Categories: ಮಡಿಕೇರಿ

ಮಡಿಕೇರಿ: ಬಿಜೆಪಿಯಿಂದ ಕೊಡಗಿನ ಜನ ತಲೆ ತಗ್ಗಿಸುವಂತಾಗಿದೆ- ಸರಿತಾ ಪೂಣಚ್ಚ ಆರೋಪ

ಮಡಿಕೇರಿ, ಆ.22: ಭ್ರಷ್ಟಾಚಾರವನ್ನು ಮರೆ ಮಾಚುವ ಉದ್ದೇಶದಿಂದ ಕೋಮು ಭಾವನೆಗಳನ್ನು ಕೆರಳಿಸುವ ಹುನ್ನಾರದಲ್ಲಿ ತೊಡಗಿರುವ ಬಿಜೆಪಿ, ವಿರೋಧ ಪಕ್ಷದ ನಾಯಕರಿಗೆ ಮೊಟ್ಟೆ ಎಸೆಯುವ ಕೀಳು ಮಟ್ಟದ ರಾಜಕೀಯ ಪ್ರದರ್ಶಿಸುವ ಮೂಲಕ ಕೊಡಗಿನ ಜನ ತಲೆತಗ್ಗಿಸುವಂತೆ ಮಾಡಿದೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ವಕ್ತಾರೆ ಕೇಚಮಾಡ ಸರಿತಾ ಪೂಣಚ್ಚ ಆರೋಪಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು ಜಿಲ್ಲೆಯಲ್ಲಿ ನಡೆದ ಭ್ರಷ್ಟಾಚಾರವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಯಲಿಗೆಳೆಯುತ್ತಾರೆ ಎನ್ನುವ ಆತಂಕದಿಂದ ಕಾಮಗಾರಿಗಳನ್ನು ಪರಿಶೀಲಿಸಲು ಅಡ್ಡಿಪಡಿಸಿದಲ್ಲದೆ ಮೊಟ್ಟೆ ಎಸೆದಿದ್ದಾರೆ. ಇದು ಬಿಜೆಪಿ ಮತ್ತು ಸಂಘ ಪರಿವಾರದ ನೀಚ ಸಂಸ್ಕೃತಿಗೆ ಸಾಕ್ಷಿಯಾಗಿದ್ದು, ಇದರಿಂದ ಕೊಡಗಿನ ಗೌರವಕ್ಕೆ ದಕ್ಕೆಯಾಗಿದೆ ಎಂದು ದೂರಿದ್ದಾರೆ.

ಸಿದ್ಧರಾಮಯ್ಯ ಅವರು ಕೊಡಗು ಜಿಲ್ಲೆಗೆ ಅಪಾರ ಕೊಡುಗೆಯನ್ನು ನೀಡಿ ಹಲವು ಅಭಿವೃದ್ಧಿ ಕಾರ್ಯಗಳಿಗೆ ಸಹಕಾರ ನೀಡಿದ್ದಾರೆ. 2018 ರಲ್ಲಿ ಪ್ರಾಕೃತಿಕ ವಿಕೋಪ ಸಂಭವಿಸಿದಾಗ ಸಮ್ಮಿಶ್ರ ಸರ್ಕಾರದ ಮೂಲಕ ಸಂತ್ರಸ್ತರಿಗೆ 800 ಕ್ಕೂ ಹೆಚ್ಚು ಮನೆಗಳನ್ನು ನೀಡಲಾಗಿದೆ. ಜಾತಿ, ಮತ ಭೇದವಿಲ್ಲದೆ ಎಲ್ಲಾ ಜನಾಂಗಗಳಿಗೂ ಸಮಾನ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸುವ ಮೂಲಕ ಸಿದ್ದರಾಮಯ್ಯ ಅವರು ಜಾತ್ಯತೀತ ನಾಯಕನೆಂದು ಹೆಸರುವಾಸಿಯಾಗಿದ್ದಾರೆ. ಯಾವುದೇ ಭ್ರಷ್ಟಾಚಾರದ ಆರೋಪಗಳು ಅವರ ಮೇಲೆ ಇಲ್ಲ, ಬಡವರ ಹಸಿವು ನೀಗಿಸಿ ಅತ್ಯುತ್ತಮ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ತಿಳಿಸಿದ್ದಾರೆ.

ಯಾರಿಗೂ ಅಂಜದೆ ಭ್ರಷ್ಟಾಚಾರವನ್ನು ಬಯಲಿಗೆಳೆಯುತ್ತಿದ್ದು, ಇದು ಬಿಜೆಪಿಗೆ ನುಂಗಲಾರದ ಬಿಸಿ ತುಪ್ಪವಾಗಿದೆ. ಇದೇ ಕಾರಣಕ್ಕೆ ಸಿದ್ದರಾಮಯ್ಯ ಅವರ ಮೇಲೆ ಮೊಟ್ಟೆ ಎಸೆದು ವಿಕೃತಿ ಮೆರೆಯಲಾಗಿದೆ. ಕೊಡಗು ಜಿಲ್ಲೆಯನ್ನು ಅನೇಕ ಜ್ವಲಂತ ಸಮಸ್ಯೆಗಳು ಕಾಡುತ್ತಿವೆ. ಇದಕ್ಕೆ ಪರಿಹಾರ ಸೂಚಿಸಲಾಗದ ಬಿಜೆಪಿಯ ಜನಪ್ರತಿನಿಧಿಗಳು ಮುಂದಿನ ಚುನಾವಣೆಯನ್ನು ಎದುರಿಸಲು ಸಾಧ್ಯವಾಗದ ಹತಾಶ ಸ್ಥಿತಿಯಲ್ಲಿದ್ದಾರೆ. ಹೇಗಾದರೂ ಮಾಡಿ ವೋಟ್ ಬ್ಯಾಂಕ್ ಸೃಷ್ಟಿಸಿಕೊಳ್ಳಬೇಕೆನ್ನುವ ದುರುದ್ದೇಶದಿಂದ ಜನಾಂಗಗಳ ನಡುವೆ ವಿಷ ಬೀಜ ಬಿತ್ತಿ ಕೋಮು ಪ್ರಚೋದನೆ ನೀಡುತ್ತಿದ್ದಾರೆ. ಕಾಂಗ್ರೆಸ್ ಬಲವರ್ಧನೆಯನ್ನು ಸಹಿಸಲಾಗದೆ ನಾಯಕರುಗಳ ಮೇಲೆ ಇಡಿ ದಾಳಿಯ ಮೂಲಕ ಕಿರುಕುಳ ನೀಡಿದ ಬಿಜೆಪಿ ಸರ್ಕಾರ, ಇದೀಗ ಕಾಂಗ್ರೆಸ್ ನ್ನು ರಾಜಕೀಯವಾಗಿ ಎದುರಿಸಲಾಗದೆ ಮೊಟ್ಟೆ ದಾಳಿಯಂತಹ ಕೀಳು ಮಟ್ಟದ ರಾಜಕಾರಣ ಮಾಡುತ್ತಿದೆ. ಬಿಜೆಪಿಯ ದುರಾಡಳಿತದಿಂದ ಬೇಸತ್ತಿರುವ ಜನ ಕಾಂಗ್ರೆಸ್ ಪರ ವಾಲುತ್ತಿರುವುದೇ ಇದಕ್ಕೆ ಪ್ರಮುಖ ಕಾರಣ ಎಂದು ಸರಿತಾ ಪೂಣಚ್ಚ ಆರೋಪಿಸಿದ್ದಾರೆ.

Gayathri SG

Recent Posts

ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರೆಂಟ್

ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ತಲೆಮರೆಸಿಕೊಂಡಿದ್ದಾರೆ. ಅವರ ವಿರುದ್ಧ ಶನಿವಾರ ಅರೆಸ್ಟ್ ವಾರಂಟ್…

5 mins ago

ಸರಣಿ ಅಪಘಾತ: ಎರ್ಟಿಗಾ ಕಾರು ಸಂಪೂರ್ಣ ‌ನಜ್ಜುಗುಜ್ಜು

ಭೀಕರ ಸರಣಿ ಅಪಘಾತವು ಬೆಳಗಿನ ಜಾವ 4 ಗಂಟೆ ಸಮಯದಲ್ಲಿ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಬಳಿ ನಡೆದಿದೆ.

8 mins ago

ಆರ್​ಸಿಬಿ ಪ್ಲೇ ಆಫ್​ಗೆ ಎಂಟ್ರಿ : ಅದೃಷ್ಟ ತಂದ ಅಶ್ವಿನಿ ಪುನೀತ್ ರಾಜ್​ಕುಮಾರ್ ಎಂಬ ಪೋಸ್ಟ್ ವೈರಲ್‌

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಸೋಲು ಕಂಡಾಗ ಸ್ಯಾಂಡಲ್​ವುಡ್​ ನಟ ದಿವಂಗತ ಪುನೀತ್ ರಾಜ್​ಕುಮಾರ್​ ಅವರ ಪತ್ನಿ ಅಶ್ವಿನಿಯವರನ್ನು…

38 mins ago

ಮೋದಿ ಪಾತ್ರದಲ್ಲಿ ‘ಬಾಹುಬಲಿ’ ಖ್ಯಾತಿಯ ನಟ ಸತ್ಯರಾಜ್

ಸಿನಿ, ರಾಜಕೀಯ, ಕ್ರೀಡಾ ಕ್ಷೇತ್ರದ ದಿಗ್ಗಜರ ಬದುಕಿನ ಮೇಲೆ ಸಿನಿಮಾ ಮಾಡುವುದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಆದರೆ ಇತ್ತೀಚೆಗೆ…

45 mins ago

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಸೈಬರ್ ವಂಚನೆ: ಓರ್ವ ವಶಕ್ಕೆ

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಕೂತು ಸೈಬರ್ ವಂಚನೆ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರ…

57 mins ago

ಯಾರನ್ನು ಬಂಧಿಸಬೇಕೋ ಅವರನೆಲ್ಲಾ ಬಂಧಿಸಿ ಜೈಲಿಗೆ ತಳ್ಳಿ ಎಂದು ಮೋದಿಗೆ ಚಾಲೆಂಜ್‌ ಹಾಕಿದ ಕೇಜ್ರಿವಾಲ್

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನವಾಗಿ ಜಾಮೀನಿನ ಮೇಲೆ ಹೊರ ಬಂದಿರುವ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಮುಖ್ಯಮಂತ್ರಿ…

1 hour ago