News Karnataka Kannada
Thursday, May 09 2024
ಮಡಿಕೇರಿ

ಮಡಿಕೇರಿ: ಸೆ.7 ರಂದು ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ.ದೇವಯ್ಯ ಪುಣ್ಯಸ್ಮರಣೆ

Madikeri: Squadron Leader Ajjamada B. Devaiah's death anniversary to be observed on Sept. 7
Photo Credit : By Author

ಮಡಿಕೇರಿ, ಸೆ.2 : 1965ರ ಭಾರತ-ಪಾಕಿಸ್ತಾನ ಯುದ್ಧದಲ್ಲಿ ವೀರ ಮರಣ ಹೊಂದಿದ ಮಹಾವೀರ ಚಕ್ರ (ಮರಣೋತ್ತರ) ಪುರಸ್ಕೃತ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ.ದೇವಯ್ಯ ಅವರ ಪುಣ್ಯಸ್ಮರಣೆ ಸೆ.7 ರಂದು ಮಡಿಕೇರಿಯಲ್ಲಿ ನಡೆಯಲಿದೆ ಎಂದು ಕೊಡವ ಮಕ್ಕಡ ಕೂಟದ ಕಾರ್ಯದರ್ಶಿ ಪುತ್ತರಿರ ಕರುಣ್ ಕಾಳಯ್ಯ ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೊಡವ ಮಕ್ಕಡ ಕೂಟ ಹಾಗೂ ಅಜ್ಜಮಾಡ ಕುಟುಂಬಸ್ಥರ ಸಹಯೋಗದಲ್ಲಿ ಬೆಳಗ್ಗೆ 11 ಗಂಟೆಗೆ ಸ್ವಾ.ಲೀ ಅಜ್ಜಮಾಡ ಬಿ.ದೇವಯ್ಯ ವೃತ್ತದಲ್ಲಿ ಪುಷ್ಪಾರ್ಚನೆ ಮಾಡುವ ಮೂಲಕ ಪುಣ್ಯಸ್ಮರಣೆಯನ್ನು ಆಚರಿಸಲಾಗುವುದು ಎಂದರು.

ಏರ್ ಮಾರ್ಷಲ್ ಕೊಡಂದೇರ ಕಾರ್ಯಪ್ಪ, ಮಡಿಕೇರಿ ಕ್ಷೇತ್ರದ ಶಾಸಕ ಮಂಡೆಪಂಡ ಅಪ್ಪಚ್ಚುರಂಜನ್, ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ, ವಿಧಾನ ಪರಿಷತ್ ಸದಸ್ಯ ಮಂಡೆಪಂಡ ಸುಜಾ ಕುಶಾಲಪ್ಪ, ಮಾಜಿ ಸದಸ್ಯೆ ಶಾಂತೆಯAಡ ವೀಣಾ ಅಚ್ಚಯ್ಯ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್, ಪೊಲೀಸ್ ವರಿಷ್ಠಾಧಿಕಾರಿ ಮಲ್ಚೀರ ಅಯ್ಯಪ್ಪ, ನಗರಸಭಾ ಅಧ್ಯಕ್ಷೆ ನೆರವಂಡ ಅನಿತಾ ಪೂವಯ್ಯ, ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಹಾಗೂ ಜನರಲ್ ತಿಮ್ಮಯ್ಯ ಫೋರಂನ ಅಧ್ಯಕ್ಷ ಕರ್ನಲ್ ಕಟ್ರತಂಡ ಸುಬ್ಬಯ್ಯ, ಸಂಚಾಲಕ ಮೇಜರ್ ಬಿದ್ದಂಡ ನಂಜಪ್ಪ, ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಕೊಡಗು ಶಾಖೆಯ ಅಧ್ಯಕ್ಷ ಕೊಟ್ಟುಕತ್ತೀರ ಪಿ.ಸೋಮಣ್ಣ, ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಮಂಡುವಂಡ ಮುತ್ತಪ್ಪ, ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಅಜ್ಜಮಾಡ ಕುಟುಂಬದ ಅಧ್ಯಕ್ಷ ಲವ ಕುಶಾಲಪ್ಪ, ಉಪಾಧ್ಯಕ್ಷ ಅಜ್ಜಮಾಡ ಕಟ್ಟಿಮಂದಯ್ಯ, ಕಾರ್ಯದರ್ಶಿ ಅಜ್ಜಮಾಡ ಜಿ.ಬೋಪಯ್ಯ, ಖಜಾಂಚಿ ಅಜ್ಜಮಾಡ ಟಿ.ಚಂಗಪ್ಪ, ಅಜ್ಜಮಾಡ ಯು.ದೀಲಿಪ್ ಬೋಪಣ್ಣ, ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಹಾಗೂ ಹಲವು ನಿವೃತ್ತ ಯೋಧರು, ಅಜ್ಜಮಾಡ ಕುಟುಂಬಸ್ಥರು, ಕೊಡವ ಮಕ್ಕಡ ಕೂಟದ ಸದಸ್ಯರು ಭಾಗವಹಿಸಲಿದ್ದಾರೆ ಎಂದು ಕರುಣ್ ಕಾಳಯ್ಯ ತಿಳಿಸಿದ್ದಾರೆ.

ಬಹುಮಾನ ವಿತರಣೆ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಕೊಡವ ಮಕ್ಕಡ ಕೂಟದ ವತಿಯಿಂದ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ “ಮಹಾ ವೀರಚಕ್ರ ಪುರಸ್ಕೃತ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ.ದೇವಯ್ಯ” ಎಂಬ ವಿಷಯದ ಕುರಿತು ಏರ್ಪಡಿಸಲಾದ ಪ್ರಬಂಧ ಸ್ಪರ್ಧೆ ವಿಜೇತರಿಗೆ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1620
Coovercolly Indresh

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು