News Karnataka Kannada
Tuesday, May 07 2024
ಮಡಿಕೇರಿ

ಮಡಿಕೇರಿ: ಹೊಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ

Latest News
Photo Credit : By Author

ಮಡಿಕೇರಿ: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2022-23 ನೇ ಸಾಲಿನಲ್ಲಿ ಹೊಲಿಗೆ ಯಂತ್ರ ವಿತರಣೆ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ.

ಹೊಲಿಗೆ ಯಂತ್ರ ವಿತರಣೆ ಯೋಜನೆ:

ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಬಡ ಕುಟುಂಬದ ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸುವ ಸ್ವಾವಲಂಬಿ ಯೋಜನೆಯಲ್ಲಿ ಸೌಲಭ್ಯ ಪಡೆಯ ಬಯಸುವವರು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದವರಾಗಿರಬೇಕು (ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯಿತ, ಕಾಡುಗೊಲ್ಲ, ಹಟ್ಟಿಗೊಲ್ಲ, ಮರಾಠ ಮತ್ತು ಇದರ ಉಪ ಸಮುದಾಯಗಳು ಹೊರತುಪಡಿಸಿ) ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ. 98 ಸಾವಿರ, ಪಟ್ಟಣ ಪ್ರದೇಶದವರಿಗೆ ರೂ.1.20 ಲಕ್ಷ ರೂ ಒಳಗಿರಬೇಕು.

ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ಮಿತಿಯಲ್ಲಿರಬೇಕು. ಈ ಯೋಜನೆಯಡಿಯಲ್ಲಿ ಸೌಲಭ್ಯ ಒದಗಿಸಲು ಸೇವಾಸಿಂಧು ತಂತ್ರಾಂಶದಲ್ಲಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಧಾರ್ ಕಾರ್ಡ್‍ನಲ್ಲಿರುವಂತೆ ಅರ್ಜಿದಾರರ ಹೆಸರು (ಶ್ರೀ/ಶ್ರೀಮತಿ, ಕುಮಾರಿ ಮುಂತಾದ ಮಾಹಿತಿಗಳೆಲ್ಲವು) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರದಲ್ಲಿಯೂ ಇದ್ದು, ಹೊಂದಾಣಿಕೆಯಾಗಬೇಕು.

ಈ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಜಿದಾರರು ಹೊಲಿಗೆ ಯಂತ್ರ ತರಬೇತಿ ಪಡೆದ ಪ್ರಮಾಣ ಪತ್ರ ಹೊಂದಿರಬೇಕು. ಒಂದು ಕುಟುಂಬದಲ್ಲಿ ಓರ್ವ ಸದಸ್ಯರು ಮಾತ್ರ ಈ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ.

ಈ ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗಗಳ ಮಹಿಳೆಯರು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಫೆಬ್ರವರಿ, 20 ಕೊನೆಯ ದಿನವಾಗಿದೆ. ಹಾಗೂ ನಿಗಮದ ವೆಬ್‍ಸೈಟ್ https://www.dbcdc.karnataka.gov.in ಇಲ್ಲಿ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದು.

ಹೆಚ್ಚಿನ ಮಾಹಿತಿಯನ್ನು ಪಡೆಯಲು ನಿಗಮದ ಸಹಾಯವಾಣಿ ಸಂಖ್ಯೆ: 080-22374832 ಮತ್ತು 8050770004 ಅಥವಾ 7090400100, 7090400900 ಅಥವಾ ಕಚೇರಿ ವೇಳೆಯಲ್ಲಿ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(ನಿ), ಮಡಿಕೇರಿ ದೂರವಾಣಿ ಸಂಖ್ಯೆ: 08272-221656 ನ್ನು ಸಂಪರ್ಕಿಸಬಹುದು ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1620
Coovercolly Indresh

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು