ಕೊಡಗು: ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಚಾಲನೆ

ಕೊಡಗು: 2006ರ ಏಪ್ರಿಲ್ ನಂತರ ನೇಮಕವಾದ ಸರ್ಕಾರಿ ನೌಕರರಿಗೆ ‘ಹಳೆ ಪಿಂಚಣಿ ಯೋಜನೆ’(ಒಪಿಎಸ್) ಜಾರಿ ಮಾಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಅವರ ಜೊತೆ ಚರ್ಚಿಸಲಾಗಿದ್ದು, ಈ ಸಂಬಂಧ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಮತ್ತೊಮ್ಮೆ ಸಿಎಂ ಅವರ ಜತೆ ಸಮಾಲೋಚನೆ ನಡೆಸಿದಲ್ಲಿ ಹಳೆ ಪಿಂಚಣಿ ಯೋಜನೆ ಜಾರಿಯಾಗಬಹುದು ಎಂದು ಎಂ.ಪಿ.ಅಪ್ಪಚ್ಚುರಂಜನ್ ಅವರು ತಿಳಿಸಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ ಕೊಡಗು ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಕೊಡಗು ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಹಿಂದೆ ಸರ್ಕಾರಿ ನೌಕರರಿಗೆ ಇದ್ದ ಹಳೆ ಪಿಂಚಣಿ ಯೋಜನೆಯನ್ನು ಮುಂದುವರಿಸುವಂತಾಗಬೇಕು. ಸರ್ಕಾರಿ ನೌಕರರು ನೆಮ್ಮದಿಯಿಂದ ನಿವೃತ್ತಿ ಜೀವನ ನಡೆಸುವಂತಾಗಬೇಕು. ನಿವೃತ್ತಿ ಸಂದರ್ಭದಲ್ಲಿ ಆರೋಗ್ಯ ಅತೀ ಮುಖ್ಯವಾಗಿದ್ದು, ಆ ಸಂದರ್ಭದಲ್ಲಿ ಪಿಂಚಣಿ ಅತ್ಯಗತ್ಯವಾಗಿದೆ. ಆದ್ದರಿಂದ ಎನ್ಪಿಎಸ್ ಬದಲಾಗಿ ಒಪಿಎಸ್ ಜಾರಿ ಆಗಬೇಕು ಎಂದು ಹೇಳಿದರು.
ಕೊಡಗು ಜಿಲ್ಲೆ ಸೈನಿಕರು ಮತ್ತು ಕ್ರೀಡಾಪಟುಗಳ ನಾಡು. ಜಿಲ್ಲೆಯಲ್ಲಿ ಹೆಚ್ಚಿನ ಸೈನಿಕರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಹಾಕಿ, ಕ್ರಿಕೆಟ್, ಅಥ್ಲೆಟಿಕ್ಸ್ ಹೀಗೆ ಹಲವು ಕ್ರೀಡೆಯಲ್ಲಿ ಪಾಲ್ಗೊಂಡು ಹೆಸರು ಗಳಿಸಿದ್ದಾರೆ. ಆ ನಿಟ್ಟಿನಲ್ಲಿ ಕ್ರೀಡಾ ಚಟುವಟಿಕೆಯಲ್ಲಿ ಪಾಲ್ಗೊಂಡು ಮತ್ತಷ್ಟು ಹೆಸರು ತರುವಂತಾಗಬೇಕು ಎಂದರು.

ಸರ್ಕಾರಿ ನೌಕರರು ಪ್ರತೀ ನಿತ್ಯ ಒಂದಲ್ಲ ಒಂದು ರೀತಿಯಲ್ಲಿ ಒತ್ತಡದಲ್ಲಿ ಕೆಲಸ ನಿರ್ವಹಿಸುತ್ತಾರೆ. ಕ್ರೀಡಾ ಚಟುವಟಿಕೆಯಲ್ಲಿ ಪಾಲ್ಗೊಳ್ಳುವುದರಿಂದ ಒಂದು ರೀತಿ ಕ್ರಿಯಾಶೀಲ ಚಟುವಟಿಕೆಗೆ ಸಹಕಾರಿಯಾಗಲಿದೆ ಎಂದು ಅಪ್ಪಚ್ಚು ರಂಜನ್ ಅವರು ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ವೆಂಕಟೇಶ್ ಅವರು ಕ್ರೀಡಾ ಜ್ಯೋತಿ ಬೆಳಗಿಸಿ ಮಾತನಾಡಿ ಸರ್ಕಾರಿ ನೌಕರರ ಚಲನಶೀಲತೆಗೆ ಕ್ರೀಡಾಚಟುವಟಿಕೆ ಸಹಕಾರಿಯಾಗಲಿದೆ. ಇದರಿಂದ ಉತ್ಸಾಹ ಹೆಚ್ಚಲಿದೆ ಎಂದರು.
ಪೌರಾಯುಕ್ತರಾದ ವಿಜಯ ಅವರು ಮಾತನಾಡಿ ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಸ್ಪೂರ್ತಿ ಮತ್ತು ಲವಲವಿಕೆ ದೊರೆಯುತ್ತದೆ ಎಂದರು.

ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷರಾದ ಪೊನ್ನಚ್ಚನ ಶ್ರೀನಿವಾಸ ಅವರು ಮಾತನಾಡಿ ಎನ್ಪಿಎಸ್ ರದ್ದುಗೊಳಿಸಿ, ಒಪಿಎಸ್ನ್ನು ಜಾರಿಗೊಳಿಸಬೇಕು ಎಂದು ಅವರು ಕೋರಿದರು. ಎನ್ಪಿಎಸ್ನಿಂದ ಅನೇಕ ಗೊಂದಲವಿದೆ. ನಿವೃತ್ತಿ ನಂತರ ನೌಕರರ ಜೀವನ ಕಷ್ಟಸಾಧ್ಯವಾಗಲಿದೆ. ಆ ನಿಟ್ಟಿನಲ್ಲಿ ಎಲ್ಲರೂ ಸರ್ಕಾರಿ ನೌಕರರಿಗೆ ಸಹಕರಿಸಬೇಕು ಎಂದರು.

ಮಡಿಕೇರಿ ನಗರದಲ್ಲಿ ಸರ್ಕಾರಿ ನೌಕರರ ಭವನ ನಿರ್ಮಾಣಕ್ಕೆ 40 ಸೆಂಟ್ ಜಾಗ ನೀಡಲಾಗಿದೆ. ಭವನ ನಿರ್ಮಾಣ ಸಂಬಂಧ ಹೆಚ್ಚಿನ ಅನುದಾನ ನೀಡಬೇಕು ಎಂದು ಶಾಸಕರಲ್ಲಿ ಕೋರಿದರು.

ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ್ ಅವರು ಮಾತನಾಡಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷರಾದ ಗುರುರಾಜ್ (ವಿರಾಜಪೇಟೆ), ಪ್ರದೀಪ್(ಸೋಮವಾರಪೇಟೆ), ಗೌರವ ಅಧ್ಯಕ್ಷರಾದ ಶಿವಕುಮಾರ್, ಮಂಜುನಾಥ್, ಕುಮಾರ, ಶಮ್ಮಿ, ಅನಿತಾ, ಇತರರು ಇದ್ದರು. ನಿರ್ಮಲ ಅವರು ಕ್ರೀಡಾ ಪ್ರತಿಜ್ಞಾ ವಿಧಿ ಭೋದಿಸಿದರು.

Sneha Gowda

Recent Posts

ಹಣ್ಣಕ್ಕೆ ಬೇಡಿಕೆ ಇಟ್ಟು ಮರ್ಮಾಂಗಕ್ಕೆ ವಿದ್ಯುತ್​ ಶಾಕ್​ ನೀಡಿ ಚಿತ್ರಹಿಂಸೆ

ಹಣಕ್ಕಾಗಿ ಬೇಡಿಕೆ ಇಟ್ಟು ಸೆಕೆಂಡ್ ಹ್ಯಾಂಡ್ ಕಾರು ವ್ಯಾಪಾರಿಯ ಬಟ್ಟೆ ಬಿಚ್ಚಿಸಿ, ಬೆತ್ತಲೆ ಮಾಡಿ ಘನಘೋರವಾಗಿ ಚಿತ್ರಹಿಂಸೆ ನೀಡಿರುವ ಘಟನೆ…

19 mins ago

ಮಾಜಿ ಸಿಎಂ ಎಚ್​ಡಿಕೆ ಜೈಲಿಗೆ ಹೋಗುವ ಕಾಲ ಹತ್ತಿರದಲ್ಲಿದೆ: ಕಾಂಗ್ರೆಸ್​ ಶಾಸಕ

ಹೆಚ್​ಡಿ ರೇವಣ್ಣರಂತೆ ಮಾಜಿ ಸಿಎಂ ಹೆಚ್​ಡಿಕೆ ಜೈಲಿಗೆ ಹೋಗುವ ಕಾಲ ಹತ್ತಿರದಲ್ಲಿದೆ. ಅವರ ವಿರುದ್ಧವೂ ಮಹಿಳೆಯರು ದೂರು ಕೊಡುತ್ತಾರೆ. ಅವರು…

31 mins ago

ಪಾಕ್​ ಆಕ್ರಮಿತ ಕಾಶ್ಮೀರದಲ್ಲಿ ಭುಗಿಲೆದ್ದ ಘರ್ಷಣೆ

ವಿದ್ಯುತ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಪಾಕ್ ಆಕ್ರಮಿತ ಕಾಶ್ಮೀರದ ರಾಜಧಾನಿ ಮುಜಾಫರಾಬಾದ್ ನ ಹಲವು ಪ್ರದೇಶಗಳಲ್ಲಿ…

50 mins ago

ಕ್ರಿಕೆಟ್ ಪಂದ್ಯದ ವೇಳೆ 21 ವರ್ಷದ ಯುವಕನನ್ನು ಥಳಿಸಿ ಹತ್ಯೆ

ವಾಯುವ್ಯ ದೆಹಲಿಯ ಭಾರತ್ ನಗರ ಪ್ರದೇಶದಲ್ಲಿ ಕ್ರಿಕೆಟ್ ಪಂದ್ಯದ ವೇಳೆ ತನ್ನ ಸಹೋದರ ಮತ್ತು ಇತರ ಆಟಗಾರರ ನಡುವಿನ ಜಗಳದಲ್ಲಿ…

52 mins ago

ಬೀದರ್‌ನಲ್ಲಿ ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್‌ಗಿರಿ

ಬೀದರ್‌ನ ಬಸವಕಲ್ಯಾಣದಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ ನಡೆದಿದೆ. ಬಸವಕಲ್ಯಾಣದ ಹೊರವಲಯದ ಪಾರ್ಕ್‌ನಲ್ಲಿ ಹಿಂದೂ ಧರ್ಮೀಯ ವ್ಯಕ್ತಿ ಜೊತೆ ಕುಳಿತಿದ್ದಕ್ಕೆ ಮುಸ್ಲಿಂ…

1 hour ago

ಕೈ ತಪ್ಪಿದ ವಿಧಾನಪರಿಷತ್ ಟಿಕೆಟ್: ಮಾಜಿ ಶಾಸಕ ರಘುಪತಿ ಭಟ್ ಅಸಮಾಧಾ‌ನ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಬೆನ್ನಲ್ಲೇ ಉಡುಪಿ…

1 hour ago