Categories: ಮಡಿಕೇರಿ

ಕ್ಷೇಮವಾಗಿ‌ ಭಾರತಕ್ಕೆ‌ ತಲುಪಿದ ಕೊಡಗಿನ ಸಂತ್ರಸ್ತ ಮಹಿಳೆ

ಕೊಡಗು: ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕರಡಿಗೋಡು ನಿವಾಸಿಯಾದ ಪಾರ್ವತಿ ಎಂಬ ಮಹಿಳೆ ಕುವೈತ್ ದೇಶಕ್ಕೆ ಕೆಲಸಕ್ಕೆಂದು ಏಜೆಂಟ್ ಮುಖಾಂತರ ತೆರಳಿದ್ದರು.

ಈ ವೇಳೆ ಅವರನ್ನು ಅಲ್ಲಿಯ ಏಜೆಂಟ್ ಕೂಡಿ ಹಾಕಿದ್ದರು. ಕೊಡಗು ಜಿಲ್ಲಾಡಳಿತಕ್ಕೆ ಈ ಬಗ್ಗೆ ದೂರು‌ ಸ್ವೀಕೃತವಾದ ಕೂಡಲೇ ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರಾದ ಆರ್.ಎಂ.ಅನನ್ಯ ವಾಸುದೇವ್ ಅವರಿಗೆ, ಸಂತ್ರಸ್ತ ಮಹಿಳೆಯನ್ನು ಕ್ಷೇಮವಾಗಿ‌ ಕರೆ ತರುವ ಜವಾಬ್ದಾರಿ ವಹಿಸಿದ್ದರು. ಜಿಲ್ಲಾಡಳಿತ ಸಂತ್ರಸ್ತ ಮಹಿಳೆಯೊಂದಿಗೆ ಸಂಪರ್ಕ ಸಾಧಿಸಿ, ಅವರಿದ್ದ ಸ್ಥಳವನ್ನು ಗುರುತಿಸಿ ಕುವೈತ್ ಅಲ್ಲಿರುವ ಭಾರತೀಯ ರಾಯಭಾರ ಕಚೇರಿ ಹಾಗೂ ವಿದೇಶಾಂಗ ಸಚಿವಾಲಯಕ್ಕೆ ಮಾಹಿತಿ‌ ನೀಡಿತ್ತು.

ನಿರಂತರ ಸಂಪರ್ಕವನ್ನು ಸಾಧಿಸಿ ಸತತ ಪ್ರಯತ್ನದ ಮೂಲಕ ಭಾರತೀಯ ರಾಯಭಾರ ಕಚೇರಿಯ ಸಹಯೋಗದೊಂದಿಗೆ ಕೊಡಗು‌ ಜಿಲ್ಲಾಡಳಿತ ಸಂತ್ರಸ್ತ ಮಹಿಳೆಯನ್ನು ಕ್ಷೇಮವಾಗಿ‌ ಭಾರತಕ್ಕೆ‌ ಕರೆ ತರುವಲ್ಲಿ ಯಶಸ್ವಿಯಾಗಿದೆ. ಇಂದು‌ ಬೆಳಿಗ್ಗೆ ಸಂತ್ರಸ್ತ ‌ಮಹಿಳೆ ೯:೧೦ ನಿಮಿಷಕ್ಕೆ ಚೆನ್ನೈ ಗೆ ತಲುಪಿದ್ದಾರೆ. ಅಲ್ಲಿಂದ ಕೊಡಗಿಗೆ ಬರುತ್ತಿದ್ದಾರೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ‌ ತಿಳಿಸಿದೆ.

Gayathri SG

Recent Posts

ಮೊದಲ ಬಾರಿಗೆ ಮರಾಠಿ ಭಾಷೆಯಲ್ಲಿ ಯಕ್ಷಗಾನ ಪ್ರದರ್ಶನ

ಕನ್ನಡದ ಹೆಮ್ಮೆಯ ಕಲೆ ಯಕ್ಷಗಾನ ಇದೀಗ ಗಡಿಗಳನ್ನು ದಾಟಿ ಮಹಾರಾಷ್ಟ್ರದ ಕಡೆಗೆ ಪಯಣ ಬೆಳೆಸಿದೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ…

5 mins ago

ತೃತೀಯ ಲಿಂಗಿಯ ಹತ್ಯೆ ಪ್ರಕರಣ: ಮಹಿಳೆಯ ಬಂಧನ

ತೃತೀಯ ಲಿಂಗಿಯನ್ನು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೊಲೆ ಆರೋಪಿಯನ್ನು ಬಂಧಿಸಿದ್ದಾರೆ.

23 mins ago

ಬಿಗ್‌ಬಾಸ್‌ 16 ಸ್ಪರ್ಧಿ ʼಅಬ್ದು ರೋಝಿಕ್‌ʼಗೆ ಮದುವೆಯಂತೆ

ಬಿಗ್‌ಬಾಸ್‌ 16ನಲ್ಲಿ ಸ್ಪರ್ಧಿಸಿದ್ದ ಅಬ್ದು ರೋಝಿಕ್‌ ವಿಡಿಯೋವೊಂದನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಾನೀಗ ಪ್ರೀತಿಗೆ ಬಿದ್ದಿದ್ದು, ಜುಲೈ 7ರಂದು ಮನಮೆಚ್ಚಿದ…

34 mins ago

ಕೆ.ಆರ್.ಪೇಟೆಯಲ್ಲಿ ಜೆಡಿಎಸ್ ನಿಂದ ಬೃಹತ್ ಪ್ರತಿಭಟನೆ

ಹಾಸನದ ಸಿ.ಡಿ.ಹಗರಣವನ್ನು ಸಿ.ಬಿ.ಐ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಪಟ್ಟಣದಲ್ಲಿಂದು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

49 mins ago

ಸೊಳ್ಳೆ ‘ಟ್ವೀಟ್ ಕಳುಹಿಸುವ’ ಫೋಟೋ ವೈರಲ್‌

ನಾವು ಪ್ರತಿದಿನ ಸೋಶಿಯಲ್‌ ಮಿಡಿಯಾಗಳಲ್ಲಿ ಹಲವಾರು ಟ್ವೀಟ್‌ಗಳು ಮತ್ತು ಪೋಸ್ಟ್ ಗಳನ್ನು ನೋಡುತ್ತೇವೆ.ಅದರಲ್ಲೂ ಕೆಲ ಪೋಸ್ಟ್‌ ಗಳು ನಮ್ಮನ್ನು ನಗುವಂತೆ…

1 hour ago

ಪಾಕಿಸ್ತಾನವನ್ನು ನಾವು ಗೌರವಿಸಬೇಕು ಎಂದ ಮಾಜಿ ಸಚಿವ ಮಣಿಶಂಕರ್ ಅಯ್ಯರ್‌

ಈ ಹಿಂದೆಯೂ ಪಾಕಿಸ್ತಾನವನ್ನು ಹಾಡಿಹೊಗಳಿ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಕಾಂಗ್ರೆಸ್‌ ಮಾಜಿ ಸಚಿವ ಮಣಿಶಂಕರ್ ಅಯ್ಯರ್‌ ಈಗ ಮತ್ತೊಂದು ವಿವಾದಾತ್ಮಕ…

1 hour ago