News Karnataka Kannada
Monday, April 29 2024
ಮಡಿಕೇರಿ

ಮಡಿಕೇರಿ: ನೂತನ ಜಿಲ್ಲಾಧಿಕಾರಿಯಾಗಿ ವೆಂಕಟ್ ರಾಜಾ ಅಧಿಕಾರ ಸ್ವೀಕಾರ

Madikeri: Venkat Raja takes charge as new Deputy Commissioner
Photo Credit : By Author

ಮಡಿಕೇರಿ, ಜೂ.21: ಕೊಡಗು ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ವೆಂಕಟ್ ರಾಜಾ ಅವರು ಬುಧವಾರ ಅಧಿಕಾರ ವಹಿಸಿಕೊಂಡಿದ್ದಾರೆ.

ಕಳೆದ ಒಂದು ವರ್ಷ ಎಂಟು ತಿಂಗಳ ಕಾಲ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಡಾ.ಬಿ.ಸಿ.ಸತೀಶ ಅವರಿಂದ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.

ಬಳಿಕ ಮಾತನಾಡಿದ ನೂತನ ಜಿಲ್ಲಾಧಿಕಾರಿ ಡಾ.ವೆಂಕಟ್ ರಾಜಾ ಅವರು ಈ ಹಿಂದೆ ಕೋಲಾರ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ, ಕೊಪ್ಪಳ ಜಿಲ್ಲೆಯಲ್ಲಿ ಜಿ.ಪಂ.ಸಿಇಒ ಆಗಿ, ಬೀದರ್ ನಲ್ಲಿ ಉಪ ವಿಭಾಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಲಾಗಿದೆ ಎಂದು ಅವರು ತಿಳಿಸಿದರು.

ಹಾಗೆಯೇ ಬೆಂಗಳೂರಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಜೊತೆಗೆ ಕೋವಿಡ್ ಸಂದರ್ಭದಲ್ಲಿ ನೋಡಲ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದೇನೆ ಎಂದು ವೆಂಕಟ್ ರಾಜಾ ಅವರು ಮಾಹಿತಿ ನೀಡಿದರು.

ಪಾರದರ್ಶಕ ಮತ್ತು ಜನಸ್ನೇಹಿಯಾಗಿ ಆಡಳಿತ ನೀಡಲಾಗುವುದು. ಜಿಲ್ಲೆಯ ಅಭಿವೃದ್ಧಿಗೆ ಪಣ ತೊಡಲಾಗುವುದು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1620
Coovercolly Indresh

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು