News Karnataka Kannada
Monday, May 06 2024
ಮಡಿಕೇರಿ

ಮಡಿಕೇರಿ: ವಿವಿಧ ರಸ್ತೆ ಹಾಗೂ ಚರಂಡಿ ಅಭಿವೃದ್ಧಿಗೆ ಶಾಸಕರಿಂದ ಚಾಲನೆ

MLA launches drive for development of various roads and drains
Photo Credit : News Kannada

ಮಡಿಕೇರಿ: ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ನಾಲ್ಕನೇ ಹಂತದಡಿ ನಗರದ ಭಗವತಿ ದೇವಸ್ಥಾನ ಬಳಿಯಿಂದ ಗಾಳಿಬೀಡು ಜಂಕ್ಷನ್‍ವರೆಗೆ ರಸ್ತೆ ನಿರ್ಮಾಣಕ್ಕೆ ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು ಶುಕ್ರವಾರ ಭೂಮಿಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿ ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು ಮಡಿಕೇರಿ ನಗರದಲ್ಲಿ ಸರ್ವಋತು ರಸ್ತೆ ಅಭಿವೃದ್ಧಿಗೆ 13 ಕೋಟಿ ರೂ. ವೆಚ್ಚದ ಟೆಂಡರ್ ಅನುಮೋದನೆ ಆಗಿದ್ದು, ಆ ನಿಟ್ಟಿನಲ್ಲಿ ಶುಕ್ರವಾರ 2.43 ಕೋಟಿ ರೂ. ವೆಚ್ಚದ ವಿವಿಧ ರಸ್ತೆ ಮತ್ತು ಚರಂಡಿ ಅಭಿವೃದ್ಧಿಗೆ ಚಾಲನೆ ನೀಡಲಾಗಿದೆ ಎಂದು ಹೇಳಿದರು.

ಮಡಿಕೇರಿ ನಗರದಲ್ಲಿನ ಹಲವು ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸಾರ್ವಜನಿಕರ ಕುಂದುಕೊರತೆ ಸಭೆಯನ್ನು ಮುಂದಿನ ಶುಕ್ರವಾರ ಏರ್ಪಡಿಸಲಾಗಿದೆ. ಆ ನಿಟ್ಟಿನಲ್ಲಿ ನಗರದ ಹಲವು ಸಮಸ್ಯೆಗಳನ್ನು ತ್ವರಿತವಾಗಿ ಇತ್ಯರ್ಥಪಡಿಸುವಲ್ಲಿ ಕ್ರಮವಹಿಸಲಾಗಿದೆ ಎಂದರು.

ಮಡಿಕೇರಿ ನಗರಸಭೆಯು ತೆರಿಗೆ ಸಂಗ್ರಹದಲ್ಲಿ ಶೇಕಡಾವಾರು ಪ್ರಗತಿ ಸಾಧಿಸಿದೆ. ನಗರಸಭೆಯಿಂದ ಸಾರ್ವಜನಿಕರಿಗೆ ಸ್ಪಂದಿಸುವ ನಿಟ್ಟಿನಲ್ಲಿ ಅಗತ್ಯ ಕೆಲಸಗಳು ನಡೆದಿವೆ. ನಗರದ ಎಲ್ಲಾ ರಸ್ತೆಗಳನ್ನು ಗುಂಡಿ ಮುಚ್ಚುವ ಮತ್ತು ರಸ್ತೆ ಅಭಿವೃದ್ಧಿ ಕೆಲಸಗಳು ನಡೆಯಲಿವೆ ಎಂದು ಶಾಸಕರು ಹೇಳಿದರು.

ವಿವಿಧ ರಸ್ತೆ ಮತ್ತು ಒರಂಡಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ:                                                                                      ಮಡಿಕೇರಿ ನಗರದ ವಾರ್ಡ್ ನಂಬರ್ 01 ರಲ್ಲಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿ, ವಾರ್ಡ್ ನಂ.8 ರಲ್ಲಿ ಒಳದಾರಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿ, ವಾರ್ಡ್ ನಂ.9 ರಲ್ಲಿ ಗೆಜ್ಜೆ ಸಂಗಪ್ಪ ಸಮುದಾಯ ಭವನ ಉನ್ನತ್ತೀಕರಣ ಕಾಮಗಾರಿ, ವಾರ್ಡ್ ನಂ.13 ರ ಪುಟಾಣಿ ನಗರದಲ್ಲಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿ, ವಾರ್ಡ್ ನಂಬರ್ 14 ರ ಮುನೇಶ್ವರ ದೇವಸ್ಥಾನ ಹತ್ತಿರ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿ, ವಾರ್ಡ್ ನಂ.23 ರ ಅಶೋಕ್ ಪುರದಲ್ಲಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿ ಹೀಗೆ ಒಟ್ಟು 243.78 ಲಕ್ಷ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕರು ಚಾಲನೆ ನೀಡಿದರು.
ನಗರಸಭಾ ಅಧ್ಯಕ್ಷರಾದ ಅನಿತಾ ಪೂವಯ್ಯ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಉಮೇಶ ಸುಬ್ರಮಣಿ, ಪೌರಾಯುಕ್ತರಾದ ವಿಜಯ, ನಗರಸಭೆ ಸದಸ್ಯರು, ಇತರರು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು