News Karnataka Kannada
Monday, April 29 2024
ಮಡಿಕೇರಿ

ಮಡಿಕೇರಿ| ಭೂಕಂಪನದ ಪ್ರದೇಶಗಳಿಗೆ ಡಿಸಿ ಭೇಟಿ ನೀಡಿ ಧೈರ್ಯ ತುಂಬಲಿ: ವಿರಾಜಪೇಟೆ ಕಾಂಗ್ರೆಸ್ ಒತ್ತಾಯ

Virajpet Congress urges DC to visit earthquake-hit areas and instil courage
Photo Credit :

ಮಡಿಕೇರಿ : ಸರಣಿ ಭೂಕಂಪನದಿಂದ ಆತಂಕಕ್ಕೊಳಗಾಗಿರುವ ಚೆಂಬು ಗ್ರಾಮದಲ್ಲಿ ಆರಂಭಿಸಲಾಗಿರುವ ಭೂಕಂಪನ ಮಾಪನ ಕೇಂದ್ರದಲ್ಲಿ ಸಿಬ್ಬಂದಿಗಳೇ ಇರುವುದಿಲ್ಲವೆಂದು ಆರೋಪಿಸಿರುವ ವಿರಾಜಪೇಟೆ ಕಾಂಗ್ರೆಸ್ ವಕ್ತಾರ ಪಿ.ಎಲ್.ಸುರೇಶ್, ಚೆಂಬು, ಪೆರಾಜೆ, ಸಂಪಾಜೆ, ಕರಿಕೆ ಮತ್ತಿತರ ಗ್ರಾಮಗಳಿಗೆ ಜಿಲ್ಲಾಧಿಕಾರಿಗಳು ಭೇಟಿ ನೀಡಬೇಕೆಂದು ಒತ್ತಾಯಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಈಗಾಗಲೇ ಚೆಂಬು ಪ್ರೌಢಶಾಲೆಯ ಕೊಠಡಿಯಲ್ಲಿ ಭೂಕಂಪನ ಮಾಪನ ಕೇಂದ್ರ ಆರಂಭಿಸಲಾಗಿದೆ, ಆದರೆ ಸಿಬ್ಬಂದಿಗಳೇ ಇಲ್ಲದಿದ್ದರೆ ಏನು ಪ್ರಯೋಜನ ಎಂದು ಪ್ರಶ್ನಿಸಿದ್ದಾರೆ.

ಸಿಬ್ಬಂದಿಗಳು ಕೇಂದ್ರಕ್ಕೆ ಅಪರೂಪಕೊಮ್ಮೆ ಭೇಟಿ ನೀಡುತ್ತಿದ್ದು, ಸರಿಯಾದ ಮಾಹಿತಿಯನ್ನು ಗ್ರಾಮಸ್ಥರಿಗೆ ನೀಡುತ್ತಿಲ್ಲ. ಕೇವಲ ಕಣ್ಣೊರೆಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿರುವ ಸುರೇಶ್, ಜಿಲ್ಲಾಧಿಕಾರಿಗಳು ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಅಲ್ಲದೆ ಸ್ವತಃ ತಾವೇ ಭೂಕಂಪನ ಪೀಡಿತ ಪ್ರದೇಶಗಳಿಗೆ ತಜ್ಞರೊಂದಿಗೆ ಭೇಟಿ ನೀಡಿ ಜನರೊಂದಿಗೆ ಸಮಾಲೋಚನೆ ನಡೆಸಿ ಧೈರ್ಯ ತುಂಬುವ ಕೆಲಸ ಮಾಡಬೇಕೆಂದು ಒತ್ತಾಯಿಸಿದ್ದಾರೆ.

ಈ ರೀತಿಯ ಗಂಭೀರ ಪರಿಸ್ಥಿತಿಯಲ್ಲಿ ಕೇವಲ ಮೇಲ್ವಿಚಾರಕ ತಂಡವನ್ನು ರಚಿಸಿದರೆ ಸಾಲದು, ಖುದ್ದು ಜಿಲ್ಲಾಧಿಕಾರಿಗಳು ಕೂಡ ಪರಿಶೀಲಿಸಿ ಸಮಗ್ರ ವರದಿಯನ್ನು ಸರಕಾರಕ್ಕೆ ಸಲ್ಲಿಸುವುದು ಸೂಕ್ತವೆಂದು ಸುರೇಶ್ ಅಭಿಪ್ರಾಯಪಟ್ಟಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1620
Coovercolly Indresh

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು