Categories: ಮಡಿಕೇರಿ

ಕೊಡಗು: ಗರಗಂದೂರಿನಲ್ಲಿ ಎರಡು ಗೋವುಗಳ ಹತ್ಯೆ ಪತ್ತೆ, ಹಿಂದು ಜಾಗರಣ ವೇದಿಕೆ ಆಕ್ರೋಶ

ಕೊಡಗು: ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಗರಗಂದೂರು ‘ಬಿ’ ಸಮೀಪದ ಹಾರಂಗಿ ಬ್ಯಾಕ್ ವಾಟರ್ ಪ್ರದೇಶದ ಬಳಿ ಕರೀಂ ಎಂಬವರ ಮಗ ಲತೀಫ್ ಎಂಬಾತನ ಕಾಪಿ ತೋಟದಲ್ಲಿ ಎರಡು ದಿನಗಳ ಹಿಂದೆ 2 ಗೋವುಗಳ ಹತ್ಯೆ ನಡೆಸಿ ಕಳೇಬರವನ್ನು ಮಣ್ಣಿನಡಿ ಹೂತು ಹಾಕಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು ಈ ದಿನ ಬೆಳಿಗ್ಗೆ ಖಚಿತ ಮಾಹಿತಿ ಮೇರೆಗೆ ಹಿಂದು ಜಾಗರಣ ವೇದಿಕೆಯ ಹೋಸತೋಟ ಮತ್ತು ಮಾದಾಪುರ ಭಾಗದ ಕಾರ್ಯಕರ್ತರು ಘಟನೆ ಸ್ಥಳಕ್ಕೆ ಜಮಾಯಿಸಿ ಪೋಲೀಸರನ್ನು ಕರೆಸಿ ಸ್ಥಳ ಪರಿಶೀಲನೆ ನಡೆಸಿದ ಸಂದರ್ಭ ಒಟ್ಟು ಪ್ರಕರಣ ಬೆಳಕಿಗೆ ಬಂದಿದೆ.

ಗೋವಿನ ಚರ್ಮ ಹಾಗೂ ಉದರದೊಳಗಿನ ಭಾಗಗಳನ್ನು ಮಣ್ಣಿನಡಿ ಹೂತು ಹಾಕಿರುವುದು ಪತ್ತೆಯಾಗಿದ್ದು ಈ ಸಂದರ್ಭ ಪೋಲೀಸರು ಸ್ಥಳಕ್ಕೆ ಪಶುವೈದ್ಯರನ್ನು ಕರೆಸಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಗೋಹತ್ಯೆ ನಿಷೇಧವಿರುವ ಕೊಡಗು ಜಿಲ್ಲೆಯಲ್ಲಿ ಪದೇ ಪದೇ ಗೋಹತ್ಯೆ , ಗೋಮಾಂಸ ಮಾರಾಟ ,ಗೋವುಗಳ ಅಕ್ರಮ ಕಳ್ಳಸಾಗಾಣಿಕೆ ನಡೆಯುತ್ತಿದ್ದರೂ ಪೋಲೀಸ್ ಇಲಾಖೆ ಅವುಗಳನ್ನು ಮಟ್ಟ ಹಾಕುವಲ್ಲಿ ಸಂಪೂರ್ಣ ವಿಫಲವಾಗಿದೆಯೆಂದು ಹಿಂದು ಜಾಗರಣ ವೇದಿಕೆಯ ಪ್ರಮುಖರು ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಮಾಂಸಾಹಾರಿಗಳಿಗೆ ಸೇವಿಸಲು ಬೇಕಾದಷ್ಟು ಬೇರೆ ಬೇರೆ ಬಗೆಯ ಮಾಂಸಗಳು ಮಾರುಕಟ್ಟೆಗಳಲ್ಲಿ ಯಥೇಚ್ಛವಾಗಿ ಲಭ್ಯವಿದೆ. ಆದರೆ ಹಿಂದು ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸುವುದಕ್ಕಾಗಿಯೇ ಗೋಹತ್ಯೆಗಳನ್ನು ದುರುಳರು ಮಾಡುತ್ತಿದ್ದಾರೆ ಎಂದು ಹಿಂದು ಜಾಗರಣ ವೇದಿಕೆಯ ಜಿಲ್ಲಾ ಸಮಿತಿಯ ಪ್ರಮುಖರಾದ ಸುನಿಲ್ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಕ್ರೈಂ ಇಂಟಲಿಜೆನ್ಸ್ ,ವಿಲೇಜ್ ಬೀಟ್ , ಡಿ.ಸಿ.ಐ.ಬಿ.,ಸೈಬರ್ ಕ್ರೈಂ ನಂತಹ ಪ್ರಮುಖ ವಿಭಾಗಗಳನ್ನ ಹೊಂದಿರುವ ಕೊಡಗಿನ ಪೋಲೀಸ್ ಇಲಾಖೆಗೆ ಈ ಬಗ್ಗೆ ಸಂಪೂರ್ಣ ಮಾಹಿತಿಯಿದ್ದು ಕುಕೃತ್ಯ ನಡೆಯುವ ಪ್ರದೇಶಗಳಲ್ಲಿ ಧಾಳಿ ನಡೆಸಿ ಅಕ್ರಮ ಚಟುವಟಿಕೆಗಳನ್ನು ಮಟ್ಟಹಾಕಲು ಹಿಂದೇಟು ಹಾಕುತ್ತಿರುವುದು ಸಾರ್ವಜನಿಕರ ಸಂಶಯಕ್ಕೆ ಕಾರಣವಾಗಿದೆಯೆಂದು ಹಿಂ.ಜಾ.ವೇ. ತಾಲ್ಲೂಕು ಸಹ ಸಂಚಾಲಕ್ ವಿನು ಅಸಮಧಾನ ವ್ಯಕ್ತ ಪಡಿಸಿದರು.

ಈ ಹಿಂದೆಯೂ ಹೊಸತೋಟದ ಈ ಭಾಗದಲ್ಲಿ ಉಗ್ರಗಾಮಿ ತರಬೇತಿ ಚಟುವಟಿಕೆ ನಡೆದಿದ್ದು ಪೋಲೀಸರ ಸಕಾಲಿಕ ಕಾರ್ಯಾಚರಣೆಯಿಂದ ಭಾರೀ ಅನಾಹುತ ತಪ್ಪಿತ್ತು.

ಸ್ಥಳೀಯ ಪೋಲೀಸರು ಅಗತ್ಯವಿದ್ದಲ್ಲಿ ಜಿಲ್ಲೆಯ ಮತ್ತು ಹೊರ ಜಿಲ್ಲೆಗಳ ರಿಸರ್ವ್ ಪೋಲೀಸ್ ಮತ್ತು ಅರೆಸೇನಾ ಪಡೆಗಳ ಸಹಕಾರದೊಂದಿಗೆ ಕಾನೂನು ಬಾಹಿರ ಮತ್ತು ದೇಶದ್ರೋಹ ಕೃತ್ಯ ನಡೆಯುತ್ತಿರುವ ಪ್ರದೇಶಗಳಲ್ಲಿ ವ್ಯವಸ್ಥಿತ ಧಾಳಿ ನಡೆಸಿ ಅಕ್ರಮ ಗೋಹತ್ಯೆ / ಗೋಮಾಂಸ ಮಾರಾಟ ಪ್ರಕರಣಗಳಿಗೆ ಕಡಿವಾಣ ಹಾಕಬೇಕೆಂದು ಹಿಂದು ಜಾಗರಣ ವೇದಿಕೆಯ ಜಿಲ್ಲಾ ಸಂಚಾಲಕ್ ಕುಕ್ಕೇರ ಅಜಿತ್ ಜಿಲ್ಲಾ ಪ್ರಮುಖರಾದ ಸುಭಾಸ್ ತಿಮ್ಮಯ್ಯ, ರಂಜನ್ ಗೌಡ ಒತ್ತಾಯಿಸಿದ್ದಾರೆ.

