News Karnataka Kannada
Saturday, April 27 2024
ಮಡಿಕೇರಿ

ಮಡಿಕೇರಿ: ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲು ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಒತ್ತಾಯ

Congress minority wing demands holiday for schools, colleges
Photo Credit :

ಮಡಿಕೇರಿ: ಭಾರೀ ಗಾಳಿ ಮಳೆಯಿಂದ ಕೊಡಗು ಜಿಲ್ಲೆ ತತ್ತರಿಸಿ ಹೋಗಿದ್ದು, ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲಾಡಳಿತ ಎಲ್ಲಾ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಬೇಕೆಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕ ಒತ್ತಾಯಿಸಿದೆ.

ಪತ್ರಿಕಾ ಪ್ರಕಟಣೆ ನೀಡಿರುವ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಎಂ.ಎ.ಉಸ್ಮಾನ್ ಕಳೆದ 15 ದಿನಗಳಿಂದ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಗಾಳಿಯ ವೇಗ ಹೆಚ್ಚಾಗಿದೆ. ವಿವಿಧೆಡೆ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳುತ್ತಿದ್ದು, ಅಪಾಯದ ಸ್ಥಿತಿ ಎದುರಾಗಿದೆ. ಬರೆಗಳು ಕುಸಿಯುತ್ತಿವೆ, ನದಿಗಳಲ್ಲಿ ಅಪಾಯದ ಮಟ್ಟ ಮೀರಿ ನೀರು ಹರಿಯುತ್ತಿದ್ದು, ರಸ್ತೆ ಸಂಪರ್ಕ ಕಡಿತಗೊಳ್ಳುತ್ತಿದೆ. ಮೈಕೊರೆಯುವ ಚಳಿ ಕಾಡುತ್ತಿದೆ. ಆದ್ದರಿಂದ ಮಕ್ಕಳ ಹಿತದೃಷ್ಟಿಯಿಂದ ಶಾಲಾ, ಕಾಲೇಜುಗಳಿಗೆ ಕನಿಷ್ಠ ಎರಡು ದಿನ ರಜೆ ಘೋಷಿಸಬೇಕೆಂದು ಮನವಿ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1620
Coovercolly Indresh

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು