News Karnataka Kannada
Wednesday, May 08 2024
ಮಡಿಕೇರಿ

ಮಡಿಕೇರಿ: ಶಾಸಕರಿಂದ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣೆ

Madikeri: MLAs distribute tabs to students
Photo Credit : News Kannada

ಮಡಿಕೇರಿ: ಕಟ್ಟಡ ಮತ್ತು ಇತರೆ ನಿರ್ಮಾಣ ಕೆಲಸಗಳಲ್ಲಿ ತೊಡಗಿರುವ ಜಿಲ್ಲೆಯಲ್ಲಿ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಶಾಸಕರಾದ ಕೆ.ಜಿ.ಬೋಪಯ್ಯ ಮತ್ತು ಎಂ.ಪಿ.ಅಪ್ಪಚ್ಚುರಂಜನ್ ಅವರು ಶುಕ್ರವಾರ ಟ್ಯಾಬ್ ವಿತರಿಸಿದರು.

ಶಾಸಕರಾದ ಕೆ.ಜಿ.ಬೋಪಯ್ಯ ಅವರು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದ ಬಳಿ ಇರುವ ಶಾಸಕರ ಕಚೇರಿಯಲ್ಲಿ ಹಾಗೂ ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು ಜಿಲ್ಲಾ ಪಂಚಾಯತ್‍ನ ಶಾಸಕರ ಕಚೇರಿ ಆವರಣದಲ್ಲಿ ವಿತರಿಸಿದರು. ಮಡಿಕೇರಿ ತಾಲ್ಲೂಕಿನ ವಿದ್ಯಾರ್ಥಿಗಳಿಗೆ ಒಟ್ಟು 50 ಟ್ಯಾಬ್‍ಗಳನ್ನು ಶಾಸಕದ್ವಯರು ವಿತರಿಸಿದರು.

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಬಡ ಕುಟುಂಬದ ಮಕ್ಕಳಿಗೆ ಟ್ಯಾಬ್‍ನ್ನು ವಿತರಿಸಲಾಗುತ್ತಿದ್ದು, ಈ ಸೌಲಭ್ಯವನ್ನು ಪಡೆದುಕೊಂಡು ಉನ್ನತ ಶಿಕ್ಷಣ ಪಡೆಯುವಂತೆ ಸಲಹೆ ಮಾಡಿದರು. ತಾಲ್ಲೂಕು ಕಾರ್ಮಿಕ ಅಧಿಕಾರಿ ಯತ್ನಟ್ಟಿ, ಇತರರು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು