ತುಗಳ ಮಾರಾಟವನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಎಂ.ಜಗದೀಶ್, ಡಿವೈಎಸ್ಪಿ, ಮಡಿಕೇರಿ ಉಪ ವಿಭಾಗ, ಉಮೇಶ್.ಯು, ಪಿಐ, ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ ಮತ್ತು ಶ್ರೀನಿವಾಸಲು ಪಿಎಸ್ಐ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ ಹಾಗೂ ಸಿಬ್ಬಂದಿಗಳ ತಂಡವನ್ನು ರಚಿಸಿ ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿ 05-06-2023 ರಂದು ಎಂ.ಬಾಡಗ ಗ್ರಾಮ ಕಿಗ್ಗಾಲು ರಸ್ತೆಯ ಜಂಕ್ಷನ್ ಬಳಿ ಮಾದಕ ವಸ್ತು ಮಾರಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಹಿನ್ನಲೆಯಲ್ಲಿ ದಾಳಿ ನಡೆಸಿ ಮೂರ್ನಾಡು ನಿವಾಸಿಯಾದ, ಅಲ್ತಾಫ್ ಹುಸೇನ್ , (34 ವರ್ಷ )ಎಂಬುವವರನ್ನು 12.150 ಗ್ರಾಂ ಎಮ್ ಡಿಎಮ್ಎ(MDMA) ನಿಷೇದಿತ ಮಾದಕ ವಸ್ತುವಿನೊಂದಿಗೆ ದಸ್ತಗಿರಿ ಮಾಡಿ ಕ್ರಮ ಕೈಗೊಳ್ಳಲಾಗಿದೆ.

ಸದರಿ ಪ್ರಕರಣದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿರವರುಗಳನ್ನು ಕೆ. ರಾಮರಾಜನ್, ಐಪಿಎಸ್, ಪೊಲೀಸ್ ಅಧೀಕ್ಷಕರು, ಕೊಡಗು ಜಿಲ್ಲೆ, ಮಡಿಕೇರಿ ರವರು ಶ್ಲಾಘಿಸಿರುತ್ತಾರೆ.

ವಿಶೇಷ ಸೂಚನೆ:- ಯುವಕ-ಯುವತಿಯರು ಮಾದಕ ವ್ಯಸನಿಗಳಾಗಿ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುವುದನ್ನು ತಡೆಗಟ್ಟುವ ಸಲುವಾಗಿ ಮಾದಕ ವಸ್ತುಗಳನ್ನು ಬಳಸುವ ಹಾಗೂ ಮಾರಾಟ ಮಾಡುವ ವ್ಯಕ್ತಿಗಳು ಕಂಡುಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಹಾಗೂ ಕೆ.ಎಸ್.ಪಿ ತಂತ್ರಾಶದ ಮೂಲಕ ಮಾಹಿತಿ ನೀಡುವಂತೆ ಹಾಗೂ ಸಹಕರಿಸುವಂತೆ ಸಾರ್ವಜನಿಕರಲ್ಲಿ ಕೋರುತ್ತೇವೆ. ಅಕ್ರಮ ಚಟುವಟಿಕೆಗಗಳ ಕುರಿತು ಮಾಹಿತಿ ಒದಗಿಸುವವರ ವಿವರಗಳನ್ನು ಬಹಿರಂಗಪಡಿಸುವುದಿಲ್ಲ.
( Source – Kodagu Dist. Police )

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1620
Coovercolly Indresh

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು