Categories: ಮಡಿಕೇರಿ

ಮಡಿಕೇರಿ: ಗಣರಾಜ್ಯೋತ್ಸವ, ಅರ್ಥಪೂರ್ಣ ಆಚರಣೆಗೆ ತೀರ್ಮಾನ

ಮಡಿಕೇರಿ: ಇದೇ ಜನವರಿ 26 ರಂದು ನಡೆಯುವ ಗಣರಾಜ್ಯೋತ್ಸವ ದಿನಾಚರಣೆಯನ್ನು ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಅರ್ಥಪೂರ್ಣವಾಗಿ ಆಯೋಜಿಸಲು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಬಿ.ಸಿ.ಸತೀಶ ಅವರು ಗಣರಾಜ್ಯೋತ್ಸವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಈಗಾಗಲೇ ಸ್ವಾಗತ, ಧ್ವಜಾರೋಹಣ ಮತ್ತು ವೇದಿಕೆ, ಸಾಂಸ್ಕøತಿಕ, ಕವಾಯತು, ಉಪಾಹಾರ, ಭಾಷಣ, ಸ್ವಚ್ಛತೆ ಮತ್ತು ಕುಡಿಯುವ ನೀರಿನ ಪೂರೈಕೆ ಹೀಗೆ ವಿವಿಧ ಸಮಿತಿಗಳನ್ನು ರಚಿಸಿದ್ದು, ತಮಗೆ ವಹಿಸಿರುವ ಜವಾಬ್ದಾರಿಯನ್ನು ವ್ಯವಸ್ಥಿತವಾಗಿ ನಿರ್ವಹಿಸುವಂತೆ ಸೂಚಿಸಿದರು.

ಸಾಂಸ್ಕøತಿಕ ಕಾರ್ಯಕ್ರಮ ಸಂಬಂಧಿಸಿದಂತೆ ಐದು ತಂಡಗಳಿಗೆ ಅವಕಾಶ ಮಾಡುವಂತೆ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು. ಗಣರಾಜ್ಯೋತ್ಸವ ದಿನದಂದು ವಿದ್ಯಾರ್ಥಿಗಳಿಗೆ ಉಪಾಹಾರ ಕಲ್ಪಿಸುವಂತೆ ಸೂಚಿಸಿದರು.

ಗಣರಾಜ್ಯೋತ್ಸವ ದಿನಾಚರಣೆ ಹಿನ್ನೆಲೆ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಪ್ರತಿಮೆ, ರಾಷ್ಟ್ರಕವಿ ಕುವೆಂಪು, ಫೀಲ್ಡ್ ಮಾರ್ಷಲ್ ಕಾರ್ಯಪ್ಪ, ಜನರಲ್ ತಿಮ್ಮಯ್ಯ, ಗುಡ್ಡೆಮನೆ ಅಪ್ಪಯ್ಯಗೌಡ, ಮಂಗೇರಿರ ಮುತ್ತಣ್ಣ, ಸ್ಕ್ವಾಡರ್ನ್ ಲೀಡರ್ ಅಜ್ಜಮಾಡ ದೇವಯ್ಯ ಅವರ ಪ್ರತಿಮೆಗಳನ್ನು ಶುಚಿಗೊಳಿಸಿ, ದೀಪಾಲಂಕಾರ ಮಾಡುವಂತೆ ನಗರಸಭಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ತಿಳಿಸಿದರು.

ಸರ್ಕಾರದ ಕಾರ್ಯಕ್ರಮಗಳ ಅಭಿವೃದ್ಧಿ ಸಂಬಂಧಿಸಿದಂತೆ ಸಚಿವರ ಭಾಷಣದಲ್ಲಿ ಬೆಳಕು ಚೆಲ್ಲುವಂತಾಗಬೇಕು. ಆ ನಿಟ್ಟಿನಲ್ಲಿ ಭಾಷಣ ಸಿದ್ಧಪಡಿಸುವಂತೆ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು.

ಕ್ರೀಡಾಂಗಣ ಸ್ವಚ್ಚತೆ ಹಾಗೂ ಕುಡಿಯುವ ನೀರು ಪೂರೈಕೆ ಸಂಬಂಧಿಸಿದಂತೆ, ಕ್ರೀಡಾಂಗಣವನ್ನು ಒಂದು ವಾರಕ್ಕೆ ಮೊದಲೇ ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕು. ಪೂರ್ವಾಭ್ಯಾಸ ಹಾಗೂ ಗಣರಾಜ್ಯೋತ್ಸವ ದಿನದಂದು ಕುಡಿಯುವ ನೀರು ಒದಗಿಸುವಂತೆ ನಗರಸಭಾ ಅಧಿಕಾರಿಗಳಿಗೆ ಸೂಚಿಸಿದರು.

ಗಣರಾಜ್ಯೋತ್ಸವ ದಿನದಂದು ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಹಾಜರಾಗಬೇಕು ಎಂದು ಜಿಲ್ಲಾಧಿಕಾರಿ ಅವರು ಸೂಚಿಸಿದರು. ಹೆಚ್ಚುವರಿ ಜಿಲಾಧಿಕಾರಿ ಡಾ.ನಂಜುಂಡೇಗೌಡ ಅವರು ಈಗಾಗಲೇ ಗಣರಾಜ್ಯೋತ್ಸವ ದಿನಾಚರಣೆ ಸಂಬಂಧ ಸಮಿತಿಗಳನ್ನು ರಚಿಸಲಾಗಿದ್ದು, ಸಮಿತಿಗಳು ತಮಗೆ ವಹಿಸಿರುವ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ತಿಳಿಸಿದರು.

ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಸದಾಶಿವ ಪಲ್ಲೇದ್ ಅವರು ಹೆಚ್ಚಿನ ಸಾಂಸ್ಕøತಿಕ ಕಾರ್ಯಕ್ರಮಕ್ಕೆ ಅವಕಾಶ ಮಾಡಬೇಕು ಎಂದು ಕೋರಿದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಉಪ ನಿರ್ದೇಶಕರಾದ ಸಿ.ರಂಗಧಾಮಯ್ಯ, ಕಾರ್ಮಿಕ ಇಲಾಖಾ ಅಧಿಕಾರಿ ಅನಿಲ್ ಬಗಟಿ, ಇತರರು ಹಲವು ವಿಷಯ ಕುರಿತು ಮಾಹಿತಿ ನೀಡಿದರು.

ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ಮುನೀರ್ ಅಹಮ್ಮದ್ ಅವರು ರಾಷ್ಟ್ರೀಯ ಹಬ್ಬಗಳಂದು ಸಂಜೆ ಸಾಂಸ್ಕøತಿಕ ಕಾರ್ಯಕ್ರಮ ಆಯೋಜಿಸುವಂತಾಗಬೇಕು ಎಂದು ಕೋರಿದರು.

ಸ್ಕೌಟ್ಸ್ ಮತ್ತು ಗೈಡ್ಸ್, ಜಿಲ್ಲಾ ಸಂಘಟಕರಾದ ದಮಯಂತಿ ಅವರು ಗಣರಾಜ್ಯೋತ್ಸವ ದಿನಾಚರಣೆ ಸಂಬಂಧ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಪೂರ್ವ ತಯಾರಿ ಮಾಡಿಕೊಳ್ಳುವ ಸಂದರ್ಭದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದು ಕೋರಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಯಾಪ್ಟನ್ ಎಂ.ಎ.ಅಯ್ಯಪ್ಪ, ಜಿ.ಪಂ.ಸಿಇಒ ಡಾ.ಎಸ್.ಆಕಾಶ್, ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ಹಲವು ಇಲಾಖೆಗಳ ಅಧಿಕಾರಿಗಳು ಇದ್ದರು.

Sneha Gowda

Recent Posts

ವಾಸವಿ ಯುವಜನ ಸಂಘದ ವತಿಯಿಂದ ಪ್ರಸಾದ ವಿತರಣೆ

ವಾಸವಿ ಜಯಂತಿ ಪ್ರಯುಕ್ತ ನಗರದ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮಜ್ಜಿಗೆ, ಕೋಸಂಬರಿ ವಿತರಣೆ ಮಾಡಲಾಯಿತೆಂದು ವಾಸವಿ…

32 seconds ago

ನಟಿ ರಶ್ಮಿಕಾ ಟ್ವೀಟ್​ಗೆ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ವಿವಾದಾದ್ಮಕ ಹೇಳಿಕೆ

ನಟಿ ರಶ್ಮಿಕಾ ಮಂದಣ್ಣ ಸೋಶಿಯಲ್ ಮೀಡಿಯಾದಲ್ಲಿ ತಮ್ಮದೇ ಅದ ದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ವಿವಿಧ ಭಾಷೆಗಳಲ್ಲಿ ನಟಿಸಿ ಸೈ…

8 mins ago

ಮೊಬೈಲ್ ವಿಚಾರಕ್ಕೆ ಹಲ್ಲೆ: ಆರೋಪಿಗಳು ವಶಕ್ಕೆ

ಮೊಬೈಲ್ ವಿಚಾರಕ್ಕೆ ಸ್ನೇಹಿತರ ನಡುವೆ ಗಲಾಟೆಯಾಗಿ ಮಚ್ಚಿನಿಂದ ಹಲ್ಲೆ ನಡೆಸಿರುವ ಘಟನೆ ಬಾಪೂಜಿನಗರದ ಮಧುರ ಬಾರ್ ಬಳಿ ನಡೆದಿದೆ.

12 mins ago

ಅಂಜಲಿ ಹತ್ಯೆ ಪ್ರಕರಣ: ನನ್ನ ಮಗನಿಗೆ ಕೋರ್ಟ್ ಯಾವ ಶಿಕ್ಷೆ ಬೇಕಾದರು ಕೊಡಲಿ ಎಂದ ಆರೋಪಿ ಗಿರೀಶ್ ತಾಯಿ

ನನ್ನ ಮಗ ಗಿರೀಶ್ ತಪ್ಪು ಮಾಡಿದ್ದಾನೆ. ಅವನಿಗೆ ಕೋರ್ಟ್ ಯಾವ ಶಿಕ್ಷೆ ಬೇಕಾದರು ಕೊಡಲಿ. ಅಂಜಲಿ ಮತ್ತು ಗಿರೀಶ್ ಪರಸ್ಪರ…

31 mins ago

ಸ್ವಾತಿ ಹಲ್ಲೆ ಪ್ರಕರಣ : ಹೊಸ CCTV ಫೂಟೇಜ್ ಬಿಡುಗಡೆ ಮಾಡಿದ ಎಎಪಿ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರು ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ…

32 mins ago

ಮರಕ್ಕೆ ಕಾರು ಡಿಕ್ಕಿ: ನಾಲ್ವರು ಕಾನೂನು ವಿದ್ಯಾರ್ಥಿಗಳು ಮೃತ್ಯು

ಅತಿ ವೇಗವಾಗಿ ಬಂದ ಕಾರೊಂದು ಭಯಾನಕವಾಗಿ ಇನ್ನೊಂದು ಕಾರಿಗೆ ಡಿಕ್ಕಿಯಾಗಿ ಮತ್ತೆ ಮರಕ್ಕೆ ರಭಸದಿಂದ ಗುದ್ದಿದ್ದರಿಂದ ನಾಲ್ವರು ಕಾನೂನು ವಿದ್ಯಾರ್ಥಿಗಳು…

53 mins ago