News Karnataka Kannada
Monday, April 29 2024
ಮಡಿಕೇರಿ

ಮಡಿಕೇರಿ: ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪೂರ್ವಭಾವಿ ಸಭೆ

Madikeri Block Congress held a preparatory meeting as part of The Amrit Mahotsav of Independence
Photo Credit : By Author

ಮಡಿಕೇರಿ: ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ.ಹಂಸ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಾರ್ಯಕ್ರಮದ ರೂಪುರೇಷೆಗಳ ಕುರಿತು ಚರ್ಚಿಸಲಾಯಿತು.

ಕೆಪಿಸಿಸಿ ಉಪಾಧ್ಯಕ್ಷ ಹಾಗೂ ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ ವಿನಯ್ ಕುಮಾರ್ ಸೋರಕೆ ಮಾತನಾಡಿ, ಮುಂದಿನ ದಿನಗಳಲ್ಲಿ ಜಿಲ್ಲಾ ಮುಖಂಡರೊಂದಿಗೆ ತೆರಳಿ ಪ್ರತಿ ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆಗೆ ಮುಂದಾಗಬೇಕೆಂದು ಕರೆ ನೀಡಿದರು.

ಪ್ರಸ್ತುತ ಸನ್ನಿವೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಕೇಡರ್ ಬೇಸ್ ಮಾದರಿಯ ಕಾರ್ಯಕರ್ತರ ಅನಿವಾರ್ಯತೆ ಇದೆ ಎಂದು ತಿಳಿಸಿದರು. ಕೆಪಿಸಿಸಿ ವಕ್ತಾರ ಹಾಗೂ ಜಿಲ್ಲಾ ಉಸ್ತುವಾರಿ ಎಂ.ಲಕ್ಷ್ಮಣ್ ಮಾತನಾಡಿ ಜಿಲ್ಲೆಯಲ್ಲಿ ಸಂಸದರು, ಶಾಸಕರು ಬಿಜೆಪಿಯವರೇ ಇದ್ದು, ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಆಡಳಿತವಿದೆ. ಜಿಲ್ಲೆಗೆ ಇವರು ನೀಡಿರುವ ಕೊಡುಗೆಗಳ ಬಗ್ಗೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಚರ್ಚೆ ಮಾಡುವ ಪರಿಸ್ಥಿತಿ ಬಂದಿದೆ ಎಂದರು.

ನ್ಯಾಷನಲ್ ಹೆರಾಲ್ಡ್ ಸಾರ್ವಜನಿಕ ಹಿತಾಸಕ್ತಿ ಹೊಂದಿರುವ ಪತ್ರಿಕಾ ಸಂಸ್ಥೆಯಾಗಿದ್ದು, ಇದರ ವ್ಯವಹಾರಗಳು ಅತ್ಯಂತ ಪಾರದರ್ಶಕವಾಗಿದೆ. ಆದರೆ ಕೇವಲ ಕಾಂಗ್ರೆಸ್ ಪಕ್ಷವನ್ನು ಅಧೀರಗೊಳಿಸಲು ಬಿಜೆಪಿ ಹಗರಣ ಎಂಬ ಸುಳ್ಳು ಸುದ್ದಿಯನ್ನು ಪ್ರಚಾರ ಮಾಡುತ್ತಿದೆ ಎಂದು ಆರೋಪಿಸಿದರು.
ಕೆಪಿಸಿಸಿ ಸಂಯೋಜಕ ಟಿ.ಪಿ.ರಮೇಶ್ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವತಂತ್ರ ದಿನಾಚರಣೆಯ ಅಮೃತ ಮಹೋತ್ಸವವನ್ನು ಅತ್ಯಂತ ಯಶಸ್ವಿಯಾಗಿ ಶಿಸ್ತು ಬದ್ಧವಾಗಿ ಆಚರಿಸಲು ಮನವಿ ಮಾಡಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಹಂಸ, ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಬ್ಲಾಕ್ ಕಾಂಗ್ರೆಸ್ ಈಗಾಗಲೆ ಸಿದ್ಧತೆ ಮಾಡಿಕೊಂಡಿದೆ ಎಂದರು. ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹೆಚ್.ಎಸ್.ಚಂದ್ರಮೌಳಿ ಕಾರ್ಯಕ್ರಮದ ಕುರಿತು ಮಾತನಾಡಿದರು.

ವಿಧಾನ ಪರಿಷತ್ ಮಾಜಿ ಸದಸ್ಯರಾದ ಶಾಂತೆಯಂಡ ವೀಣಾ ಅಚ್ಚಯ್ಯ, ಯುವ ಮುಖಂಡ ಡಾ.ಮಂಥರ್ ಗೌಡ, ನಿಕಟಪೂರ್ವ ಅಧ್ಯಕ್ಷ ಕೆ.ಕೆ.ಮಂಜುನಾಥ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸುಜು ತಿಮ್ಮಯ್ಯ, ಪ್ರಧಾನ ಕಾರ್ಯದರ್ಶಿ ಕೊಲ್ಯದ ಗಿರೀಶ್, ಗೌರವ ಪ್ರಧಾನ ಕಾರ್ಯದರ್ಶಿ ವಿ.ಪಿ.ಸುರೇಶ್, ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ಗೌಡ, ಸೇವಾದಳದ ಅಧ್ಯಕ್ಷ ಕಾನೆಹಿತ್ಲು ಮೊಣಪ್ಪ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷ ತೆನ್ನಿರ ಮೈನಾ, ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಎಂ.ಎ.ಉಸ್ಮಾನ್, ನಗರಾಧ್ಯಕ್ಷ ಕೆ.ಜಿ.ಪೀಟರ್, ಸೈನಿಕ ಘಟಕದ ಅಧ್ಯಕ್ಷ ಬೊಳ್ಳಿಯಂಡ ಗಣೇಶ್, ಸಾಮಾಜಿಕ ಜಾಲತಾಣದ ಅಧ್ಯಕ್ಷ ಸೂರಜ್ ಹೊಸೂರು, ಕೆಪಿಸಿಸಿ ಸಾಮಾಜಿಕ ಜಾಲತಾಣದ ಜಂಟಿ ಕಾರ್ಯದರ್ಶಿ ಚಂದ್ರಶೇಖರ್, ಜಿಲ್ಲಾ ಸದಸ್ಯರಾದ ಬಾಗೇಶ್, ಖಾಲಿದ್ ಹಾಕತ್ತೂರು, ಮಡಿಕೇರಿ ನಗರ ಮಹಿಳಾ ಘಟಕದ ಅಧ್ಯಕ್ಷರಾದ ಫ್ಯಾನ್ಸಿ ಪಾರ್ವತಿ, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಖಲೀಲ್ ಬಾಷಾ, ಪ್ರಧಾನ ಕಾರ್ಯದರ್ಶಿ ಯಶ್ ದೋಲ್ಪಾಡಿ, ಸಂಘಟನಾ ಕಾರ್ಯದರ್ಶಿ ಹಾಗೂ ಕೊಡಗು ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಕಾರ್ಯದರ್ಶಿ ರಾವೂಫ್ ಶೇಖ್, ಪ್ರಧಾನ ಕಾರ್ಯದರ್ಶಿ ಪೂರ್ಣಿಮಾ, ಸಂಘಟನಾ ಕಾರ್ಯದರ್ಶಿ ರವಿ ಗೌಡ, ಭಾರ್ಗವ, ಕಾರ್ಯದರ್ಶಿ ವಸಂತ್ ಭಟ್, ಪ್ರಮುಖರಾದ ಎಂ.ಎಂ.ಹನೀಫ್, ವಲಯಾಧ್ಯಕ್ಷ ನಂದ, ಮಡಿಕೇರಿ ನಗರಾಧ್ಯಕ್ಷ ಬಿ.ವೈ.ರಾಜೇಶ್, ಪ್ರಧಾನ ಕಾರ್ಯದರ್ಶಿ ಲಕ್ಷ್ಮಿಪ್ರಸಾದ್ ಪೆರ್ಲ, ಓಬಿಸಿ ಅಧ್ಯಕ್ಷ ಜೆ.ಸಿ.ಜಗದೀಶ್, ನಗರಸಭೆ ಮಾಜಿ ಉಪಾಧ್ಯಕ್ಷ ಟಿ.ಎಂ.ಅಯ್ಯಪ್ಪ, ಮಾಜಿ ಸದಸ್ಯರಾದ ಪ್ರಕಾಶ್ ಆಚಾರ್ಯ, ಉದಯಕುಮಾರ್, ಎಸ್‍ಸಿ ಘಟಕದ ಅಧ್ಯಕ್ಷ ಮುದ್ದುರಾಜು, ಮೂಡಾ ಮಾಜಿ ಅಧ್ಯಕ್ಷ ಚುಮ್ಮಿ ದೇವಯ್ಯ, ನಗರ ಕಾಂಗ್ರೆಸ್ಸಿನ ಪ್ರೇಮ, ಪದಾಧಿಕಾರಿಗಳಾದ ಕೌಸರ್, ಜಫ್ರುಲ್ಲಾಹ್, ಸೇವಾದಳದ ಪ್ರಮುಖರಾದ ಸೈಮನ್, ಅಲ್ಪಸಂಖ್ಯಾತ ಘಟಕದ ಪದಾಧಿಕಾರಿಗಳಾದ ಅಜೀಜ್, ಫಯಾಜ್, ಶೌಕತ್ ಅಲಿ, ಅನ್ವರ್ ಹಾಗೂ ಕೊಡಗು ಯುವ ಕಾಂಗ್ರೆಸ್, ಎನ್‍ಎಸ್‍ಯುಐ ಪದಾಧಿಕಾರಿಗಳು ಮಹಿಳಾ ಕಾಂಗ್ರೆಸ್ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಮಡಿಕೇರಿ ಬ್ಲಾಕ್ ಉಪಾಧ್ಯಕ್ಷ ಪ್ರಭು ರೈ ಸ್ವಾಗತಿಸಿ, ಖಜಾಂಚಿ ಬಲ್ಲಚಂಡ ಚಂದನ್ ವಂದಿಸಿದರು. ಪ್ರಧಾನ ಕಾರ್ಯದರ್ಶಿ ಮುನೀರ್ ಅಹಮ್ಮದ್ ನಿರೂಪಿಸಿ, ಉಪಾಧ್ಯಕ್ಷ ಲಿಯಾಕತ್ ಅಲಿ ನಾಡಗೀತೆ ಹಾಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1620
Coovercolly Indresh

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು