Categories: ಮಡಿಕೇರಿ

ಮಡಿಕೇರಿ: ಪ್ರತಾಪ್‍ ಸಿಂಹ ಅವರಿಂದ ಸಂಸದರ ಅನುದಾನ ದುರ್ಬಳಕೆ, ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪ

ಮಡಿಕೇರಿ: ಸಂಸದ ಪ್ರತಾಪ್‍ ಸಿಂಹ ಅವರು ಖಾಸಗಿ ಟ್ರಸ್ಟ್ ನಿರ್ವಹಿಸುತ್ತಿರುವ ಎರಡು ಆಸ್ಪತ್ರೆಗಳಿಗೆ ಸಂಸದರ ಅನುದಾನದಿಂದ ತಲಾ 18 ಲಕ್ಷ ಮೌಲ್ಯದ ಎರಡು ಅಂಬ್ಯುಲೆನ್ಸ್ ನೀಡುವ ಮೂಲಕ ಸಂಸದರ ಅನುದಾನವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ವಕ್ತಾರರಾದ ಎಂ.ಲಕ್ಷ್ಮಣ್ ಆರೋಪಿಸಿದ್ದಾರೆ.

ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಸದರ ನಿಧಿಯನ್ನು ಯಾವುದೇ ಟ್ರಸ್ಟ್, ಸೊಸೈಟಿ, ಕೋ ಆಪರೇಟಿವ್ ಸೊಸೈಟಿಗಳಿಗೆ ನೀಡಬಾರದೆಂಬ ನಿಯಮವನ್ನು ಉಲ್ಲಂಘಿಸಿ, ದಕ್ಷಿಣ ಕನ್ನಡ ಜಿಲ್ಲೆ ಮತ್ತು ಮೂಡಿಗೆರೆಯಲ್ಲಿ ಖಾಸಗಿ ಟ್ರಸ್ಟ್ ನಿರ್ವಹಿಸುತ್ತಿರುವ ಆಸ್ಪತ್ರೆಗಳಿಗೆ ತಲಾ 18 ಲಕ್ಷ ಮೌಲ್ಯದ ಎರಡು ಅಂಬ್ಯುಲೆನ್ಸ್ ನೀಡಲಾಗಿದ್ದು, ಸಂಸದ ಪ್ರತಾಪ್ ಸಿಂಹ ಅವರ ಕೊಡಗು-ಮೈಸೂರು ಕ್ಷೇತ್ರದಲ್ಲಿ ಕುಗ್ರಾಮಗಳಲ್ಲಿ ಮೂಲಸೌಲಭ್ಯಗಳಿಲ್ಲದ ಅದೆಷ್ಟೋ ಪ್ರಾಥಮಿಕ ಆರೋಗ್ಯ ಕೇಂದ್ರಗಳಿರುವುದು ಸಂಸದ ಪ್ರತಾಪ್ ಸಿಂಹ ಅವರ ಗಮನಕ್ಕೆ ಬರಲಿಲ್ಲವೇ ಎಂದು ಪ್ರಶ್ನಿಸಿದರು.

ಬಿಜೆಪಿಯಲ್ಲಿರುವ ಹಲವು ಮೋರ್ಚಾಗಳಂತೆ ಇದೀಗ ರೌಡಿ ಮೋರ್ಚಾವು ಆರಂಭಗೊಂಡಿದ್ದು, 36 ರೌಡಿಶೀಟರ್ಗರಳು ಈ ಮೋರ್ಚಾದಲ್ಲಿದ್ದು, ಈಗಾಗಲೇ 10 ರೌಡಿ ಶೀಟರ್ಗಿಳಿಗೆ ಬಿಜೆಪಿ ಖಾತೆ ತೆರೆಯದಿರುವ ಕ್ಷೇತ್ರಗಳಲ್ಲಿ ಎಂಎಲ್ಎಂ ಟಿಕೆಟ್ ನೀಡಲು ಸಿದ್ದತೆಗಳು ನಡೆಯುತ್ತಿವೆ ಎಂದು ಎಂ.ಲಕ್ಷ್ಮಣ್ ಆರೋಪಿಸಿದರು.

ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಮಡಿಕೇರಿ ಕ್ಷೇತ್ರದಿಂದ 7 ಮತ್ತು ವಿರಾಜಪೇಟೆ ಕ್ಷೇತ್ರದಿಂದ 3 ಮಂದಿ ಟಿಕೆಟ್ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದು, ಪಕ್ಷದ ವೀಕ್ಷಕರು ಸಭೆ ನಡೆಸಿ, ಕೆಲವು ಮಾನದಂಡಗಳನ್ನು ಅನುಸರಿಸಿ ಪ್ರತಿ ಕ್ಷೇತ್ರದಿಂದ ಮೂವರು ಆಕಾಂಕ್ಷಿಗಳ ಹೆಸರನ್ನು ಅಂತಿಮಗೊಳಿಸಿ ಕೆಪಿಸಿಸಿ ಕಳುಹಿಸಲಾಗುವುದೆಂದು ಎಂ.ಲಕ್ಷ್ಮಣ್ ತಿಳಿಸಿದರು.

Ashika S

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

4 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

4 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

5 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

5 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

6 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

7 hours ago