ಘಟನೆಯ ಸ್ಥಳಕ್ಕೆ ಹಿಂದು ಜಾಗರಣ ವೇದಿಕೆ ಜಿಲ್ಲಾ ಸಮಿತಿಯ ಸುನಿಲ್ ಮಾದಾಪುರ,ವಿನು ಕುಮಾರ್ , ಚಿದು,ಸುನಿಲ್ ,ರಾಜೇಶ್ ಸೇರಿದಂತೆ ಹೊಸತೋಟದ ಕಾರ್ಯಕರ್ತರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣದ ಸಮಗ್ರ ತನಿಖೆ ನಡೆಸಿ ಗೋಹತ್ಯೆ ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲ ಆರೋಪಿಗಳ ವಿರುದ್ಧವೂ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ತಪ್ಪಿದ್ದಲ್ಲಿ ಉಗ್ರ ಹೋರಾಟ ರೂಪಿಸಲಾಗುವುದೆಂದು ಎಚ್ಚರಿಕೆ ನೀಡಿದರು. ಗೋಹತ್ಯೆ ಪ್ರಕರಣದ ಬಗ್ಗೆ ಸ್ಥಳೀಯ ಸುಂಟಿಕೊಪ್ಪ ಪೋಲೀಸರು ತನಿಖೆ ಕೈಗೊಂಡಿದ್ದಾರೆ.
TV 1 NEWS UPDATE

Gayathri SG

Recent Posts

ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ : ಪರಿಚಯಸ್ಥರಿಂದಲೇ ಕೊಲೆ ಶಂಕೆ

ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…

4 mins ago

ಬಿಜೆಪಿ ಈಗ ಬೆಳೆದು ನಿಂತಿದೆ ಅದಕ್ಕೆ ಆರ್ ಎಸ್ ಎಸ್ ಬೆಂಬಲ ಬೇಕಾಗಿಲ್ಲ: ಉದ್ಧವ್ ಠಾಕ್ರೆ

ಬಿಜೆಪಿ ಮತ್ತು ಆರೆಸ್ಸೆಸ್ ಸಂಬಂಧದ ಬಗ್ಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಶಿವಸೇನಾ ಯುಬಿಟಿ ಬಣದ…

9 mins ago

ನೇಹಾ, ಅಂಜಲಿ ಕೊಲೆ ಕೇಸ್​​ : ಎಡಿಜಿಪಿ ಆರ್.ಹಿತೇಂದ್ರ ಅಧಿಕಾರಿಗಳಿಗೆ ಕ್ಲಾಸ್​

ನೇಹಾ ಮತ್ತು ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಗಳು ಬಾರಿ ಸಂಚಲನ ಮೂಡಿಸಿದ್ದವು ಈ ಹಿನ್ನೆಲೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ…

18 mins ago

ಕಲಬುರಗಿ: ಅಂಧ ಮಕ್ಕಳ ಶಾಲೆಗೆ 100% ಫಲಿತಾಂಶ

ನಗರದ ದಕ್ಷಿಣ ಭಾರತ ದಲಿತ ವಿದ್ಯಾ ಸಂಸ್ಥೆಯ ಸಿದ್ದಾರ್ಥ ಕಿವುಡ ಮತ್ತು ಮೂಕ ಮಕ್ಕಳ ವಸತಿಯುತ ಪ್ರೌಢಶಾಲೆಗೆ ಪ್ರಸ್ತುತ ಸಾಲಿನ…

28 mins ago

ಐಪಿಎಲ್ ಪ್ರಸಾರಕರ ಹಿಟ್​ಮ್ಯಾನ್​ ರೋಹಿತ್​ ಕಿಡಿ

ಟೀಮ್​ ಇಂಡಿಯಾದ ನಾಯಕ ರೋಹಿತ್ ಶರ್ಮಾ ಅವರು ಐಪಿಎಲ್ ಬ್ರಾಡ್‌ಕಾಸ್ಟರ್ ಸ್ಟಾರ್ ಸ್ಪೋರ್ಟ್ಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲ ದಿನಗಳ…

42 mins ago

ಈಶಾನ್ಯ ಪದವೀಧರರ ಕ್ಷೇತ್ರದ ಅಭ್ಯರ್ಥಿಗಳ ಬಂಡಾಯ ಶಮನ: ವಿಜಯೇಂದ್ರ ಮಾತಕತೆ ಸಕ್ಸಸ್

ಈಶಾನ್ಯ ಪದವೀಧರ ಕ್ಷೇತ್ರ, ನೈಋತ್ಯ ಪದವೀಧರ ಕ್ಷೇತ್ರ, ಬೆಂಗಳೂರು ಪದವೀಧರ ಕ್ಷೇತ್ರ, ಆಗ್ನೇಯ ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ…

49 mins ago