Categories: ಮಡಿಕೇರಿ

ಮಡಿಕೇರಿ: ಜಿಲ್ಲಾ ಬಿಜೆಪಿ ನೂತನ ಕಚೇರಿಗೆ ಭೂಮಿಪೂಜೆ

ಮಡಿಕೇರಿ: ಕೊಡಗು ಜಿಲ್ಲಾ ಭಾರತೀಯ ಜನತಾ ಪಾರ್ಟಿಯ 2 ಕೋಟಿ ವೆಚ್ಚದಲ್ಲಿ ಮಡಿಕೇರಿಯ ಶ್ರೀ ಓಂಕಾರೇಶ್ವರ ದೇವಸ್ಥಾನ ರಸ್ತೆ ಬಳಿಯ ನಿವೇಶನದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ ನೂತನ ಕಛೇರಿಗೆ ಭೂಮಿಪೂಜೆ ನೆರವೇರಿತು.

ರಾಷ್ಟ್ರೀಯ ಬಿಜೆಪಿ ಅಧ್ಯಕ್ಷರಾದ ಜೆ.ಪಿ.ನಡ್ಡಾ ಅವರು ಜಿಲ್ಲಾ ಬಿಜೆಪಿ ಕಛೇರಿ ಕಟ್ಟಡ ನಿರ್ಮಾಣಕ್ಕೆ ವಚ್ರ್ಯುವಲ್ ಮೂಲಕ ಶಂಕುಸ್ಥಾಪನೆ ನೆರವೇರಿಸಿದರು.

ಈ ಸಂದರ್ಭ ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ , ಜಿಲ್ಲಾ ಬಿಜೆಪಿ ಅಧ್ಯಕ್ಷ ಪಳೆಯಂಡ ರಾಬಿನ್ ದೇವಯ್ಯ, ಮಂಗಳೂರು ವಿಭಾಗದ ಪ್ರಭಾರಿ ಹಾಗೂ ಮೈಸೂರು ಎಲೆಕ್ಟ್ರಿಕಲ್ ನಿಗಮದ ಅಧ್ಯಕ್ಷರಾದ ಉದಯಕುಮಾರ್ ಶೆಟ್ಟಿ, ಶಾಸಕ ಅಪ್ಪಚ್ಚು ರಂಜನ್, ರಾಜ್ಯ ಜೀವವೈವಿದ್ಯ ಮಂಡಳಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಮಾಜಿ ಅಧ್ಯಕ್ಷರು ಹಾಗೂ ಕಟ್ಟಡ ಸಮಿತಿಯ ಅಧ್ಯಕ್ಷರಾದ ಬಿ.ಬಿ.ಭಾರತೀಶ್, ಹಿರಿಯ ಬಿಜೆಪಿ ಮುಖಂಡರಾದ ಡಾ. ಜಿ.ಪಾಟ್ಕರ್, ಪ್ರಮುಖರಾದ ರಮೇಶ್ ಹೊಳ್ಳ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಎಸ್.ಜಿ.ಮೇದಪ್ಪ, ಸುನೀಲ್ ಸುಬ್ರಹ್ಮಣಿ, ಹಿರಿಯರ ಪ್ರಕೊಸ್ತದ ಸಂಚಾಲಕರಾದ ಕೋಡಿ ಪೊನ್ನಪ್ಪ ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

TV 1 NEWS UPDATE

Gayathri SG

Recent Posts

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

5 mins ago

ಪೆನ್‌ಡ್ರೈವ್‌ ಕೇಸ್‌ : ವಕೀಲ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌, ಮಹಿಳೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಮುಖಂಡ, ವಕೀಲರೂ ಆಗಿರುವ ದೇವರಾಜೇಗೌಡರನ್ನು 14…

16 mins ago

ರೈತನ ಆರು ತಿಂಗಳ ಶ್ರಮ ಅರ್ಧಗಂಟೆಯಲ್ಲೇ ಹೋಮ

ಇಂದು ಸಂಜೆ ಸುರಿದ ಬಾರಿ ಮಳೆಗೆ ರೈತ ಬೆಳೆದಿದ್ದ ಬಾಳೆ ಫಸಲು ಸಂಪೂರ್ಣವಾಗಿ ನಾಶವಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಉತ್ತುವಳ್ಳಿಯಲ್ಲಿ…

49 mins ago

ಬಾರ್ ಗೆ ನುಗ್ಗಿದ ಕಳ್ಳರು: 60 ಲೀಟರ್ ಮದ್ಯ ಕಳ್ಳತನ

ಜಿಲ್ಲೆಯ ಹನೂರು ಪಟ್ಟಣದ ಬಂಡಳ್ಳಿ ಮುಖ್ಯ ರಸ್ತೆಯಲ್ಲಿರುವ ಅಮೃತ್ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ತಡ ರಾತ್ರಿ ಕಳ್ಳರ ತಂಡ…

1 hour ago

ಬಾಳೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಕೋರಿ ರಾಷ್ಟ್ರೀಯ ಹೆದ್ದಾರಿ ಬಂದ್ ಚಳುವಳಿ

ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಚಾಮರಾಜನಗರದ ಸತ್ಯಮಂಗಲಂ ಮುಖ್ಯ ರಸ್ತೆಯಲ್ಲಿ ಜಮಾಯಿಸಿದ ಸಂಘದ ಪದಾಧಿಕಾರಿಗಳು…

1 hour ago

ಗಾಳಿ ಸಮೇತ ಭಾರಿ ಮಳೆ : ನೆಲಕಚ್ಚಿದ ಮರಗಳು

ಧಾರವಾಡದಲ್ಲಿ ಶನಿವಾರ ಗಾಳಿ ಸಮೇತ ಮಳೆಯಾಗಿದ್ದು, ಅಲ್ಲಲ್ಲಿ ಮರಗಳು ನೆಲಕಚ್ಚಿದ ಬಗ್ಗೆ ವರದಿಯಾಗಿದೆ. ಬೆಳಿಗ್ಗೆಯಿಂದ ವಿಪರೀತ ಬಿಸಿಲಿನ ವಾತಾವರಣವಿತ್ತು

2 hours ago