News Karnataka Kannada
Thursday, May 09 2024
ಮಡಿಕೇರಿ

ಮಡಿಕೇರಿ: ಜಿಲ್ಲಾ ಸಹಕಾರ ಒಕ್ಕೂಟದ ಮೂಲಕ ಯುವಜನರಿಗೆ ಸಹಕಾರ ಶಿಕ್ಷಣ- ಎ.ಕೆ.ಮನುಮುತ್ತಪ್ಪ

Madikeri: Karnataka State Co-operative Mahamandal's march towards co-operative societies
Photo Credit : By Author

ಮಡಿಕೇರಿ, ಡಿ.27: ‘ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳದ ನಡಿಗೆ ಸಹಕಾರ ಸಂಘಗಳ ಕಡೆಗೆ ಅಭಿಯಾನ’ವನ್ನು 2023 ರಲ್ಲಿ ಹಮ್ಮಿಕೊಳ್ಳಲಾಗುತ್ತದೆ ಎಂದು ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಎ.ಕೆ.ಮನುಮುತ್ತಪ್ಪ ತಿಳಿಸಿದ್ದಾರೆ.

ನಗರದ ಕರ್ನಾಟಕ ಇನ್ಸ್‍ಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ಸಂಸ್ಥೆಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಹಕಾರ ಸಂಘಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಸರ್ಕಾರದ ವತಿಯಿಂದ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಆ ನಿಟ್ಟಿನಲ್ಲಿ ಶಿಕ್ಷಣ ಮತ್ತು ತರಬೇತಿಗೆ ಒತ್ತು ನೀಡಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಸಹಕಾರ ಒಕ್ಕೂಟದ ಮೂಲಕ ಸಹಕಾರ ಶಿಕ್ಷಣವನ್ನು ಯುವಜನರಿಗೆ ನೀಡಲಾಗುತ್ತದೆ. ಆ ನಿಟ್ಟಿನಲ್ಲಿ ಕೊಡಗು ಜಿಲ್ಲೆಯಲ್ಲಿ ಸಹಕಾರ ತರಬೇತಿ ಕೇಂದ್ರದ ಮೂಲಕ 6 ತಿಂಗಳ ಡಿಪ್ಲೋಮ ಇನ್ ಕೋ ಆಪರೇಟಿವ್ ಮ್ಯಾನೇಜ್‍ಮೆಂಟ್ ಕೋರ್ಸ್‍ನ್ನು ವರ್ಷಕ್ಕೆ ಎರಡು ಬಾರಿ ತರಬೇತಿ ನೀಡಲಾಗುತ್ತದೆ ಎಂದರು.

ರಾಜ್ಯದಲ್ಲಿ 8 ಸಹಕಾರ ತರಬೇತಿ ಕೇಂದ್ರಗಳಿದ್ದು, ಕೊಡಗು ಜಿಲ್ಲೆಯಲ್ಲಿ 1955 ರಲ್ಲಿ ಪ್ರಥಮ ಬಾರಿಗೆ ಸಹಕಾರ ತರಬೇತಿ ಕೇಂದ್ರ ಆರಂಭವಾಗಿದೆ. ಕೊಡಗು, ಹಾಸನ, ಸುಳ್ಯ ಭಾಗದ ಅಭ್ಯರ್ಥಿಗಳು ತರಬೇತಿ ಪಡೆಯುತ್ತಿದ್ದಾರೆ. ಈ ಅವಕಾಶವನ್ನು ಯುವಜನರು ಬಳಸಿಕೊಳ್ಳುವಂತಾಗಬೇಕು ಎಂದು ಮನುಮುತ್ತಪ್ಪ ಅವರು ಕೋರಿದರು.

ಸಹಕಾರ ಕ್ಷೇತ್ರದಲ್ಲಿನ ವಿವಿಧ ಉದ್ಯೋಗಗಳಿಗೆ ಸಹಕಾರ ತರಬೇತಿ ಅನುಕೂಲವಾಗಲಿದೆ. ಕಳೆದ ವರ್ಷ 10 ರಲ್ಲಿ 5 ರ್ಯಾಂಕ್‍ಗಳನ್ನು ನಗರದ ಇನ್ಸ್‍ಟ್ಯೂಟ್ ಆಫ್ ಕೋ ಆಪರೇಟಿವ್ ಮ್ಯಾನೇಜ್‍ಮೆಂಟ್ ಸಂಸ್ಥೆಯ ವಿದ್ಯಾರ್ಥಿಗಳು ಪಡೆದಿದ್ದಾರೆ ಎಂದರು.

‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‍ಮೆಂಟ್ ಅಳವಡಿಸಿಕೊಳ್ಳಲಾಗಿದ್ದು, ವಾಣಿಜ್ಯ ಬ್ಯಾಂಕುಗಳಲ್ಲಿ ಸಹ ಇದನ್ನು ಅಳವಡಿಸಿಕೊಳ್ಳುವಂತಾಗಬೇಕು. ಇದರಿಂದ ಬ್ಯಾಂಕ್ ಕ್ಷೇತ್ರದಲ್ಲಿ ಸುಧಾರಣೆಯಾಗಲಿದೆ. ಜಿಲ್ಲೆಯಲ್ಲಿ ಡಿಸಿಸಿ ಬ್ಯಾಂಕ್ 21 ಶಾಖೆಗಳನ್ನು ಒಳಗೊಂಡಿದ್ದು, ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.’

ಕರ್ನಾಟಕ ಇನ್ಸ್‍ಟ್ಯೂಟ್ ಆಫ್ ಕೋ ಆಪರೇಟಿವ್ ಮ್ಯಾನೇಜ್‍ಮೆಂಟ್ ಸಂಸ್ಥೆಯ ಪ್ರಾಂಶುಪಾಲರಾದ ಡಾ.ಆರ್.ಎಸ್.ರೇಣುಕಾ ಅವರು ಮಾತನಾಡಿ ಕೊಡಗು ಜಿಲ್ಲೆಯಲ್ಲಿ ಸಹಕಾರ ತರಬೇತಿ ಕೇಂದ್ರ ಮೂಲಕ 6 ತಿಂಗಳ ಕೋಆಪರೇಟಿವ್ ಕೋರ್ಸ್‍ನ್ನು ವರ್ಷಕ್ಕೆ ಎರಡು ಬಾರಿ ನೀಡಲಾಗುತ್ತದೆ. ಹಾಗೆಯೇ ಸಹಕಾರ ಸಂಸ್ಥೆಯಲ್ಲಿ ಖಾಯಂ ಸಿಬ್ಬಂದಿಗಳಿಗೆ ದೂರಶಿಕ್ಷಣದಲ್ಲಿ ಡಿಪ್ಲೋಮಾ ಇನ್ ಕೋ ಆಪರೇಟಿವ್ ತರಬೇತಿಯನ್ನು ವರ್ಷಕ್ಕೆ ಎರಡು ತಂಡದಂತೆ ನಡೆಸಲಾಗುತ್ತದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1620
Coovercolly Indresh

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು