Categories: ಮಡಿಕೇರಿ

ಕೊಡಗಿನ ಗೌರವಕ್ಕೆ ದಕ್ಕೆ ತಂದಿದ್ದಾರೆ: ಕಾಂಗ್ರೆಸ್ ಕಿಡಿ

ಮಡಿಕೇರಿ, ಆ.19: ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆಯುವ ಮೂಲಕ ಬಿಜೆಪಿ ಮತ್ತು ಹಿಂದೂ ಸಂಘಟನೆಗಳು ವೀರಸೇನಾನಿಗಳ ಶಿಸ್ತಿನ ನಾಡು ಕೊಡಗಿನ ಗೌರವಕ್ಕೆ ದಕ್ಕೆ ತಂದಿದ್ದಾರೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಜೆ.ಎಲ್.ಜನಾರ್ಧನ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು ಹೆಮ್ಮೆಯ ಸೇನಾಧಿಕಾರಿಗಳು ಜನಿಸಿದ ಈ ಭೂಮಿಯಲ್ಲಿ ಎದೆಯುಬ್ಬಿಸಿ ಧೈರ್ಯದಿಂದ ನಡೆದುಕೊಳ್ಳದೆ ಕಾನೂನು ಉಲ್ಲಂಘಿಸಿ ಹೇಡಿತನ ಪ್ರದರ್ಶಿಸಿರುವುದು ಖಂಡನೀಯ. ಈ ಕೀಳು ಮಟ್ಟದ ವರ್ತನೆಯಿಂದ ಜಿಲ್ಲೆಯ ಜನ ತಲೆ ತಗ್ಗಿಸುವಂತ್ತಾಗಿದೆ ಎಂದು ತಿಳಿಸಿದ್ದಾರೆ.

ಮಳೆಹಾನಿ ಸಂತ್ರಸ್ತರ ಕಷ್ಟಗಳಿಗೆ ಸ್ಪಂದಿಸುವುದಕ್ಕಾಗಿ ಬಂದ ವಿರೋಧ ಪಕ್ಷದ ನಾಯಕನನ್ನು ಅವಮಾನಿಸಿದ್ದು ಸರಿಯಲ್ಲ. ಅನ್ನಭಾಗ್ಯದ ಮೂಲಕ ಬಡವರ ಹಸಿವು ನೀಗಿಸಿದ ಸಿದ್ದರಾಮಯ್ಯರ ಬಗ್ಗೆ ಇಡೀ ರಾಜ್ಯದ ಜನತೆಗೆ ಅಭಿಮಾನವಿದೆ. ಆದರೆ ಸ್ವಾಭಿಮಾನಿಗಳ ಜಿಲ್ಲೆ ಕೊಡಗಿನಲ್ಲಿ ಬಿಜೆಪಿ ಮಂದಿ ನಡೆಸಿಕೊಂಡ ರೀತಿ ಆ ಪಕ್ಷದ ಸಂಸ್ಕೃತಿಯನ್ನು ಬಿಂಬಿಸಿದೆ. ಕೊಡಗು ಮಹಾಮಳೆಯಿಂದ ಸಂಕಷ್ಟಕ್ಕೆ ಸಿಲುಕಿದ್ದರೂ ಯಾವುದೇ ಪರಿಹಾರವನ್ನು ತರಲು ಸಾಧ್ಯವಾಗದ ಅಸಮರ್ಥ ಶಾಸಕರನ್ನು ಪ್ರಶ್ನೆ ಮಾಡದ ಬಿಜೆಪಿ ಕಾರ್ಯಕರ್ತರು ಅವಿವೇಕವನ್ನು ಮೆರೆದಿದ್ದಾರೆ. ಅಭಿವೃದ್ಧಿ ಕಾರ್ಯಗಳಿಗಾಗಿ ಹೋರಾಟ ನಡೆಸದೆ ಕ್ಷುಲ್ಲಕ ರಾಜಕಾರಣಕ್ಕಾಗಿ ಕೊಡಗಿನ ಗೌರವವನ್ನು ಹರಾಜು ಹಾಕಿದ್ದಾರೆ ಎಂದು ಜನಾರ್ಧನ ಟೀಕಿಸಿದ್ದಾರೆ.

Gayathri SG

Recent Posts

ಭಾರತದಲ್ಲಿ ಹಿಂದುಗಳ ಸಂಖ್ಯೆ ಇಳಿಕೆ, ಮುಸ್ಲಿಮರ ಸಂಖ್ಯೆ ಏರಿಕೆ: ಆರ್ಥಿಕ ಸಲಹಾ ಮಂಡಳಿ

ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…

13 mins ago

ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ: 8 ಮಂದಿ ಮೃತ್ಯು

ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.

30 mins ago

ಹಾಸನ ವಿಡಿಯೋ ಪ್ರಕರಣ: ಸುಳ್ಳು ದೂರಿನ ಒತ್ತಡ

ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಗಾಗಿದ್ದಾರೆ. ಈ…

44 mins ago

ಮದುವೆ ರದ್ದು, ಕೋಪದಿಂದ ಅಪ್ರಾಪ್ತ ಬಾಲಕಿಯ ರುಂಡ ಕತ್ತರಿಸಿ ಕೊಲೆ ಮಾಡಿದ ಪ್ರೇಮಿ

ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ.

1 hour ago

ಅಕ್ಷಯ ತೃತೀಯದಂದು ಲಕ್ಷ್ಮಿ ಮತ್ತು ಕುಬೇರನಿಗೆ ವಿಶೇಷ ಪೂಜೆ

ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…

1 hour ago

ಅಕ್ಷಯ ತೃತೀಯ ದಿನದಂದು ಚಿನ್ನ, ಬೆಳ್ಳಿ ದರ ಪಟ್ಟಿ ಹೀಗಿದೆ!

ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ…

2 hours ago