News Karnataka Kannada
Sunday, May 05 2024
ಮಡಿಕೇರಿ

ಮಡಿಕೇರಿ: ವೈಫಲ್ಯಗಳನ್ನು ಮರೆ ಮಾಚಲು ಮೊಟ್ಟೆ ಎಸೆದಿದ್ದಾರೆ

Madikeri: An egg has been thrown to hide his failures
Photo Credit :

ಮಡಿಕೇರಿ, ಆ.19: ಕೊಡಗು ಜಿಲ್ಲೆಯನ್ನು ಸಂಪೂರ್ಣವಾಗಿ ಕಡೆಗಣಿಸಿರುವ ರಾಜ್ಯ ಸರ್ಕಾರದ ವೈಫಲ್ಯಗಳನ್ನು ಮರೆ ಮಾಚಲು ಮತ್ತು ಜನರ ಗಮನವನ್ನು ಬೇರೆಡೆಗೆ ಸೆಳೆಯುವ ದುರುದ್ದೇಶದಿಂದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಬಿಜೆಪಿ ಮಂದಿ ಮೊಟ್ಟೆ ಎಸೆದು ಪ್ರತಿಭಟನೆ ನಡೆಸಿದ್ದಾರೆ ಎಂದು ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಆರೋಪಿಸಿದೆ.

ಪತ್ರಿಕಾ ಪ್ರಕಟಣೆ ನೀಡಿರುವ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಎಸ್.ಅನಂತಕುಮಾರ್ ಮಹಾಮಳೆಯಿಂದ ಹಾನಿಗೀಡಾದ ಪ್ರದೇಶಗಳನ್ನು ವೀಕ್ಷಿಸಿ ಸಂತ್ರಸ್ತರಿಗೆ ಸಾಂತ್ವನ ಹೇಳಲು ಮತ್ತು ಸೂಕ್ತ ಪರಿಹಾರಕ್ಕಾಗಿ ಸರ್ಕಾರದ ಮೇಲೆ ಒತ್ತಡ ಹೇರಲು ಬಂದ ಮಾಜಿ ಮುಖ್ಯಮಂತ್ರಿಗಳಿಗೆ ಅಗೌರವ ತೋರಿರುವುದು ಖಂಡನೀಯ ಎಂದು ತಿಳಿಸಿದ್ದಾರೆ.

ಬಿಜೆಪಿ ಮತ್ತು ಸಂಘ ಪರಿವಾರದ ಮಂದಿ ಗೂಂಡಾ ಪ್ರವೃತ್ತಿ ತೋರಿದ್ದಾರೆ. ಕೊಡಗಿನ ಅಭಿವೃದ್ಧಿ ವಿಚಾರದಲ್ಲಿ ಸರ್ಕಾರದ ನಿರ್ಲಕ್ಷ್ಯದ ಬಗ್ಗೆ ಜನರಿಗೆ ಅಸಮಾಧಾನವಿದ್ದು, ಹಾದಿ ತಪ್ಪಿಸುವ ಬಿಜೆಪಿ ಪ್ರಯತ್ನ ಫಲ ನೀಡುವುದಿಲ್ಲ ಭ್ರಷ್ಟಾಚಾರ ಹಾಗೂ ಕಳಪೆ ಕಾಮಗಾರಿಯನ್ನು ಮುಚ್ಚಿ ಹಾಕುವ ಉದ್ದೇಶದಿಂದ ಕಾನೂನಿಗೆ ವಿರುದ್ಧವಾಗಿ ಪ್ರತಿಭಟನೆ ಮಾಡಿದ್ದಾರೆ ಎಂದು ಆರೋಪಿಸಿರುವ ಅವರು ತಪ್ಪಿತಸ್ಥರನ್ನು ತಕ್ಷಣ ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಇನ್ನು ಮುಂದೆ ಈ ರೀತಿಯ ಘಟನೆಗಳು ನಡೆಯದಂತೆ ಪೊಲೀಸರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಅನಂತಕುಮಾರ್ ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1620
Coovercolly Indresh

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು