News Karnataka Kannada
Tuesday, April 30 2024
ಮಡಿಕೇರಿ

ಮಡಿಕೇರಿ: ಮತ ಎಣಿಕೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ – ಡಾ.ಬಿ.ಸಿ.ಸತೀಶ

The district administration is all set for the counting of votes. Dr. B.C. Satheesh
Photo Credit : News Kannada

ಮಡಿಕೇರಿ: ವಿಧಾನಸಭಾ ಚುನಾವಣೆಯ ಮತ ಎಣಿಕೆಯು ಮೇ, 13 ರಂದು ನಡೆಯಲಿದ್ದು, ಮತ ಎಣಿಕೆ ಪ್ರಕ್ರಿಯೆಯನ್ನು ತಾಳ್ಮೆ ಮತ್ತು ಎಚ್ಚರಿಕೆಯಿಂದ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಬಿ.ಸಿ.ಸತೀಶ ತಿಳಿಸಿದ್ದಾರೆ.

ನಗರದ ಸಂತ ಜೋಸೆಫರ ಶಾಲೆಯಲ್ಲಿ ಮತ ಎಣಿಕೆ ಅಧಿಕಾರಿಗಳಿಗೆ ಗುರುವಾರ ಏರ್ಪಡಿಸಿದ್ದ ತರಬೇತಿ ಕಾರ್ಯಗಾರದಲ್ಲಿ ಅವರು ಮಾತನಾಡಿದರು.

ಮತ ಎಣಿಕೆ ಪ್ರಕ್ರಿಯೆಯು ಮೇ, 13 ರಂದು ಬೆಳಗ್ಗೆ 8 ಗಂಟೆಗೆ ಆರಂಭವಾಗಲಿದೆ. ಚುನಾವಣಾ ಆಯೋಗದ ನಿಯಮದ ಪ್ರಕಾರ ಮತ ಎಣಿಕೆ ಕೈಗೊಳ್ಳಬೇಕು. ಮತ ಎಣಿಕೆ ಸ್ಥಳಕ್ಕೆ ಮೊಬೈಲ್ ತರಬಾರದು. ಮತ ಎಣಿಕೆ ಕಾರ್ಯವು ಸರಳ ಪ್ರಕ್ರಿಯೆ ಆಗಿದ್ದು, ಯಾವುದೇ ರೀತಿಯ ಗೊಂದಲಕ್ಕೆ ಒಳಗಾಗದೆ ನಿಯಮಾನುಸಾರ ಕರ್ತವ್ಯ ನಿರ್ವಹಿಸಿ ಮತ ಎಣಿಕೆ ಕಾರ್ಯವನ್ನು ಯಶಸ್ಸುಗೊಳಿಸುವಂತೆ ಜಿಲ್ಲಾಧಿಕಾರಿ ಅವರು ಹೇಳಿದರು.

ಯಾವುದಾದರೂ ಸಮಸ್ಯೆಗಳು ಇದ್ದಲ್ಲಿ ಚುನಾವಣಾಧಿಕಾರಿ ಗಮನಕ್ಕೆ ತರಬೇಕು. ಮತ ಎಣಿಕೆ ಮೇಲ್ವಿಚಾರಕರು ಮತ್ತು ಮತ ಎಣಿಕೆ ಸಹಾಯಕರು ಕಾರ್ಯನಿರ್ವಹಿಸಲಿದ್ದು, ಜೊತೆಗೆ ಮೈಕ್ರೋ ವೀಕ್ಷಕರು ಇರಲಿದ್ದಾರೆ. ಎದುರಿಗೆ ವಿವಿಧ ಪಕ್ಷದ ಏಜೆಂಟರು ಇರುತ್ತಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಅವರು ವಿವರಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು