News Karnataka Kannada
Wednesday, May 01 2024
ಮಡಿಕೇರಿ

ಮಡಿಕೇರಿ: ಮತದಾನ ಮಹತ್ವ ಕುರಿತು ಜಾಗೃತಿ ಜಾಥಾ

Awareness jatha on the importance of voting
Photo Credit : News Kannada

ಮಡಿಕೇರಿ: ಕೊಡಗು ಜಿಲ್ಲಾಡಳಿತ, ಜಿಲ್ಲಾ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ, ಕೊಡಗು ಸ್ಕೌಟ್ಸ್ ಮತ್ತು ಗೈಡ್ಸ್ ಸಹಯೋಗದಲ್ಲಿ ಮತದಾನದ ಮಹತ್ವ ಕುರಿತು ಜಾಗೃತಿ ಜಾಥಾ  ಶುಕ್ರವಾರ ನಡೆಯಿತು.

ಜಾಗೃತಿ ಜಾಥಗೆ ಜಿ.ಪಂ.ಸಿಇಒ ಮತ್ತು ಸ್ವೀಪ್ ಸಮಿತಿ ಅಧ್ಯಕ್ಷರಾದ ಡಾ.ಎಸ್.ಆಕಾಶ್ ಅವರು ಚಾಲನೆ ನೀಡಿದರು. ಜಾಥವು ಮಹದೇವ ಪೇಟೆಯ ಎ.ವಿ.ಶಾಲೆ ಬಳಿಯಿಂದ ಆರಂಭವಾಗಿ ಮಹದೇವಪೇಟೆಯ ಪ್ರಮುಖ ರಸ್ತೆ ಮೂಲಕ ಸ್ಕ್ವಾಡರ್ನ್ ಲೀಡರ್ ಅಜ್ಜಮಾಡ ದೇವಯ್ಯ ವೃತ್ತ ತಲುಪಿತು.

ಪದ್ಮಶ್ರೀ ಪ್ರಶಸ್ತಿ ಪುರಸ್ಕøತರಾದ ರಾಣಿ ಮಾಚಯ್ಯ ಅವರು ಮಾತನಾಡಿ ಇದೇ ಮೇ, 10 ರಂದು ನಡೆಯುವ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಯಲ್ಲಿ ಅರ್ಹರೆಲ್ಲರೂ ಮತದಾನ ಮಾಡುವ ಮೂಲಕ ಸಂಭ್ರಮಿಸಬೇಕು ಎಂದು ಕರೆ ನೀಡಿದರು.

ಜಿಲ್ಲಾಡಳಿತ, ಸ್ವೀಪ್ ಸಮಿತಿ, ಸ್ಕೌಟ್ಸ್ ಮತ್ತು ಗೈಡ್ಸ್ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ಮತದಾನ ಮಹತ್ವ ಕುರಿತು ವಿವಿಧ ರೀತಿಯ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ತಪ್ಪದೇ ಮತದಾನ ಮಾಡುವಂತಾಗಬೇಕು ಎಂದು ರಾಣಿ ಮಾಚಯ್ಯ ಅವರು ಕೋರಿದರು.

ಜಾಥಗೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ ಡಾ.ಎಸ್.ಆಕಾಶ್ ಅವರು 18 ವರ್ಷ ಪೂರ್ಣಗೊಂಡವರು ಕಡ್ಡಾಯವಾಗಿ ಮತದಾನ ಮಾಡಿ ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಮತದಾನದ ಮಹತ್ವ ಕುರಿತು ಹಲವು ರೀತಿಯ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಆ ನಿಟ್ಟಿನಲ್ಲಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ವಿವಿಧ ರೀತಿಯ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಮತದಾನವು ಮೇ, 10 ರಂದು ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ನಡೆಯಲಿದ್ದು, ತಪ್ಪದೇ ಮತ ಚಲಾಯಿಸುವಂತಾಗಬೇಕು. ಪ್ರಜಾಪ್ರಭುತ್ವವ ಹಬ್ಬವನ್ನು ಮತ ಹಾಕುವ ಮೂಲಕ ಸಂಭ್ರಮಿಸಬೇಕು ಎಂದರು.

ಸ್ವೀಪ್ ಸಮಿತಿ ಅಧ್ಯಕ್ಷರಾದ ಡಾ.ಎಸ್.ಆಕಾಶ್ ಅವರು ಮಹದೇವಪೇಟೆಯ ಮುಖ್ಯ ರಸ್ತೆಯ ಉದ್ದಕ್ಕೂ ಕರಪತ್ರವನ್ನು ಹಂಚಿ ಮತದಾನ ಮಹತ್ವ ಕುರಿತು ಜಾಗೃತಿ ಮೂಡಿಸಿದರು.

ಸ್ಕೌಟ್ಸ್ ಮತ್ತು ಗೈಡ್ಸ್‍ನ ಪ್ರಧಾನ ಆಯುಕ್ತರಾದ ಕೆ.ಟಿ.ಬೇಬಿ ಮ್ಯಾಥ್ಯೂ ಅವರು ಮಾತನಾಡಿ ಮೇ, 10 ರಂದು ನಡೆಯುವ ವಿಧಾನಸಭಾ ಚುನಾವಣೆಗೆ ಅರ್ಹರೆಲ್ಲರೂ ಮತದಾನ ಮಾಡುವಂತಾಗಬೇಕು. ತಮ್ಮ ಅಮೂಲ್ಯ ಹಕ್ಕನ್ನು ಚಲಾಯಿಸುವಂತಾಗಬೇಕು ಎಂದರು.

ಯಾವುದೇ ಆಸೆ, ಆಮಿಷಗಳಿಗೆ ಒಳಗಾಗದೆ ನೈತಿಕ ಮತ್ತು ಕಡ್ಡಾಯ ಮತದಾನ ಮಾಡಬೇಕು. ಮತದಾನ ಎಂಬುದು 18 ವರ್ಷ ಮೇಲ್ಪಟ್ಟವರೆಲ್ಲರಿಗೂ ಅತ್ಯಮೂಲ್ಯವಾದ ಹಕ್ಕಾಗಿದೆ. ಜೊತೆಗೆ ಹೊಣೆಗಾರಿಕೆಯೂ ಆಗಿದೆ. ಆ ನಿಟ್ಟಿನಲ್ಲಿ ನಿರ್ಭೀತಿಯಿಂದ ಮತ ಚಲಾಯಿಸಬೇಕು. ಮತದಾನಕ್ಕಿಂತ ಮತ್ತೊಂದಿಲ್ಲ. ಖಂಡಿತ ಮತ ಚಲಾಯಿಸುತ್ತೇವೆ ಎಂಬುದು ಅರ್ಹರೆಲ್ಲರಲ್ಲಿಯೂ ಬರಬೇಕು ಎಂದು ಕೆ.ಟಿ.ಬೇಬಿಮ್ಯಾಥ್ಯು ಅವರು ತಿಳಿಸಿದರು.

ಜಾಥದಲ್ಲಿ ವಿಶೇಷಚೇತನರು ತ್ರಿಚಕ್ರ ವಾಹನದ ಮೂಲಕ ಪಾಲ್ಗೊಂಡು ಗಮನ ಸೆಳೆದರು. ಕೊಡಗು ಜಿಲ್ಲಾ ಚುನಾವಣಾ ರಾಯಬಾರಿಗಳಾದ ಬಸವರಾಜ ಬಡಿಗೇರ್, ಕೆ.ಎಸ್.ಈಶ್ವರಿ, ಕೆ.ಯು.ರವಿ ಮುತ್ತಪ್ಪ, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷರಾದ ಕೇಶವ ಕಾಮತ್, ಜಾನಪದ ಪರಿಷತ್ ತಾಲ್ಲೂಕು ಘಕಟಕದ ಅಧ್ಯಕ್ಷರಾದ ಅನಿಲ್ ಎಚ್.ಟಿ., ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿ ಅಧ್ಯಕ್ಷರಾದ ಟಿ.ಜಿ.ಪ್ರೇಮಕುಮಾರ್, ಲಯನ್ಸ್ ಕ್ಲಬ್ ಅಧ್ಯಕ್ಷರಾದ ಕನ್ನಂಡ ಕವಿತಾ ಬೊಳ್ಳಪ್ಪ, ಲಯನ್ಸ್ ಕ್ಲಬ್‍ನ ದಾಮೋದರ, ಕೊಡವ ಮಕ್ಕಡ ಕೂಟದ ಅಧ್ಯಕ್ಷರಾದ ಬೊಳ್ಳಜ್ಜಿರ ಅಯ್ಯಪ್ಪ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‍ನ ಸಂಪಾಜೆ ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾದ ಎಂ.ಧನಂಜಯ, ಕಾರ್ಯದರ್ಶಿ ಕೆ.ಬಿ.ಉಷಾರಾಣಿ, ರೋಟರಿ ಮಿಸ್ಟಿ ಹಿಲ್ಸ್‍ನ ಅಧ್ಯಕ್ಷರಾದ ಪ್ರಸಾದ್ ಗೌಡ, ಲಯನ್ಸ್ ಟ್ರಸ್ಟ್ ಅಧ್ಯಕ್ಷರಾದ ಅಂಬೆಕಲ್ಲು ನವೀನ್, ಜಿ.ಪಂ.ಯೋಜನಾ ವಿಭಾಗದ ನವೀನ್, ವಿಕಲಚೇತನರ ಇಲಾಖೆಯ ಅಧಿಕಾರಿ ವಿಮಲ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಸದಾಶಿವ ಪಲ್ಲೇದ್, ಹಿಂದುಳಿದ ವರ್ಗಗಳ ತಾಲ್ಲೂಕು ಅಧಿಕಾರಿ ಮೋಹನ್ ಕುಮಾರ್, ಸ್ಕೌಟ್ಸ್ ಮತ್ತು ಗೈಡ್ಸ್‍ನ ಜಿಲ್ಲಾ ಸ್ಥಾನಿಕ ಆಯುಕ್ತರಾದ ಎಚ್.ಆರ್.ಮುತ್ತಪ್ಪ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಎಂ.ವಸಂತಿ, ಸಿ.ಪಿ.ಕುಟ್ಟಪ್ಪ, ಕೆ.ಯು.ರಂಜಿತ್, ಪ್ರಸನ್ನ, ವಸಂತ್ ಕುಮಾರ್, ಸರೋಜಿನಿ ದೇವಿ, ಬೋಪಣ್ಣ, ಹ್ಯಾರೀಸ್, ಅಜ್ಜಮಾಡ ವಿನಯ್ ಕುಮಾರ್, ಪ್ರಸನ್ನ ಕುಮಾರ್, ಕೆ.ಬಿ.ಕುಮಾರಸ್ವಾಮಿ, ಗೌರಿ, ನಾಪೋಕ್ಲುವಿನ ಅಂಕೂರು ಪಬ್ಲಿಕ್ ಶಾಲೆಯ ರತ್ನ ಚರ್ಮಣ, ಪ್ರಾಂಶುಪಾಲರಾದ ಮಮತ, ಶೃತಿ, ಪಿ.ಬಿ.ಮಹೇಶ್, ಅಭಿಮರಿಯಂ, ಪರಿಸರ ಅಧಿಕಾರಿ ಎಂ.ಜಿ.ರಘುರಾಮ್, ಸ್ಕೌಟ್ಸ್ ಮತ್ತು ಗೈಡ್ಸ್‍ನ ಸಂಘಟಕರಾದ ದಮಯಂತಿ, ಸ್ಕೌಟ್ಸ್ ಮತ್ತು ಗೈಡ್ಸ್‍ನ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳು, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ವಿದ್ಯಾರ್ಥಿಗಳು, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಉಪನ್ಯಾಸಕರು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಇತರರು ಪಾಲ್ಗೊಂಡಿದ್ದರು.

ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ವಿದ್ಯಾರ್ಥಿಗಳು, ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ಪ್ರತಿನಿಧಿಗಳು, ಇತರರು ಇದ್ದರು.
ನಗರದ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ.ದೇವಯ್ಯ ವೃತ್ತದಲ್ಲಿ ಎಲ್ಲರೂ ಒಂದೆಡೆ ಸೇರಿ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು. ಸ್ಕೌಟ್ಸ್ ಮತ್ತು ಗೈಡ್ಸ್ ಪ್ರಧಾನ ಆಯುಕ್ತರಾದ ಕೆ.ಟಿ.ಬೇಬಿ ಮ್ಯಾಥ್ಯೂ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು