News Karnataka Kannada
Thursday, May 09 2024
ಮಡಿಕೇರಿ

ಮಡಿಕೇರಿ: ಸೆ.24 ರಿಂದ ಶ್ರೀ ಚೌಟಿಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ

The re-consecration anniversary of Sri Chowtimariamma Temple from Sept. 24
Photo Credit : By Author

ಮಡಿಕೇರಿ: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀಚೌಟಿಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನೆಯ 19ನೇ ವಾರ್ಷಿಕೋತ್ಸವವು ಸೆ.24 ರಿಂದ 26ರ ವರೆಗೆ ನಡೆಯಲಿದೆ.

ಸೆ.24 ರಂದು ಸಂಜೆ 6 ಗಂಟೆಗೆ ಗುರು ಗಣಪತಿ ಪೂಜೆ, ಪುಣ್ಯಾಹ, ಸಂಕಲ್ಪ, ದುರ್ಗಾ ಸಪ್ತಶತಿ ಪಾರಾಯಣ, ಮಹಾಪೂಜೆ, ದೀಪರಾಧನೆ ಹಾಗೂ ತೀರ್ಥಪ್ರಸಾದ ವಿನಿಯೋಗ ನಡೆಯಲಿದೆ.

ಸೆ.25 ರಂದು ಬೆಳಿಗ್ಗೆ 8 ಗಂಟೆಗೆ ಚಂಡಿಕಾ ಹೋಮ, ಮಧ್ಯಾಹ್ನ 12 ಗಂಟೆಗೆ ಪೂರ್ಣಾಹುತಿ ಹಾಗೂ ಮಹಾ ಮಂಗಳಾರತಿ ಜರುಗಲಿದ್ದು,ತೀರ್ಥಪ್ರಸಾದ ವಿನಿಯೋಗ ನೆರವೇರಲಿದೆ.  ಸಂಜೆ 6 ಗಂಟೆಯಿದ ವಾರ್ಷಿಕೋತ್ಸವ ಕಾರ್ಯಕ್ರಮಗಳು ಆರಂಭವಾಗಲಿದ್ದು, ಗುರು ಗಣಪತಿ ಹೋಮ, ಪುಣ್ಯಾಹ, ಸಂಕಲ್ಪ, ಕಳಶಸ್ಥಾಪನೆ, ದೀಪಾರಾಧನೆ, ಅಷ್ಠಾವಧಾನ ಸೇವೆ ನಂತರ ತೀರ್ಥಪ್ರಸಾದ ವಿನಿಯೋಗವಾಗಲಿದೆ.

ಸೆ.26 ರಂದು ಬೆಳಿಗ್ಗೆ ಗುರುಗಣಪತಿ ಪೂಜೆ, ಪುಣ್ಯಾಹ, ಗಣಪತಿ ಹೋಮ, ಕಲಾಹೋಮ, ತತ್ವಹೋಮ, ತತ್ವಶಾಂತಿ ಹೋಮ, ದುರ್ಗಾ ಹೋಮ, ತತ್ವಕಲಶಾಭಿಷೇಕ, ಮಹಾಪೂಜೆ, ತೀರ್ಥಪ್ರಸಾದ ವಿನಿಯೋಗ ನಡೆಯಲಿದೆ.

ಮಧ್ಯಾಹ್ನ12.30 ಗಂಟೆಗೆ ಅನ್ನದಾನ ನೆರವೇರಲಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ದೇವಾಲಯದ ಮ್ಯಾನೇಜಿಂಗ್ ಟ್ರಸ್ಟಿ ಮತ್ತು ಆಡಳಿತ ಮಂಡಳಿ ಕೋರಿದೆ.

ಸೆ.26 ರಿಂದ ಅ.5ರವೆಗೆ ಕರಗ ನಗರ ಪ್ರದಕ್ಷಿಣೆ ನಡೆಯಲಿದ್ದು, ಅ.4 ರಂದು ಆಯುಧ ಪೂಜೆಯ ಪ್ರಯುಕ್ತ ವಾಹನ ಪೂಜೆ ನಡೆಯಲಿದೆ. ಅಲ್ಲದೆ ನವರಾತ್ರಿ ಪ್ರಯುಕ್ತ ನಿತ್ಯ ಅಭಿಷೇಕ, ಅಲಂಕಾರ ಪೂಜೆ, ಮಹಾಪೂಜೆ ನೆರವೇರಲಿದೆ ಎಂದು ಮಾಹಿತಿ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1620
Coovercolly Indresh

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು