ಮಡಿಕೇರಿ

ಮಡಿಕೇರಿ: ಬ್ಯಾಂಕ್ ಆಫ್ ಬರೋಡದ ಜಿ.ಟಿ ರಸ್ತೆ ಶಾಖೆಯನ್ನು ವಿಲೀನಗೊಳಿಸದಂತೆ ಒತ್ತಾಯ

ಮಡಿಕೇರಿ: ಮಡಿಕೇರಿ ನಗರದಲ್ಲಿರುವ ಬ್ಯಾಂಕ್ ಆಫ್ ಬರೋಡದ ಜಿ.ಟಿ ರಸ್ತೆ ಶಾಖೆಯನ್ನು ಮುಖ್ಯ ಶಾಖೆಗೆ ವಿಲೀನಗೊಳಿಸಬಾರದೆಂದು ಮಡಿಕೇರಿ ತಾಲ್ಲೂಕು ಲೋಕೋಪಯೋಗಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಬಿ.ಪಿ.ರಾಜೀವ ಲೋಚನ ಒತ್ತಾಯಿಸಿದ್ದಾರೆ.

ಬ್ಯಾಂಕ್ ಆಫ್ ಬರೋಡದ ವಲಯ ಕಚೇರಿಯ ಮಂಗಳೂರು ವಲಯ ವ್ಯವಸ್ಥಾಪಕರು ಹಾಗೂ ಮಡಿಕೇರಿಯ ಲೀಡ್ ಬ್ಯಾಂಕ್ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿರುವ ಅವರು, ಗ್ರಾಹಕರ ಹಿತದೃಷ್ಟಿಯಿಂದ ವಿಲೀನ ಪ್ರಕ್ರಿಯೆಯನ್ನು ಕೈಬಿಡಬೇಕೆಂದು ಆಗ್ರಹಿಸಿದ್ದಾರೆ.

ನಾವುಗಳು ಕಳೆದ ಹಲವು ವರ್ಷಗಳಿಂದ ಬ್ಯಾಂಕ್ ಆಫ್ ಬರೋಡದ ಗ್ರಾಹಕರಾಗಿದ್ದು, ಇಲ್ಲಿನ ವ್ಯವಸ್ಥಾಪಕರು ಹಾಗೂ ಸಿಬ್ಬಂದಿ ವರ್ಗದವರು ಉತ್ತಮ ರೀತಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. 2007ರಲ್ಲಿ ಹಲವು ಗ್ರಾಹಕರ ಅನುಕೂಲಕ್ಕಾಗಿ ಮತ್ತು ಹಿರಿಯ ಗ್ರಾಹಕರಿಗೆ ಯಾವುದೇ ರೀತಿಯಲ್ಲಿ ತೊಂದರೆ ಆಗದಿರಲಿ ಎಂದು ಜಿ.ಟಿ ರಸ್ತೆಯಲ್ಲಿ ಮತ್ತೊಂದು ಶಾಖೆಯನ್ನು ತೆರೆಯಲಾಯಿತು. ಈ ಶಾಖೆಯು ಇಲ್ಲಿಯವರೆಗೆ ಜನಸ್ನೇಹಿಯಾಗಿ ಕಾರ್ಯನಿರ್ವಹಿಸುತ್ತಾ ಬಂದಿದ್ದು, ಗುತ್ತಿಗೆದಾರರು ಸೇರಿದಂತೆ ಹೆಚ್ಚಿನ ಗ್ರಾಹಕರು ಖಾತೆ ಹೊಂದಿದ್ದಾರೆ. ಬ್ಯಾಂಕ್ ಆವರಣದಲ್ಲಿ ಸಾಕಷ್ಟು ವಾಹನಗಳನ್ನು ನಿಲುಗಡೆಗೊಳಿಸಲು ಸ್ಥಳಾವಕಾಶವಿದೆ.

ಆದರೆ ನಗರದ ಹೃದಯ ಭಾಗದಲ್ಲಿರುವ ಮುಖ್ಯ ಶಾಖೆ ಮುಖ್ಯ ರಸ್ತೆಯ ಪಕ್ಕದಲ್ಲೇ ಇದ್ದು, ವಾಹನಗಳ ನಿಲುಗಡೆ ಅಸಾಧ್ಯವಾಗಿದೆ. ಹಿರಿಯ ನಾಗರೀಕರಿಗೆ ಬ್ಯಾಂಕ್ ಗೆ ಬಂದು ಹೋಗುವುದು ಕಷ್ಟಸಾಧ್ಯವಾಗಲಿದೆ. ಎರಡು ಶಾಖೆ ವಿಲೀನವಾಗುವುದರಿಂದ ಕಾರ್ಯದ ಒತ್ತಡ ಹೆಚ್ಚಾಗಿ ಗ್ರಾಹಕರಿಗೆ ಉತ್ತಮ ಸೇವೆ ಲಭಿಸುವುದು ಅಸಾಧ್ಯವಾಗಿದೆ. ಅಲ್ಲದೆ ದಿನ ಪೂರ್ತಿ ಕಾದು ಕುಳಿತುಕೊಳ್ಳಬೇಕಾದ ಪರಿಸ್ಥಿತಿ ಬಂದೊದಗಬಹುದು ಎಂದು ರಾಜೀವ ಲೋಚನ ಗಮನ ಸೆಳೆದಿದ್ದಾರೆ.

ಈ ಎಲ್ಲಾ ಅಡಚಣೆಗಳನ್ನು ಪರಿಗಣಿಸಿ ಗ್ರಾಹಕರ ಹಿತದೃಷ್ಟಿಯಿಂದ ಜಿ.ಟಿ. ರಸ್ತೆಯ ಶಾಖೆಯನ್ನು ವಿಲೀನಗೊಳಿಸದೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಅವರು ಮನವಿ ಮಾಡಿದ್ದಾರೆ.

Ashika S

Recent Posts

ಕೊನೆಯ ಸ್ಥಾನದೊಂದಿಗೆ ಐಪಿಎಲ್ ಅಂತ್ಯಗೊಳಿಸಿದ ಮುಂಬೈ ಇಂಡಿಯನ್ಸ್

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ  ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ  ಹಾರ್ದಿಕ್ ಪಾಂಡ್ಯ ಪಡೆ ಮುಂಬೈ ಇಂಡಿಯನ್ಸ್ ಸೋಲನುಭವಿಸಿದೆ.

8 mins ago

8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌: ಗುಡುಗು, ಮಿಂಚು ಸಹಿತ ಮಳೆ ಸಾಧ್ಯತೆ

ರಾಜ್ಯಾದ್ಯಂತ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು,  40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಿ, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.

31 mins ago

ಸ್ವಾತಿ ಮಲಿವಾಲ್‌ ಮೇಲೆ ದೂರು ದಾಖಲಿಸಿದ ಆರೋಪಿ ಬಿಭವ್‌

ಆಪ್‌ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣದ ಆರೋಪಿಯಾಗಿರುವ ಬಿಭವ್‌ ಕುಮಾರ್‌ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ…

50 mins ago

ತಾಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿವ್ಯವಸ್ಥೆ ಪರಿಶೀಲಿಸಿದ ಡಿವೈಎಸ್ಪಿ

ಲೋಕಾಯುಕ್ತದ ಕಲಬುರಗಿ ಡಿವೈಎಸ್ಪಿ ಆಯಂಟನಿ ಜಾನ್ ಹಾಗೂ ಇತರೆ ಅಧಿಕಾರಿಗಳು ಗುರುವಾರ ನಗರದಲ್ಲಿನ ತಾಲ್ಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿ…

1 hour ago

ಪವಿತ್ರಾ ಜಯರಾಂ ಮೃತಪಟ್ಟ ಬೆನ್ನಲ್ಲೇ ನಟ ಚಂದು ಆತ್ಮಹತ್ಯೆ

ಇತ್ತೀಚೆಗಷ್ಟೇ ತ್ರಿನಯನಿ ಧಾರಾವಾಹಿಯ ನಟಿ ಪವಿತ್ರಾ ಜಯರಾಂ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ  ತೆಲುಗು ಧಾರಾವಾಹಿ ನಟ…

1 hour ago

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

9 hours ago