Categories: ಮಡಿಕೇರಿ

ಲೋಕಸಭಾ ಚುನಾವಣೆ: ಅಭ್ಯರ್ಥಿಗಳ ಖರ್ಚುವೆಚ್ಚ ಬಗ್ಗೆ ನಿಗಾವಹಿಸಿ – ಎ.ಸುರೇಶ್

ಮಡಿಕೇರಿ: ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ಪ್ರಚಾರಕ್ಕಾಗಿ ಮಾಡುವ ಖರ್ಚುವೆಚ್ಚದ ಬಗ್ಗೆ ಪ್ರತಿ ದಿನ ನಿಗಾ ವಹಿಸಿ ವರದಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಚುನಾವಣಾ ವೆಚ್ಚ ವೀಕ್ಷಕರಾದ ಎ.ಸುರೇಶ್ ಅವರು ಸೂಚಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ವೆಚ್ಚ ವೀಕ್ಷಕರ ತಂಡದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಸಭೆ ನಡೆಸಿ ಅವರು ಮಾತನಾಡಿದರು.

ಚುನಾವಣಾ ಕೆಲಸಕ್ಕಾಗಿ ನೇಮಕವಾಗಿರುವ ಎಫ್.ಎಸ್.ಟಿ, ಎಸ್.ಎಸ್.ಟಿ, ವಿ.ಎಸ್.ಟಿ ಮತ್ತಿತರ ಚುನಾವಣಾ ತಂಡಗಳು ಸಂಘಟಿತರಾಗಿ ಕಾರ್ಯನಿರ್ವಹಿಸಬೇಕು ಎಂದು ಚುನಾವಣಾ ವೆಚ್ಚ ವೀಕ್ಷಕರು ನಿರ್ದೇಶನ ನೀಡಿದರು. ಚುನಾವಣಾ ಆಯೋಗದ ನಿರ್ದೇಶನಗಳನ್ನು ಚಾಚುತಪ್ಪದೆ ಪಾಲಿಸಬೇಕು. ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದರು.

ಯಾವುದೇ ರೀತಿಯ ಗೊಂದಲಗಳಿದ್ದಲ್ಲಿ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹರಿಸಿಕೊಳ್ಳಬೇಕು ಎಂದು ತಿಳಿಸಿದರು. ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆಯನ್ನು ತೀವ್ರಗೊಳಿಸಿ ದಾಖಲೆ ರಹಿತ ಹಣ ಅಥವಾ ಇನ್ನಿತರೆ ವಸ್ತುಗಳು ಸಾಗಾಣಿಕೆಯಾಗದಂತೆ ಗಮನಹರಿಸಬೇಕು ಎಂದು ಚುನಾವಣಾ ವೆಚ್ಚ ವೀಕ್ಷಕರು ಹೇಳಿದರು.

ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿಗಳ ಚುನಾವಣಾ ವೆಚ್ಚ ನಿರ್ವಹಿಸಲು ನೇಮಕವಾಗಿರುವ ಅಧಿಕಾರಿಗಳು/ ಸಿಬ್ಬಂದಿಗಳು ಸಮನ್ವಯ ಮತ್ತು ಸಂಘಟಿತರಾಗಿ ಕಾರ್ಯನಿರ್ವಹಿಸಬೇಕು ಎಂದರು.

ಬ್ಯಾಂಕ್ ವಹಿವಾಟಿನ ಮೇಲೆ ನಿಗಾ ವಹಿಸಿ: ಬ್ಯಾಂಕ್ ಖಾತೆಗಳಲ್ಲಿ ನಡೆಯುವ ವಹಿವಾಟು ಬಗ್ಗೆ ಗಮನಹರಿಸಬೇಕು. ಹಣ ವರ್ಗಾವಣೆ ಕುರಿತಂತೆ ಪ್ರತಿದಿನ ಪರಿಶೀಲನೆ ನಡೆಸಬೇಕು ಎಂದರು.

ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಾತನಾಡಿ ಕೊಡಗು ಜಿಲ್ಲೆಯಲ್ಲಿ ಚುನಾವಣಾ ಕೆಲಸಕ್ಕಾಗಿ ನೇಮಕವಾಗಿರುವ ವಿವಿಧ ತಂಡಗಳು, ಅಧಿಕಾರಿಗಳ ಕಾರ್ಯನಿರ್ವಹಣೆ ಬಗ್ಗೆ ಮಾಹಿತಿ ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಜಿಲ್ಲೆಗೆ ಹೊಂದಿಕೊಂಡಿರುವ ಅಂತರರಾಜ್ಯ ಗಡಿ ಚೆಕ್ ಪೋಸ್ಟ್ ಗಳ ಕಾರ್ಯ ಚಟುವಟಿಕೆ ಮತ್ತಿತರ ಬಗ್ಗೆ ವಿವರಿಸಿದರು.

ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ ಅವರು ಲೋಕಸಭಾ ಚುನಾವಣೆ ಸಂಬಂಧ ಹಲವು ಮಾಹಿತಿ ನೀಡಿದರು.
ಬಳಿಕ ಚುನಾವಣಾ ವೆಚ್ಚ ವೀಕ್ಷಕರು ಜಿಲ್ಲಾ ಚುನಾವಣಾ ವೆಚ್ಚ ಮೇಲ್ವಿಚಾರಕರ ಕೋಶ ಹಾಗೂ ಜಿಲ್ಲಾ ಮಾಧ್ಯಮ ದೃಢೀಕರಣ ಹಾಗೂ ಉಸ್ತುವಾರಿ ಸಮಿತಿ ಕೇಂದ್ರಕ್ಕೆ ಭೇಟಿ ನೀಡಿ ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವರ್ಣಿತ್ ನೇಗಿ, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ನಾರಾಯಣಸ್ವಾಮಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಇತರರು ಇದ್ದರು.

Ashika S

Recent Posts

ಯುವತಿಯರೇ ಎಚ್ಚರ : ಮುಟ್ಟಿನ ನೋವಿಗೆ ಪೈನ್​​ ಕಿಲ್ಲರ್ ಸೇವಿಸಿ ಕೋಮಾಗೆ ಜಾರಿದ ಯುವತಿ

ಮುಟ್ಟಿನ ಸಮಯದಲ್ಲಿ ನೋವು ತಾಳಲಾರದೆ ಅನಿವಾರ್ಯಕ್ಕೆ ಪೈನ್​​ ಕಿಲ್ಲರ್ ಸೇವಿಸುವುದು ಈಗ ಸಾಮನ್ಯವಾಗಿಬಿಟ್ಟಿದೆ. ಕೆಲವರಿಗೆ ಇದರ ಪರಿಣಾಮವು ಅರಿವಾಗಿದೆ. ಆದರೂ…

4 mins ago

ಪೈಲಟ್‌ಗಳ ಸಾಮೂಹಿಕ ರಜೆ : 70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

ಅನಾರೋಗ್ಯದಿಂದ ನೆಪವೊಡ್ಡಿ ಹಿರಿಯ ಪೈಲೆಟ್‌ಗಳು ಸಾಮೂಹಿಕವಾಗಿ ರಜೆಯಲ್ಲಿ ತೆರಳಿರುವ ಪರಿಣಾಮ ಸುಮಾರು 70ಕ್ಕೂ ಅಧಿಕ ಏರ್‌ ಇಂಡಿಯಾ ಎಕ್ಸ್‌ ಪ್ರೆಸ್‌…

19 mins ago

ಪ್ರಿಯತಮೆ ಎದುರೇ ಮಹಿಳೆ ಮೇಲೆ ಅತ್ಯಾಚಾರ ಮಾಡಿ ಕೊಂದ ಪಾಪಿ!

ಪ್ರಿಯತಮೇ ಎದುರೆ ಓರ್ವ ಮಹಿಳೆ ಮೇಲೆ ಅತ್ಯಾಚಾರ ಎಸಗಿ ನಂತರ ಕೊಂದ ಪಾಪಿ ಪ್ರಿಯತಮ. ಈ ಘಟನೆ ಗೌರಿಬಿದನೂರು ತಾಲ್ಲೂಕಿನ…

46 mins ago

ಬೂತ್​ನಲ್ಲಿ ಲಕ್ಕಿ ಡ್ರಾ : ಮತ ಚಲಾಯಿಸಿದ ಮತದಾರನಿಗೆ ಸಿಕ್ತು ವಜ್ರದ ಉಂಗುರ

ಭೋಪಾಲ್​ನ ಪ್ರತಿ ಬೂತ್​ನಲ್ಲಿ ಲಕ್ಕಿ ಡ್ರಾ ನಡೆಸಲಾಗಿದೆ. ಅದರಲ್ಲಿ ಅದೃಷ್ಟಶಾಲಿ ಮತದಾರರಿಗೆ ಉಡುಗೊರೆ ಸಿಗಲಿದೆ ಎಂದು ಘೋಷಣೆ ಮಾಡಲಾಗಿತ್ತು. ಹೀಗೇ…

1 hour ago

ಹೊಸ ಕೋವಿಡ್-19 ರೂಪಾಂತರ ಯುಎಸ್‌ನಲ್ಲಿ ಪತ್ತೆ!

ಯುನೈಟೆಡ್ ಸ್ಟೇಟ್ಸ್‌ನಲ್ಲಿ ಪತ್ತೆಯಾದ ಈ ಭಿನ್ನ ಗುಂಪನ್ನು ತೀವ್ರ ತೀವ್ರ ಉಸಿರಾಟದ ಸಿಂಡ್ರೋಮ್ ಕೊರೊನಾ ವೈರಸ್ 2 (SARS-CoV-2) ಫ್ಲರ್ಟ್…

1 hour ago

ಇವಿಎಂ,ಚುನಾವಣಾ ಸಿಬ್ಬಂದಿ ಇದ್ದ ಬಸ್‌ಗೆ ಬೆಂಕಿ : ಯಂತ್ರಗಳು ಡ್ಯಾಮೇಜ್‌

ಚುನಾವಣೆ ಬಳಿಕ ಇವಿಎಂ ಯಂತ್ರಗಳು ಹಾಗೂ ಮತಗಟ್ಟೆ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಬಸ್​ಗೆ ಬೆಂಕಿ ತಗುಲಿರುವ ಘಟನೆ ಮಧ್ಯಪ್ರದೇಶದ ಬೇತುಲ್​ನಲ್ಲಿ ನಡೆದಿದೆ.…

2 hours ago