Categories: ಮಡಿಕೇರಿ

ಮಡಿಕೇರಿ: ಕೊಡಗು ಗೌಡ ವಿದ್ಯಾ ಸಂಘದಿಂದ ಪ್ರತಿಭಾ ಪುರಸ್ಕಾರ ಮತ್ತು ವಿವಿಧ ಸ್ಪರ್ಧೆಗಳು

ಮಡಿಕೇರಿ, ಸೆ.28: ಪ್ರತಿ ವರ್ಷದಂತೆ ಈ ಬಾರಿಯು ಕೊಡಗು ಗೌಡ ವಿದ್ಯಾ ಸಂಘದ ವತಿಯಿಂದ ಗೌಡ ಜನಾಂಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ನೀಡಲಾಗುತ್ತಿದ್ದು, ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಹೊಸೂರು ರಮೇಶ್ ಜೋಯಪ್ಪ ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಎಸ್‌ಎಸ್‌ಎಲ್‌ಸಿಯಲ್ಲಿ ಗ್ರಾಮೀಣ ವಿಭಾಗದಲ್ಲಿ ಶೇ.85 ಮೇಲ್ಪಟ್ಟು ಹಾಗೂ ನಗರ ವಿಭಾಗ ಶೇ.90 ಮೇಲ್ಪಟ್ಟು ಅಂಕ ಪಡೆದ ವಿದ್ಯಾರ್ಥಿಗಳಿಗೆ, ಪಿಯುಸಿ ಮತ್ತು ಪದವಿ ತರಗತಿಯಲ್ಲಿ ಅತಿ ಹೆಚ್ಚು ಅಂಕ ಪಡೆದು ಉತ್ತೀರ್ಣರಾಗಿರುವ ಮತ್ತು ಸಿಇಟಿ ಯಲ್ಲಿ 1000 ರ‍್ಯಾಂಕ್ ಒಳಗೆ ಮತ್ತು ಎನ್‌ಇಇಟಿ ಯಲ್ಲಿ ರಾಷ್ಟ್ರಮಟ್ಟದಲ್ಲಿ 5000 ರ‍್ಯಾಂಕ್ ಒಳಗೆ ಪಡೆದುಕೊಂಡಿರುವ ಗೌಡ ಜನಾಂಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ “ಪ್ರತಿಭಾ ಪುರಸ್ಕಾರ” ನೀಡಲಾಗುತ್ತಿದ್ದು, ಆಸಕ್ತರು 2023 ಜ.15 ರೊಳಗೆ ಅಂಕಪಟ್ಟಿಯ ಪ್ರತಿಯೊಂದಿಗೆ ಅರ್ಜಿಯನ್ನು ಸಂಘದ ಕಚೇರಿಗೆ ತಲುಪಿಸುವಂತೆ ಮನವಿ ಮಾಡಿದ್ದಾರೆ.

ಇದರೊಂದಿಗೆ ವೈದ್ಯಕೀಯ, ಇಂಜಿಯರಿಂಗ್, ಸ್ನಾತಕೋತ್ತರ ಪದವಿಯಲ್ಲಿ ರ‍್ಯಾಂಕ್ ಪಡೆದ ಮತ್ತು ಕ್ರೀಡೆ, ಕಲೆ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಪ್ರದರ್ಶನ ತೋರುತ್ತಿರುವ ಜನಾಂಗದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಸನ್ಮಾನಿಸಲಾಗುವುದು. ಆಸಕ್ತರು ಜ.15 ರೊಳಗೆ ಅರ್ಜಿಯನ್ನು ಸಂಘದ ಕಚೇರಿಗೆ ತಲುಪಿಸಬೇಕು.

75ನೇ ಸ್ವಾತಂತ್ರೋತ್ಸವದ ಪ್ರಯುಕ್ತ ಗೌಡ ಜನಾಂಗದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಅ.23 ರಂದು ಬೆಳಗ್ಗೆ 10 ಗಂಟೆಗೆ ಮಡಿಕೇರಿ ಗೌಡ ವಿದ್ಯಾಸಂಘದ ಸಭಾಂಗಣದಲ್ಲಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.

ಎಲ್‌ಕೆಜಿ ಯಿಂದ 1ನೇ ತರಗತಿ ಮಕ್ಕಳಿಗೆ ಸ್ವಾತಂತ್ರ ಹೋರಾಟಗಾರರ ಬಗ್ಗೆ ಛದ್ಮವೇಷ ಸ್ಪರ್ಧೆ, 2 ರಿಂದ 4ನೇ ತರಗತಿವರೆಗಿನ ಮಕ್ಕಳಿಗೆ 75ನೇ ಸ್ವಾತಂತ್ರೋತ್ಸವದ ಬಗ್ಗೆ ಚಿತ್ರಕಲೆ ಸ್ಪರ್ಧೆ, 5 ರಿಂದ 7ನೇ ತರಗತಿ ಮಕ್ಕಳಿಗೆ ಸಾಮಾನ್ಯ ಜ್ಞಾನ ಸ್ಪರ್ಧೆ, 8 ರಿಂದ 10ನೇ ತರಗತಿ ಮಕ್ಕಳಿಗೆ 75ನೇ ಸ್ವಾತಂತ್ರೋತ್ಸವದ ಬಗ್ಗೆ ಭಾಷಣ ಸ್ಪರ್ಧೆ, ಪದವಿ ಪೂರ್ವ ಮತ್ತು ಪದವಿ ವಿದ್ಯಾರ್ಥಿಗಳಿಗೆ ದೇಶಭಕ್ತಿ ಗೀತೆ ಸ್ಪರ್ಧೆ, ಸ್ಪರ್ಧಾಳುಗಳ ಪೋಷಕರಿಗೆ ದೇಶ ಭಕ್ತಿ ಗೀತೆ ಸ್ಪರ್ಧೆ ನಡೆಯಲಿದೆ.

ಆಸಕ್ತರು ಅ.23 ರಂದು ಬೆಳಗ್ಗೆ 9.30 ಗಂಟೆಯೊಳಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಹೊಸೂರು ರಮೇಶ್ ಜೋಯಪ್ಪ ತಿಳಿಸಿದ್ದಾರೆ.

ಜಿಲ್ಲೆಯ ವಿವಿಧೆಡೆಗಳಿಂದ ಸ್ಪರ್ಧೆಗಾಗಿ ಆಗಮಿಸುವ ವಿದ್ಯಾರ್ಥಿಗಳಿಗೆ ಪ್ರಯಾಣ ಭತ್ಯೆ ಮತ್ತು ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ.

Gayathri SG

Recent Posts

ಕಾಶ್ಮೀರ ವಾಪಸ್ ಪಡೆದೇ ಪಡೆಯುತ್ತೇವೆ: ಗೃಹ ಸಚಿವ ಅಮಿತ್ ಶಾ

ಪಾಕಿಸ್ತಾನದ ಬಳಿ ಪರಮಾಣು ಬಾಂಬ್​ ಇದೆ ಹಾಗಾಗಿ ನಾವು ಅವರನ್ನು ಗೌರವಿಸಬೇಕಾಗುತ್ತದೆ ಎಂಬ ಕಾಂಗ್ರೆಸ್​ ನಾಯಕ ಮಣಿಶಂಕರ್​ ಐಯ್ಯರ್​ ಹೇಳಿಕೆಗೆ…

17 mins ago

ಖಾಸಗಿ ಶಾಲೆಗಳಲ್ಲಿ 30% ವರೆಗೆ ಶುಲ್ಕ ಏರಿಕೆ : ಕಂಗಾಲಾದ ಪೋಷಕರು

2024-25ನೇ ಸಾಲಿಗೆ ಶಾಲಾ ಪ್ರವೇಶ ಪ್ರಕ್ರಿಯೆ ನಡೆಸುತ್ತಿರುವ ಖಾಸಗಿ ಶಾಲೆಗಳು ಶೇ.20ರಿಂದ 30ರವರೆಗೆ ಶುಲ್ಕ ಹೆಚ್ಚಿಸುವ ಮೂಲಕ ಸುಲಿಗೆ ಪದ್ಧತಿ…

44 mins ago

ಯುವಕನೊಬ್ಬ ಎಂಟು ಬಾರಿ ಮತ ಚಲಾಯಿಸಿದ ವೀಡಿಯೊ ವೈರಲ್

ಯುವಕನೋರ್ವ ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತಹಾಕಿರುವ ಘಟನೆ ಉತ್ತರ ಪ್ರದೇಶದ ಇಟಾ ಜಿಲ್ಲೆಯ ನಯಾ ಗಾಂವ್ ಪಟ್ಟಣದಲ್ಲಿ ನಡೆದಿದೆ.…

1 hour ago

ʻಮೋದಿಗೆ ಯಾರೂ ವೋಟ್ ಹಾಕಬೇಡಿ’ ಎಂದಿದ್ದ ಶಿಕ್ಷಕ ಅರೆಸ್ಟ್‌

ಯಾರು ಮೋದಿಗೆ ವೋಟ್​ ಹಾಕಬೇಡಿ ಎಂದು ಶಾಲಾ ಮಕ್ಕಳಿಗೆ ಹೇಳಿದ್ದ ಸರ್ಕಾರಿ ಶಾಲೆಯ ಶಿಕ್ಷಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ…

1 hour ago

ರೇವ್‌ ಪಾರ್ಟಿ ಮೇಲೆ ಪೊಲೀಸ್‌ ದಾಳಿ : ತೆಲುಗು ನಟಿ, ಮಾಡೆಲ್​ ಸಿಸಿಬಿ ವಶಕ್ಕೆ

ಸಿಸಿಬಿ ಪೊಲೀಸರು ರಾಜಧಾನಿಯಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯೊಂದರ ಮೇಲೆ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಆಂಧ್ರಪ್ರದೇಶದಿಂದ ತೆಲುಗು ನಟಿಯರನ್ನು ಕರೆಸಿಕೊಂಡು…

1 hour ago

ಜೂನಿಯರ್ ಎನ್​ಟಿಆರ್ ಜನ್ಮದಿನ : ಸ್ಟಾರ್ ಹೀರೋಗೆ ಕನ್ನಡದ ಬಗ್ಗೆ ವಿಶೇಷ ಪ್ರೀತಿ

ಜೂನಿಯರ್ ಎನ್​ಟಿಆರ್ ಅವರಿಗೆ ಇಂದು ಹುಟ್ಟುಹಬ್ಬ ಸಂಭ್ರಮ.ಈ ವಿಶೇಷ ದಿನದಂದು ಸೆಲೆಬ್ರಿಟಿಗಳು, ಕುಟುಂಬದವರು, ಅಭಿಮಾನಿಗಳು ನಟನಿಗೆ ಶುಭಾಶಯ ಬರುತ್ತಿದೆ. ಜೂನಿಯರ್…

2 hours ago