Categories: ಮಡಿಕೇರಿ

ಮಡಿಕೇರಿ :ಅ.28ಕ್ಕೆ ಜೀವ ವೈವಿಧ್ಯದ ಸಂರಕ್ಷಣೆ ಕುರಿತು ‘ಮಾಹಿತಿ ಕಾರ್ಯಾಗಾರ’

ಮಡಿಕೇರಿ: ಕರ್ನಾಟಕ ಜೀವ ವೈವಿಧ್ಯ ಮಂಡಳಿ ಮತ್ತು ಕರ್ನಾಟಕ ರಾಜ್ಯ ಔಷಧಿ ಗಿಡಮೂಲಿಕಾ ಪ್ರಾಧಿಕಾರ, ಮಡಿಕೇರಿ ಅರಣ್ಯ ವಿಭಾಗ ಸಹಯೋಗದಲ್ಲಿ ಜೀವ ವೈವಿಧ್ಯದ ಸಂರಕ್ಷಣೆ, ಸುಸ್ಥಿರ ಬಳಕೆ ಮತ್ತು ಔಷಧಿ ಸಸ್ಯ ಸಂಪತ್ತಿನ ಕುರಿತು ‘ಮಾಹಿತಿ ಕಾರ್ಯಾಗಾರ’ ಅಕ್ಟೋಬರ್ 28ರಂದು ಮಡಿಕೇರಿಯಲ್ಲಿ ನಡೆಯಲಿದೆ.

ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಅಧ್ಯಕ್ಷತೆಯಲ್ಲಿ ನಗರದ ಕ್ರಿಸ್ಟಲ್ ಕೋರ್ಟ್ ಸಭಾಂಗಣದಲ್ಲಿ ಬೆಳಗ್ಗೆ 10 ಗಂಟೆಯಿಂದ ನಡೆಯಲಿರುವ ಕಾರ್ಯಕ್ರಮವನ್ನು ವಿರಾಜಪೇಟೆ ಕ್ಷೇತ್ರ ಶಾಸಕ ಕೆ.ಜಿ. ಬೋಪಯ್ಯ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುಜಾ ಕುಶಾಲಪ್ಪ, ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ, ಜಿಲ್ಲಾ ಎಸ್ಪಿ ಕ್ಯಾ.ಎಂ.ಎ. ಅಯ್ಯಪ್ಪ, ಜಿಪಂ ಸಿಇಒ ಭಂವರ್ ಸಿಂಗ್ ಮೀನಾ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಜಿ.ಎ. ಸುದರ್ಶನ್, ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಅನಿತ ಎಸ್. ಅರೇಕಲ್, ಕೊಡಗು ಜಿಲ್ಲಾ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬಿ.ಎನ್.ಎನ್. ಮೂರ್ತಿ ಪಾಲ್ಗೊಳ್ಳಲಿದ್ದಾರೆ.

ವಿಚಾರಗೋಷ್ಠಿ : ಉದ್ಘಾಟನಾ ಕಾರ್ಯಕ್ರಮದ ನಂತರ ವಿಚಾರಗೋಷ್ಠಿ ನಡೆಯಲಿದೆ. ಔಷಧಿ ಸಸ್ಯಗಳ ಮಾರುಕಟ್ಟೆ ವ್ಯವಸ್ಥೆ ಬಗ್ಗೆ ಟ್ರೀಲ್ಯಾಂಡ್ಸ್ ಫೌಂಡೇಷನ್‌ನ ಕೆ.ಎನ್. ಮೂರ್ತಿ, ಯಶಸ್ವಿ ಕೃಷಿ ಅರಣ್ಯ ನೆಡುತೋಪು ಮಾದರಿ ಬಗ್ಗೆ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ.ವಿ. ಮಹೇಶ್ವರಪ್ಪ, ಕೊಡಗಿನ ಔಷಧಿ ಸಸ್ಯ ಸಂಪತ್ತು ಮತ್ತು ಅವುಗಳ ಕೃಷಿ ವಿಚಾರವಾಗಿ ಔಷಧಿ ಸಸ್ಯ ಸಲಹೆಗಾರ ಡಾ.ಎಂ.ಜೆ. ಪ್ರಭು ವಿಷಯ ಮಂಡನೆ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ, ಜಿಲ್ಲಾ ಪಂಚಾಯಿತಿ ಅಧಿಕಾರಿಗಳು, ಸಿಬ್ಬಂದಿ ವರ್ಗ, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ.

ಯಶೋಗಾಥೆ : ಕೃಷಿ, ಅರಣ್ಯ ಮತ್ತು ಜೀವ ವೈವಿಧ್ಯ ಕ್ಷೇತ್ರದಲ್ಲಿ ಸಾಧನೆ ತೋರಿದವರ ಕುರಿತು ಮಾಹಿತಿ ನೀಡುವ ಕಾರ್ಯಕ್ರಮ ಪೊನ್ನಂಪೇಟೆ ಅರಣ್ಯ ಮಹಾ ವಿದ್ಯಾಲಯದ ಡೀನ್ ಡಾ.ಸಿ.ಜಿ. ಕುಶಾಲಪ್ಪ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಅರಣ್ಯ ಮಹಾವಿದ್ಯಾಲಯದ ಸಹ ಪ್ರಾಧ್ಯಾಪಕ ಡಾ.ಬಿ.ಎನ್. ಸತೀಶ್, ಪ್ರಗತಿಪರ ಕೃಷಿಕರಾದ ನಾಪಂಡ ಪೂಣಚ್ಚ, ಮಂದ್ರೀರ ತೇಜಸ್ ತಮ್ಮ ಅನಿಸಿಕೆ ಹಂಚಿಕೊಳ್ಳಲಿದ್ದಾರೆ. ಬಳಿಕ ಅತಿಥಿಗಳೊಂದಿಗೆ ಸಂವಾದ ನೆರವೇರಲಿದೆ.

Sneha Gowda

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

5 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

5 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

5 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

6 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

7 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

7 hours ago