News Karnataka Kannada
Sunday, April 28 2024
ಮಡಿಕೇರಿ

ಮಡಿಕೇರಿ: ಫೆ.11 ರಂದು ‘ರಾಷ್ರ್ಟೀಯ ಲೋಕ್ ಅದಾಲತ್’

Rashtriya Lok Adalat
Photo Credit : By Author

ಮಡಿಕೇರಿ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಫೆಬ್ರವರಿ, 11 ರಂದು ಕೊಡಗು ಜಿಲ್ಲೆಯ ವಿವಿಧ ಹಂತದ ಎಲ್ಲಾ ನ್ಯಾಯಾಲಯಗಳಲ್ಲಿ ‘ರಾಷ್ರ್ಟೀಯ ಮೆಗಾ ಲೋಕ್ ಅದಾಲತ್’ ನಡೆಯಲಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಕೆ.ಬಿ.ಪ್ರಸಾದ್ ಅವರು ತಿಳಿಸಿದ್ದಾರೆ.

ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಾದ ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು, ಖಾಯಂ ಜನತಾ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು, ಚೆಕ್ಕು ಅಮಾನ್ಯದ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಕಾರ್ಮಿಕ ವಿವಾದಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಭೂಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು, ಸಾರ್ವಜನಿಕ ಉಪಯುಕ್ತತೆ ಸೇವೆಗಳ ಸಂಬಂಧಿಸಿದ ಪ್ರಕರಣಗಳು, ರಾಜೀಯಾಗಬಲ್ಲ ಸಿವಿಲ್ ಮತ್ತು ಇತರೆ ಪ್ರಕರಣಗಳು, ವೈವಾಹಿಕ ಕುಟುಂಬ ನ್ಯಾಯಾಲಯ ಪ್ರಕರಣಗಳ(ವಿಚ್ಛೇದನ ಹೊರತುಪಡಿಸಿ) ನ್ನು ರಾಜೀ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದು.

ನ್ಯಾಯಾಲಯದಲ್ಲಿ ಉಭಯ ಪಕ್ಷಕರಾರರು ರಾಜೀ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ಮಾಡಲಾಗುವುದು. ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣವು ತೀರ್ಮಾನವಾಗುವುದರಿಂದ ಬಾಂಧವ್ಯವು ಉಳಿದು ವಿವಾದವು ತೀರ್ಮಾನವಾಗುತ್ತದೆ. ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನು ಸಹ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ರಾಜೀ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಪೂರ್ಣವಾಗಿ ಮರು ಪಾವತಿಸಲಾಗುವುದು.

ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜೀ ಮಾಡಿಕೊಳ್ಳಬಹುದು. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದೊಂದು ವಿಶೇಷ ಅವಕಾಶವಾಗಿದೆ. ಪ್ರತಿದಿನ ರಾಜ್ಯದ ಎಲ್ಲಾ ನ್ಯಾಯಾಲಯಗಳಲ್ಲಿ ಹಾಗೂ ಖಾಯಂ ಜನತಾ ನ್ಯಾಯಾಲಯಗಳಲ್ಲಿ ಲೋಕ್ ಅದಾಲತ್‍ಗೆ ಸಂಬಂಧಿಸಿದಂತೆ ಪೂರ್ವಭಾವಿ ಬೈಠಕ್‍ಗಳು ಭೌತಿಕ ಹಾಗೂ ವೀಡಿಯೋ ಕಾನ್ಪೆರೆನ್ಸ್ ಮೂಲಕ ಗೌರವಾನ್ವಿತ ಉಚ್ಛ ನ್ಯಾಯಾಲಯ ಎಸ್‍ಒಪಿ ನಿಯಮಗಳಂತೆ ನಡೆಯುತ್ತದೆ.

ಹೆಚ್ಚಿನ ಮಾಹಿತಿಗೆ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಟ್ರೋಲ್ ಫ್ರೀ ಸಂಖ್ಯೆ 180042590900 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಕೆ.ಬಿ.ಪ್ರಸಾದ್ ಅವರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು