ಮಡಿಕೇರಿ: ಭಾಗಮಂಡಲ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಸುನಿಲ್ ಕುಮಾರ್ ರವರಿಗೆ ಈ ಬಾರಿಯ ಪ್ರತಿಷ್ಠಿತ ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ಟ್ರೋಫಿ ಲಭಿಸಿದೆ .
ಮಡಿಕೇರಿಯ ಪೊಲೀಸ್ ಕವಾಯಿತು ಮೈದಾನದಲ್ಲಿ ಇಂದು ನಡೆದ ಕೊಡಗು ಜಿಲ್ಲಾ ಪೊಲೀಸ್ ಧ್ವಜ ದಿನಾಚರಣೆ ಮತ್ತು ಕಾರ್ಯಪ್ಪ ಟ್ರೋಫಿ ಪ್ರಧಾನ ಸಮಾರಂಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ರಾಮರಾಜನ್ ರವರು ಟ್ರೋಫಿಯನ್ನು ವಿತರಿಸಿ ಸುನಿಲ್ ಕುಮಾರ್ ರವರ ಕಾರ್ಯದಕ್ಷತೆಯನ್ನು ಶ್ಲಾಘಿಸಿದರು. ಸುನಿಲ್ ಕುಮಾರ್ ರವರು ಗಾಂಜಾ ದಂಧೆ ಸೇರಿದಂತೆ ವಿವಿಧ ಅಪರಾಧ ಪ್ರಕರಣಗಳ ಪತ್ತೆ ಕಾರ್ಯದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.