News Karnataka Kannada
Wednesday, May 01 2024
ಮಡಿಕೇರಿ

ಪತ್ರಕರ್ತರು ವ್ಯವಸ್ಥೆಯೊಳಗಿನ ತಪ್ಪನ್ನು ತಿದ್ದುವ ಮೂಲಕ ಪ್ರಜಾಪ್ರಭುತ್ವ ರಕ್ಷಣೆ ಮಾಡಬೇಕು

Journalists should protect democracy by correcting mistakes within the system: K G Bopaiah
Photo Credit : By Author

ಮಡಿಕೇರಿ: ಪತ್ರಕರ್ತರು ನಿರ್ಭೀತಿಯಿಂದ ಕೆಲಸ ಮಾಡುವುದರೊಂದಿಗೆ ವ್ಯವಸ್ಥೆಯೊಳಗಿನ ತಪ್ಪನ್ನು ತಿದ್ದುವ ಮೂಲಕ ಪ್ರಜಾಪ್ರಭುತ್ವ ರಕ್ಷಣೆ ಮಾಡಬೇಕೆಂದು ವೀರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ಕರೆ ನೀಡಿದರು.

ಕೊಡಗು ಪ್ರೆಸ್‌ಕ್ಲಬ್ ಬೆಳ್ಳಿಹಬ್ಬ ಹಿನ್ನೆಲೆಯಲ್ಲಿ ಇಲ್ಲಿನ ಫೀಲ್ಡ್‌ಮಾರ್ಷಲ್ ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ಭಾನುವಾರ ನಡೆದ ಕೊಡಗು ಪ್ರೆಸ್ ಕ್ಲಬ್ ಪ್ರೀಮಿಯರ್‌ ಲೀಗ್ – 3 ಕ್ರಿಕೆಟ್ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದರು.

ಪತ್ರಕರ್ತರು ಸಂವಿಧಾನ ರಕ್ಷಕರು. ನ್ಯಾಯಾಂಗ, ಶಾಸಕಾಂಗ, ಕಾರ್ಯಾಂಗ ತಪ್ಪು ದಾರಿ ತುಳಿದರೆ ಎಚ್ಚರಿಸುವ ಕೆಲಸ ಪತ್ರಿಕಾ ರಂಗ ಮಾಡುತ್ತಿದೆ. ಒತ್ತಡದಲ್ಲಿರುವ ಪತ್ರಕರ್ತರಿಗೆ ಕ್ರೀಡಾಕೂಟಗಳು ದೈಹಿಕ ಹಾಗೂ ಮಾನಸಿಕ ಉಲ್ಲಾಸ ನೀಡುತ್ತದೆ. ಈ ರೀತಿ ವೇದಿಕೆಯಿಂದ ಪತ್ರಕರ್ತರ ಪ್ರತಿಭೆ ಅನಾವರಣಕ್ಕೆ ಅವಕಾಶವಾಗುತ್ತದೆ ಎಂದರು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ರಾಜ್ಯ ಒಕ್ಕಲಿಗರ ಸಂಘದ ಕಾರ್ಯಾಧ್ಯಕ್ಷ ಹರಪಳ್ಳಿ ರವೀಂದ್ರ ಮಾತನಾಡಿ, ಪತ್ರಿಕಾರಂಗ ಆಡಳಿತ ವ್ಯವಸ್ಥೆಯಲ್ಲಿ

ಪ್ರಮುಖ ಪಾತ್ರವಹಿಸುತ್ತದೆ. ವ್ಯವಸ್ಥೆಯ ಲೋಪದೋಷ, ಅನ್ಯಾಯ, ಅನಾಚಾರ ಬಯಲಿಗೆಳೆಯುವ ವ್ಯವಸ್ಥೆ ಪತ್ರಿಕಾರಂಗದಲ್ಲಿದೆ. ಸಮಾಜದ ನೈಜಸ್ಥಿತಿ ತಿಳಿಸುತ್ತಾ ಒಳಿತು ಕೆಡುಕುಗಳಿಗೆ ಸಾಕ್ಷಿಯಾಗುವ ಪತ್ರಕರ್ತರನ್ನು ಸೈನಿಕರಿಗೆ ಹೋಲಿಸಬಹುದು ಎಂದು ಅಭಿಪ್ರಾಯಪಟ್ಟರು.

ಮತ್ತೊಬ್ಬ ಮುಖ್ಯ ಅತಿಥಿ ಮುಳಿಯ ಜ್ಯುವೆಲ್ಸ್ ಮಡಿಕೇರಿ ಶಾಖೆ ವ್ಯವಸ್ಥಾಪಕ ತೀತಿಮಾಡ ಸೋಮಣ್ಣ ಮಾತನಾಡಿ ಕ್ರೀಡೆ ನವೋಲ್ಲಾಸ ತುಂಬುತ್ತದೆ. ಆಟಗಳು ಸ್ಫೂರ್ತಿ ಕೊಡುತ್ತದೆ. ದುಶ್ಚಟಗಳಿಂದ ದೂರ ಮಾಡುತ್ತದೆ ಎಂದರು. ಕೊಡಗು ಪ್ರೆಸ್‌ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕೊಡಗು ಪ್ರೆಸ್‌ಕ್ಲಬ್ ಪ್ರಧಾನ ಕಾರ್ಯದರ್ಶಿ ರೆಜಿತ್ ಕುಮಾರ್ ಗುಹ್ಯ ಕಾರ್ಯಕ್ರಮ ನಿರೂಪಿಸಿದರು. ಹಿರಿಯ ಉಪಾಧ್ಯಕ್ಷ ಸುಬ್ರಹ್ಮಣಿ ಸ್ವಾಗತಿಸಿದರು. ಚಂದ್ರಮೋಹನ್ ವಂದಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1620
Coovercolly Indresh

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು