Categories: ಮಡಿಕೇರಿ

ಸೈನಿಕ ಶಾಲೆ ಕೊಡಗಿನಲ್ಲಿ ಬ್ರಹ್ಮಗಿರಿ ಸಹೋದಯ ಕ್ಲಸ್ಟರ್‌ನ ಸಿ ಬಿ ಎಸ್ ಸಿ ಅಂತರ ಶಾಲೆಗಳ ಕ್ರೀಡಾ ಕೂಟ

ಕುಶಾಲನಗರ, ಡಿ.16: ದಿನಾಂಕ 16.12.2022ರಂದು ಸೈನಿಕ ಶಾಲೆ ಕೊಡಗಿನಲ್ಲಿ ಬ್ರಹ್ಮಗಿರಿ ಸಹೋದಯ ಸಂಕೀರ್ಣ ಸಿ ಬಿ ಎಸ್ ಸಿ ಅಂತರ ಶಾಲೆಗಳ ಪುಟ್‌ಬಾಲ್ ಮತ್ತು ಹ್ಯಾಂಡ್‌ಬಾಲ್ ಕ್ರೀಡಾ ಕೂಟವನ್ನು ಆಯೋಜಿಸಲಾಗಿತ್ತು.

ಪ್ರಸ್ತುತ ಕ್ರೀಡಾಕೂಟಕ್ಕೆ ಸೈನಿಕ ಶಾಲೆ ಕೊಡಗು, ಸೂಳ್ಯದ ಕೆ ವಿ ಜಿ ಇಂಟರ್‌ನ್ಯಾಷನಲ್ ಪಬ್ಲಿಕ್ ಶಾಲೆ, ನಾಪೋಕ್ಲುವಿನ ಅಂಕುರ್ ಪಬ್ಲಿಕ್ ಶಾಲೆ, ಅರ್ಮೆರಾದ ಎಸ್ ಎಂ ಎಸ್ ಅಕಾಡೆಮಿ ಆಫ್ ಸೆಂಟ್ರಲ್ ಎಜುಕೇಷನ್, ಮಡಿಕೇರಿಯ ಎ ಎಲ್ ಜಿ ಕ್ರೆಸೆಂಟ್ ಶಾಲೆ ಹಾಗೂ ಅತೂರಿನ ನ್ಯಾಷನಲ್ ಅಕಾಡೆಮಿ ಶಾಲೆ ಒಟ್ಟು 06 ಶಾಲೆಗಳು ಭಾಗವಹಿಸಿದ್ದವು. ಪ್ರಸ್ತುತ ಸ್ಪರ್ಧೆಯಲ್ಲಿ 12 ರಿಂದ 16 ವಯೋಮಾನದ ಬಾಲಕರಿಗೆ ಪುಟ್‌ಬಾಲ್ ಹಾಗೂ ಬಾಲಕಿಯರಿಗೆ ಹ್ಯಾಂಡ್‌ಬಾಲ್ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಕ್ರೀಡಾಕೂಟದ ಉದ್ಘಾಟನೆಯನ್ನು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸೈನಿಕ ಶಾಲೆ ಕೊಡಗು ಪ್ರಾಂಶುಪಾಲರಾದ ಕರ್ನಲ್ ಜಿ ಕಣ್ಣನ್‌ರವು ಜ್ಯೋತಿ ಬೆಳಗುವುದರ ಮೂಲಕ ಉದ್ಭಾಟಿಸಿದರು.

ಪ್ರಸ್ತುತ ಸ್ಪರ್ಧೆಯ ಬಾಲಕರ ಪುಟ್‌ಬಾಲ್ ವಿಭಾಗದಲ್ಲ್ಲಿ ನಾಪೊಕ್ಲುವಿನ ಅಂಕುರ್ ಪಬ್ಲಿಕ್ ಶಾಲೆ ಪ್ರಥಮ ಸ್ಥಾನವನ್ನು ಪಡೆದರೆ, ಸೂಳ್ಯದ ಕೆ ವಿ ಜಿ ಇಂಟರ್‌ನ್ಯಾಷನಲ್ ಪಬ್ಲಿಕ್ ಶಾಲೆ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿತು. ಹಾಗೆಯೇ ಬಾಲಕಿಯರ ಹ್ಯಾಂಡ್‌ಬಾಲ್ ವಿಭಾಗದಲ್ಲಿ ರ‍್ಮೆರಾದ ಎಸ್ ಎಂ ಎಸ್ ಅಕಾಡೆಮಿ ಆಫ್ ಸೆಂಟ್ರಲ್ ಎಜುಕೇಷನ್ ಶಾಲೆಯು ಪ್ರಥಮ ಸ್ಥಾನವನ್ನು ಪಡೆದುಕೊಂಡರೆ, ನಾಪೋಕ್ಲುವಿನ ಅಂಕುರ್ ಪಬ್ಲಿಕ್ ಶಾಲೆ ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟಿತು. ಪುಟ್ಬಾಲ್ ವಿಭಾಗದಲ್ಲಿ ಅತ್ಯುತ್ತಮ ಆಟಗಾರ ಪ್ರಶಸ್ತಿಗೆ ಅಂಕುರ್ ಪಬ್ಲಿಕ್ ಶಾಲೆಯ ಮಾಸ್ಟರ್ ಅಖಿಲ್ ಭಾಜನರಾದರೆ, ಹ್ಯಾಂಡ್‌ಬಾಲ್ ವಿಭಾಗದಲ್ಲಿ ಅರ್ಮೆರಾದ ಎಸ್ ಎಂ ಎಸ್ ಅಕಾಡೆಮಿ ಆಫ್ ಸೆಂಟ್ರಲ್ ಎಜಕೇಷನ್ ಶಾಲೆಯ ಕುಮಾರಿ ಸಂಜನ ಅತ್ಯುತ್ತಮ ಆಟಗಾರ್ತಿ ಪ್ರಶಸ್ತಿಗೆ ಭಾಜನರಾದರು.

ಇದೇ ದಿನದಂದು ಸಂಜೆ ಕ್ರೀಡಾಕೂಟದ ಸಮಾರೋಪ ಸಮಾರಂಭವನ್ನು ಆಯೋಜಿಸಲಾಗಿದ್ದು, ಸೈನಿಕ ಶಾಲೆ ಕೊಡಗಿನ ಪ್ರಾಂಶುಪಾಲರಾದ ಕರ್ನಲ್ ಜಿ ಕಣ್ಣನ್‌ರವರು ಆಗಮಿಸಿದ್ದರು. ವಿಜೇತ ತಂಡಗಳಿಗೆ ಪ್ರಶಸ್ತಿಪತ್ರ, ಪಾರಿತೋಷಕ ಮತ್ತು ಪದಕಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯ ಅತಿಥಿಗಳು, ವಿಜೇತ ತಂಡಗಳಿಗೆ ಅಭಿನಂದನೆ ಸಲ್ಲಿಸಿದರು. ಪ್ರಸ್ತುತ ಕ್ರೀಡಾಕೂಟದ ಆಯೋಜನೆಯು ಸೈನಿಕ ಶಾಲೆಯ ಇತಿಹಾಸದಲ್ಲಿ ಒಂದು ಹೊಸ ಮೈಲಿಗಲ್ಲನ್ನು ನಿರ್ಮಿಸಿದೆ. ಎಲ್ಲಾ ಸ್ಪರ್ಧಾಳಗಳು ತಮ್ಮ ಕ್ರೀಡಾ ಸ್ಪೂರ್ತಿಯಿಂದ ಪಾಲ್ಗೊಂಡು ಕ್ರೀಡಾಕೂಟಕ್ಕೆ ಅರ್ಥಪೂರ್ಣ ಮ್ಯೌಲ್ಯವನ್ನು ನೀಡಿದರು. ಸ್ಪರ್ಧೆಯಲ್ಲಿ ಸೋಲು-ಗೆಲುವು ಸಾಮಾನ್ಯ. ಆದರೆ ಸ್ಪರ್ಧೆಯಲ್ಲಿ ಪಾಲ್ಗೊಂಡು ಗೆಲುವಿಗಾಗಿ ಹೋರಾಟ ನಡೆಸುವುದು ಮುಖ್ಯ.. ಪರಾಭವ ಹೊಂದಿದ ತಂಡಗಳು ತಮ್ಮಲ್ಲಿರುವ ನ್ಯೂನ್ಯತೆಯನ್ನ ಸರಿಪಡಿಸಿಕೊಂಡು ಭವಿಷ್ಯದ ಸ್ಪರ್ಧೆಗೆ ತಮ್ಮನ್ನು ತಾವು ಸಮರ್ಥಗೊಳಿಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು. ಈ ಸಂದರ್ಭದಲ್ಲಿ ಕ್ರೀಡಾಕೂಟದ ಆಯೋಜನೆಗೆ ಸಹಕರಿಸಿದ ಸಹೋದಯ ಬ್ರಹ್ಮಗಿರಿ ಕ್ಲಸ್ಟರ್‌ನ ಎಲ್ಲಾ ಸಿ ಬಿ ಎಸ್ ಸಿ ಶಾಲೆಗಳಿಗೆ ಧನ್ಯವಾದಗಳನ್ನು ಅರ್ಪಿಸಿದರು.

ಪ್ರಸ್ತುತ ಸ್ಪರ್ಧೆಯ ಸಂಚಾಲಕರಾಗಿ ಗಣಿತ ಶಿಕ್ಷಕರಾದ ಸುರೇಶ್, ಬಿ ಹೆಚ್ ಎಂ ರನೀಶ್, ಸಿ ಹೆಚ್ ಎಂ ಸ್ಟಾಲಿನ್, ಕಾರ್ಪೋರಲ್ ಶಿವ, ಸಾರ್ಜೆಂಟ್ ಸಿ ರಾಯ್ ಕಾರ್ಯನಿರ್ವಹಿಸಿದರು.

ಈ ಸಂದರ್ಭದಲ್ಲಿ ಶಾಲೆಯ ಬೋಧಕ, ಬೋಧಕೇತರ ಸಿಬ್ಬಂದಿವರ್ಗದವರೊಂದಿಗೆ, ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Gayathri SG

Recent Posts

ಇಂದು ಎಚ್‌ ಡಿ ರೇವಣ್ಣ ಬೇಲ್​ ಅರ್ಜಿ ವಿಚಾರಣೆ

ಕಿಡ್ನಾಪ್‌ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲುಪಾಲಾಗಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ಇಂದು ಮತ್ತೆ ಜಾಮೀನು ಅರ್ಜಿ ವಿಚಾರಣೆ…

44 mins ago

ಚುನಾವಣೆಗೂ ಮುನ್ನ ಸ್ಫೋಟ : ಮೂವರು ಅಪ್ರಾಪ್ತರು ಸೇರಿ ನಾಲ್ವರು ಸಾವು!

ಚುನಾವಣೆಗೂ ಮುನ್ನ ದಿನವೇ ಜಾರ್ಖಂಡ್‌ನ ಪಲಮುವಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಅಪ್ರಾಪ್ತರು ಸೇರಿದಂತೆ ಕನಿಷ್ಠ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು…

1 hour ago

ಚುನಾವಣೆ ಹೊತ್ತಲ್ಲೆ ಶಂಕಿತ ಪಾಕ್ ಡ್ರೋನ್ ಹಾರಾಟ : ಸೇನೆಯಿಂದ ಗುಂಡಿನ ದಾಳಿ

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಎಲ್‌ಒಸಿ ಬಳಿ ಶನಿವಾರ ತಡರಾತ್ರಿ ಶಂಕಿತ ಪಾಕಿಸ್ತಾನಿ ಡ್ರೋನ್ ಮೇಲೆ ಭಾರತೀಯ ಸೇನಾ…

1 hour ago

ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆಯಾಗುವ ನಿರೀಕ್ಷೆ: ಯೆಲ್ಲೋ ಅಲರ್ಟ್

ಇಂದು ರಾಜ್ಯದ 15 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ದಕ್ಷಿಣ ಕನ್ನಡ, ಉಡುಪಿ,…

2 hours ago

ಮ್ಯಾಗ್ನಸ್ ಕಾರ್ಲ್‌ಸನ್‌ ವಿರುದ್ಧ ಆರ್.ಪ್ರಜ್ಞಾನಂದಗೆ ಮತ್ತೊಂದು ಗೆಲುವು

ಸೂಪರ್‌ಬಿಟ್‌ ರ್‍ಯಾಪಿಡ್ ಮತ್ತು ಬ್ಲಿಟ್ಜ್‌ ಚೆಸ್‌ ಟೂರ್ನಿಯಲ್ಲಿ ವಿಶ್ವದ ಅಗ್ರಮಾನ್ಯ ಆಟಗಾರ ನಾರ್ವೆಯ ಮ್ಯಾಗ್ನಸ್ ಕಾರ್ಲ್‌ಸನ್‌ ವಿರುದ್ಧ ಭಾರತದ ಗ್ರ್ಯಾಂಡ್…

2 hours ago

ನಟ ಚೇತನ್​ ಚಂದ್ರ ಮೇಲೆ 20 ಜನರಿಂದ ಹಲ್ಲೆ : ದೂರು ದಾಖಲು

ಕನ್ನಡ ಸಿನಿಮಾ ಹಾಗೂ ಕಿರುತೆರೆಯ ಯುವ ನಟ ಚೇತನ್ ಚಂದ್ರ ಮೇಲೆ ಬೆಂಗಳೂರಿನಲ್ಲಿ ಹಲ್ಲೆ ನಡೆದಿದೆ. ಕನಕಪುರ ರಸ್ತೆಯ ಕಗ್ಗಲಿಪುರದಲ್ಲಿ…

2 hours ago